MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಅಂದು BSY, ಇಂದು ಡಿಕೆಶಿ: ಸಿಎಂ ಬದಲಾವಣೆ ಚರ್ಚೆ ನಡುವೆಯೇ ಗುಟ್ಟಾಗಿ ದೇವಾಲಯಕ್ಕೆ ಡಿಸಿಎಂ ಭೇಟಿ

ಅಂದು BSY, ಇಂದು ಡಿಕೆಶಿ: ಸಿಎಂ ಬದಲಾವಣೆ ಚರ್ಚೆ ನಡುವೆಯೇ ಗುಟ್ಟಾಗಿ ದೇವಾಲಯಕ್ಕೆ ಡಿಸಿಎಂ ಭೇಟಿ

DCM DK Shivakumar And Temple Visiting: ಡಿಸಿಎಂ ಡಿಕೆ ಶಿವಕುಮಾರ್ ದೇವಾಲಯಕ್ಕೆ ಖಾಸಗಿ ಭೇಟಿ ನೀಡಿದ್ದಾರೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಸಹ ಸಿಎಂ ಆಗುವ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡಿದ್ದರು. ಸಿಎಂ ಬದಲಾವಣೆ ಚರ್ಚೆ ನಡುವೆ ಡಿಕೆಶಿ ಭೇಟಿ ಕುತೂಹಲ ಮೂಡಿಸಿದೆ.

2 Min read
Author : Mahmad Rafik
Published : Jul 24 2025, 12:12 AM IST
Share this Photo Gallery
  • FB
  • TW
  • Linkdin
  • Whatsapp
16
ರಾಜ್ಯ ರಾಜಕಾರಣದಲ್ಲಿ ಸಂಚಲನ
Image Credit : Asianet News

ರಾಜ್ಯ ರಾಜಕಾರಣದಲ್ಲಿ ಸಂಚಲನ

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಐದು ವರ್ಷಕ್ಕೆ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇತ್ತ ಆಷಾಢ ಶುಕ್ರವಾರದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದ ಡಿಸಿಎಂ ಡಿಕೆ ಶಿವಕುಮಾರ್, ಪ್ರಯತ್ನಗಳಿಗಿಂತ ಪ್ರಾರ್ಥನೆಯಲ್ಲಿ ನಂಬಿಕೆ ಇಟ್ಟಿರೋದಾಗಿ ಹೇಳಿದ್ದರು.

26
ಖಾಸಗಿಯಾಗಿ ಭೇಟಿ
Image Credit : Asianet News

ಖಾಸಗಿಯಾಗಿ ಭೇಟಿ

ಡಿಕೆ ಶಿವಕುಮಾರ್ ಅವರ ಈ ಮಾತುಗಳು ಅಸಮಾಧಾನಾ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಕೇಳಿ ಬಂದಿದ್ದವು. ಈ ಎಲ್ಲಾ ಬೆಳವಣಿಗೆ ನಡುವೆ ಇಂದು ಖಾಸಗಿ ಹಾಸನ ಜಿಲ್ಲೆಯ ದೇವಾಲಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಖಾಸಗಿಯಾಗಿ ಭೇಟಿ ನೀಡಿದ್ದಾರೆ.

Related Articles

Related image1
Now Playing
ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆ; ಅಂತರಂಗ ಕುಸ್ತಿ, ಬಹಿರಂಗ ದೋಸ್ತಿ, ಏನೀ ಬಂಧನ?
Related image2
ಡಿಕೆ ಹೆಸರು ಪ್ರಸ್ತಾಪಕ್ಕೆ ಸಿದ್ದರಾಮಯ್ಯ ನಿರಾಕರಿಸಿದ್ದೇಕೆ?
36
ಯಾವುದು ಈ ದೇವಸ್ಥಾನ? ಎಲ್ಲಿದೆ ಈ ದೇವಸ್ಥಾನ ಗೊತ್ತಾ?
Image Credit : Asianet News

ಯಾವುದು ಈ ದೇವಸ್ಥಾನ? ಎಲ್ಲಿದೆ ಈ ದೇವಸ್ಥಾನ ಗೊತ್ತಾ?

ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪಟ್ಟಕ್ಕೇರುವ ಮುನ್ನ ಈ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಈ ದೇವಸ್ಥಾನಕ್ಕೆ ಯಾವುದೇ ಭದ್ರತೆ ಇಲ್ಲದೇ ಆಗಮಿಸಿದ್ದ ಡಿಕೆ ಶಿವಕುಮಾರ್ ದರ್ಶನ ಪಡೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರೋ ಡಿಕೆ ಶಿವಕುಮಾರ್, ಅಮವಾಸ್ಯೆ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಯಾವುದು ಈ ದೇವಸ್ಥಾನ? ಎಲ್ಲಿದೆ ಈ ದೇವಸ್ಥಾನ ಗೊತ್ತಾ?

46
ನವಿಲೆ‌ ಗ್ರಾಮದಲ್ಲಿರುವ ನಾಗೇಶ್ವರ ದೇವಾಲಯ
Image Credit : Asianet News

ನವಿಲೆ‌ ಗ್ರಾಮದಲ್ಲಿರುವ ನಾಗೇಶ್ವರ ದೇವಾಲಯ

ಹೌದು, ಹಾಸನ ಜಿಲ್ಲೆ‌ ಚನ್ನರಾಯಪಟ್ಟಣ ತಾಲೂಕಿನ ನವಿಲೆ‌ ಗ್ರಾಮದಲ್ಲಿರುವ ನಾಗೇಶ್ವರ ದೇವಾಲಯಕ್ಕಿಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಯಾವುದೇ ಭದ್ರತೆ ಇಲ್ಲದೆ ಖಾಸಗಿ ಕಾರಿನಲ್ಲಿ ಬಂದು ನಾಗದೇವರಿಗೆ ಪೂಜೆ ಸಲ್ಲಿಕೆ ಮಾಡಿ, ನಾಗೇಶ್ವರ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿಎಂ ಬದಲಾವಣೆ ಚರ್ಚೆ ಸಂದರ್ಭದಲ್ಲಿ ಡಿಕೆ ಶಿವವಕುಮಾರ್ ಅವರ ಈ ದೇವಾಲಯ ಭೇಟಿ ಚರ್ಚೆಗೆ ಗ್ರಾಸವಾಗಿದೆ. 

ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗೊ ಮೊದಲು ನವಿಲೆ ನಾಗೇಶ್ವರನ ಆಶೀರ್ವಾದ ಪಡೆದುಕೊಂಡಿದ್ದರು. ಒಂದು ವಾರದ ಹಿಂದೆಯಷ್ಟೇ ದೇವಾಲಯದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿತ್ತು.

56
ಡಿಕೆ ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ
Image Credit : DCM DK Shivakumar FB

ಡಿಕೆ ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ

ಕೆಲ ದಿನಗಳ ಹಿಂದೆ ಮೈಸೂರಿನ ಸಮಾವೇಶದಿಂದ ಡಿಕೆ ಶಿವಕುಮಾರ್ ಅರ್ಧಕ್ಕೆ ಹೊರಟು ಬಂದಿದ್ದರು. ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕೆಲವರು ನೆನಪಿಸಿರೋದು ಅವರು ವೇದಿಕೆಯಲ್ಲಿ ಇಲ್ವಲ್ಲಾ ಎಂದಿದ್ದರು. ಅಚ್ಚರಿ ಎಂಬಂತೆ ಮರುದಿನವೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆಯಾಗಿ ಒಂದೇ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಈ ವೇಳೆ ಮೈಸೂರಿನ ಸಮಾವೇಶದಲ್ಲಿ ನಡೆದ ಬೆಳವಣಿಗೆ ಕುರಿತು ಇಬ್ಬರು ಸ್ಪಷ್ಟನೆ ನೀಡಿದ್ದರು.

66
ಮುಡಾ ಕೇಸ್‌ನಲ್ಲಿ ರಿಲೀಫ್
Image Credit : Siddaramaiah @Fb

ಮುಡಾ ಕೇಸ್‌ನಲ್ಲಿ ರಿಲೀಫ್

ಕಳೆದ ಒಂದು ವರ್ಷದಿಂದ ಮುಡಾ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿತ್ತು. ಪತ್ನಿ ಪಾರ್ವತಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನ ಪಡೆದುಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿತ್ತು. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದ್ದ ವಿಪಕ್ಷಗಳು ಸಿದ್ದರಾಮಯ್ಯರ ರಾಜೀನಾಮೆಗೆ ಆಗ್ರಹಿಸಿದ್ದವು. ಇದೀಗ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮುಡಾ ಪ್ರಕರಣ ಮುಖ್ಯಮಂತ್ರಿ ಪಟ್ಟಕ್ಕೇನೆ ಕಂಟಕದ ಛಾಯೆ ಆವರಿಸುವಂತೆ ಮಾಡಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯ
ಕಾಂಗ್ರೆಸ್
ಹಾಸನ

Latest Videos
Recommended Stories
Recommended image1
ಅಣ್ಣಾಡಿಎಂಕೆ ಗೆದ್ದರೆ ಎಲ್ಲಾ ಫ್ಯಾಮಿಲಿಗೆ ತಲಾ ₹10000
Recommended image2
ಬನಿಯನ್‌ ಪ್ರೊಟೆಸ್ಟ್ : ಯುವ ಕಾಂಗ್ರೆಸ್‌ ಮುಖ್ಯಸ್ಥ ಚಿಬ್‌ ಬಂಧನ
Recommended image3
ಕನಿಷ್ಠ ಐವರಿಗೆ ಮಂತ್ರಿ ಸ್ಥಾನ ನೀಡಲು ಹೈಕಮಾಂಡ್‌ಗೆ ಮನವಿ
Related Stories
Recommended image1
Now Playing
ಬಂಡೆ-ಟಗರು ನಡುವಿನ ಬಂಧದ ಅಸಲಿ ಕಥೆ; ಅಂತರಂಗ ಕುಸ್ತಿ, ಬಹಿರಂಗ ದೋಸ್ತಿ, ಏನೀ ಬಂಧನ?
Recommended image2
ಡಿಕೆ ಹೆಸರು ಪ್ರಸ್ತಾಪಕ್ಕೆ ಸಿದ್ದರಾಮಯ್ಯ ನಿರಾಕರಿಸಿದ್ದೇಕೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved