ವಿಜಯಪುರ: ಜ್ಞಾನ ಯೋಗಾಶ್ರಮಕ್ಕೆ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಪಡ್ನವೀಸ್ ಭೇಟಿ
ವಿಜಯಪುರ(ಏ.26): ವಿಜಯಪುರ ನಗರದ ಜ್ಞಾನ ಯೋಗಾಶ್ರಮಕ್ಕೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಅವರು ಇಂದು(ಬುಧವಾರ) ಭೇಟಿ ನೀಡಿ ಶ್ರೀ ಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿಗಳ ಗದ್ದುಗೆಯ ದರ್ಶನವನ್ನ ಪಡೆದುಕೊಂಡಿದ್ದಾರೆ.

ಲಿಂಗೈಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನ ಯೋಗಾಶ್ರಮದ ಆವರಣದಲ್ಲಿರುವ ಶ್ರೀ ಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿಗಳ ಗದ್ದುಗೆಯ ದರ್ಶನವನ್ನ ಪಡೆದುಕೊಂಡಿದ್ದಾರೆ ದೇವೇಂದ್ರ ಪಡ್ನವೀಸ್.
ಶ್ರೀ ಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿಗಳು ಲಿಂಗೈಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾಗಿದ್ದರು. ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಕರ್ಪೂರದ ಆರತಿ ಬೆಳಗಿದ ಮಹಾರಾಷ್ಟ್ರದ ಡಿಸಿಎಂ ದೇವೇಂದ್ರ ಪಡ್ನವೀಸ್.
ಇದೇ ಸಂದರ್ಭದಲ್ಲಿ ಆಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಅವರು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಪಡ್ನವೀಸ್ ಅವರಿಗೆ ಸನ್ಮಾನಿಸಿದ್ದಾರೆ. ಸಿದ್ಧೇಶ್ವರ ಸ್ವಾಮೀಜಿಗಳ ವಿರಚಿತ ಗ್ರಂಥಗಳನ್ನು ನೀಡಿ ಗೌರವಿಸಲಾಗಿದೆ. ನಂತರ ಮಲ್ಲಿಕಾರ್ಜುನ ಸ್ವಾಮೀಜಿಗಳ ಗದ್ದುಗೆಗೆ ಪ್ರದಕ್ಷಿಣೆ ಹಾಕಿ ಗೌರವ ಸಲ್ಲಿಸಿದ ದೇವೇಂದ್ರ ಪಡ್ನವೀಸ್.
ಆಶ್ರಮದ ಆವರಣದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ತಂಗುತ್ತಿದ್ದ ಕೊಠಡಿ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಕ್ರಿಯೆ ನಡೆಸಿದ ಸ್ಥಳ ವೀಕ್ಷಣೆ ನಡೆಸಿದ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಪಡ್ನವೀಸ್.
ಬಳಿಕ ಜ್ಞಾನ ಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿಗಳ ಜೊತೆ ದೇವೇಂದ್ರ ಪಡ್ನವೀಸ್ ಚರ್ಚೆ ನಡೆಸಿದ್ದಾರೆ. ಬಳಿಕ ಅಲ್ಲಿಂದ ದೇವೇಂದ್ರ ಪಡ್ನವೀಸ್ ಅವರು ನಗರದ ಸಿದ್ದೇಶ್ವರ ದೇವಸ್ಥಾನದತ್ತ ತೆರಳಿದ್ದಾರೆ. ದೇವೇಂದ್ರ ಪಡ್ನವೀಸ್ ಅವರಿಗೆ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್. ಎಸ್. ಪಾಟೀಲ್ ಕೂಚಬಾಳ ಹಾಗೂ ಇನ್ನಿತರ ಮುಖಂಡರು ಸಾಥ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.