RR ನಗರ ಬೈಎಲೆಕ್ಷನ್: ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಿ.ಕೆ.ರವಿ ಪತ್ನಿ ಕುಸುಮಾ
ಬೆಂಗಳೂರು(ಅ.01): ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಈಗಾಗಲೇ ಏರತೊಡಗಿದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ಗೆ ಆರ್.ಆರ್. ನಗರದ ಉಪಚುನಾವಣೆ ಅಖಾಡ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ದಿ. ಐಎಎಸ್ ಅಧಿಕಾರಿ ಡಿ.ಕೆ.ರವಿ ಪತ್ನಿ ಹಾಗೂ ಕಾಂಗ್ರೆಸ್ ನಾಯಕ ಹನುಮಂತರಾಯಪ್ಪ ಪುತ್ರಿ ಎಚ್.ಕುಸುಮಾ ಅವರನ್ನ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಉಪಚುನಾವಣೆ ಇರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಕುಸುಮಾ
ನಿರ್ಮಲಾನಂದ ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡ ಕುಸುಮಾ
ತಂದೆ ಹನುಮಂತರಾಯಪ್ಪ ಜೊತೆ ಶ್ರೀಗಳನ್ನ ಭೇಟಿ ಮಾಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕುಸುಮಾ
ದಿವಂಗತ ಐಎಎಸ್ ಅಧಿಕಾರಿ ದಿ. ಡಿ.ಕೆ.ರವಿ ಅವರ ಪತ್ನಿ ಕುಸುಮಾ
ಆರ್. ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಸ್ಪರ್ಧಿಸಲು ಮುಂದಾದ ಡಿ.ಕೆ.ರವಿ ಅವರ ಪತ್ನಿ ಕುಸುಮಾ
ಮುನಿರತ್ನ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ. ಹೀಗಾಗಿ ಈ ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ.