ಪ್ರಮಾಣವಚನಕ್ಕೂ ಮುನ್ನ BS ಯಡಿಯೂರಪ್ಪ, HD ದೇವೇಗೌಡರನ್ನು ಭೇಟಿಯಾದ ಡಿಕೆ ಶಿವಕುಮಾರ್
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ, ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದರು.

ಡಿಕೆ ಶಿವಕುಮಾರ್
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿಗಳಾದ ಹೆಚ್‌ಡಿ ದೇವೇಗೌಡರನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆಯಿಂದಲೇ ರಾಜ್ಯದ ಪ್ರಮುಖ ಗಣ್ಯರ ನಿವಾಸಕ್ಕೆ ಡಿಕೆ ಶಿವಕುಮಾರ್ ತೆರಳುತ್ತಿದ್ದಾರೆ.
ಯಡಿಯೂರಪ್ಪ ಭೇಟಿ
ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಡಿಕೆ ಶಿವಕುಮಾರ್ ಭೇಟಿಯಾದರು. ಯಡಿಯೂರಪ್ಪ ನಿವಾಸಕ್ಕೆ ಬಂದು ದೇವರಕೋಣೆಗೆ ತೆರಳಿದ ಡಿಕೆ ಶಿವಕುಮಾರ್, ದೇವರಿಗೆ ನಮಸ್ಕರಿಸಿದರು. ನೂತನ ಮುಖ್ಯಮಂತ್ರಿಗಳಿಗೆ ಯಡಿಯೂರಪ್ಪನವರು ಶುಭ ಹಾರೈಸಿದರು.
ಹೆಚ್‌ಡಿ ದೇವೇಗೌಡರ ಆಶೀರ್ವಾದ
ಯಡಿಯೂರಪ್ಪ ನಿವಾಸದಿಂದ ನೇರವಾಗಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ನಿವಾಸಕ್ಕೆ ತೆರಳಿದರು. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ನಾನು ಬರುತ್ತೇನೆ ಎಂದು ಗೌಡರು ಡಯಾಲಿಸಿಸ್ ಮುಂದೂಡಿದ್ದರು ಎಂದು ಡಿಕೆ ಶಿವಕುಮಾರ್ ಹೇಳಿದ್ದರು.
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಡಿಕೆ ಶಿವಕುಮಾರ್
ಇದಕ್ಕೂ ಮುನ್ನ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಮತ್ತೊಂದೆಡೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಿರುವ ಹಿನ್ನೆಲೆ ರಾಮನಗರ ಜಿಲ್ಲೆಯಲ್ಲಿ ಸಂಭ್ರಮ ಮನೆ ಮಾಡಿದೆ. ಡಿಕೆ ಶಿವಕುಮಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಪ್ರಮಾಣವಚನ ವೀಕ್ಷಣೆಗೆ ನಗರದ ಹೃದಯಭಾಗದಲ್ಲಿ ಬೃಹತ್ ಪರದೆಯನ್ನು ಅಳವಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

