- Home
- News
- Politics
- DK Suresh Meets Zameer: ವೈರಲ್ ಆಡಿಯೋ ಬೆನ್ನಲ್ಲೇ ಜಮೀರ್ ನಿವಾಸಕ್ಕೆ ಡಿಕೆ ಸುರೇಶ್ ದಿಢೀರ್ ಭೇಟಿ!
DK Suresh Meets Zameer: ವೈರಲ್ ಆಡಿಯೋ ಬೆನ್ನಲ್ಲೇ ಜಮೀರ್ ನಿವಾಸಕ್ಕೆ ಡಿಕೆ ಸುರೇಶ್ ದಿಢೀರ್ ಭೇಟಿ!
ಸಂಪುಟ ರಚನೆ ಹೊತ್ತಲ್ಲಿ ಜಮೀರ್ ಅವರ ವಿರುದ್ಧದ ವೈರಲ್ ಆಡಿಯೋ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ ಈ ನಡುವೆ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಜಮೀರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ದಿಢೀರ್ ಭೇಟಿ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ವೈರಲ್ ಆಡಿಯೋ ಬೆನ್ನಲ್ಲೇ ಜಮೀರ್ ನಿವಾಸಕ್ಕೆ ಡಿಕೆ ಸುರೇಶ್ ಭೇಟಿ!
ಜಮೀರ್ ಅಹಮದ್(Zameer ahmed khan) ವಿರುದ್ಧದ ಆಡಿಯೋ(Audio viral) ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಡಿಕೆ ಸುರೇಶ್(DK Suresh) ಅವರು ಜಮೀರ್ ಅಹಮದ್ ಅವರ ನಿವಾಸಕ್ಕೆ ತೆರಳಿ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ದಾವಣಗೆರೆ ಉಪಚುನಾವಣೆ ಸಂದರ್ಭಕ್ಕೆ ಸಂಬಂಧಿಸಿದೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣ(Social media)ಗಳಲ್ಲಿ ವೈರಲ್ ಆಗಿ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಈ ಎಲ್ಲ ಬೆಳವಣಿಗೆಗಳ ನಡುವೆ ದಿಢೀರ್ ಡಿಕೆ ಸುರೇಶ್ ಅವರ ಭೇಟಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಆಡಿಯೋ ವಿವಾದಿಂದ ದೆಹಲಿಗೆ ತೆರಳದ ಜಮೀರ್:
ಅಂದುಕೊಂಡಂತೆ ಆಗಿದ್ದರೆ ಇವತ್ತು ಜಮೀರ್ ದೆಹಲಿಗೆ ಹೊರಡಬೇಕಿತ್ತು. ಆದರೆ ಇದರ ಮಧ್ಯೆಯೇ ಆಡಿಯೋ ವೈರಲ್ ಆಗಿದ್ದು ಇದರಿಂದ ಹೈಕಮಾಂಡ್ ಮಟ್ಟದಲ್ಲಿ ಆಗುವ ಮುಜುಗರ ತಪ್ಪಿಸಲು ದೆಹಲಿಗೆ ತೆರಳದೇ ಬೆಂಗಳೂರಿನ ನಿವಾಸದಲ್ಲೇ ಉಳಿದಿರುವ ಜಮೀರ್ ಅಹಮದ್, ತಮ್ಮ ಸರ್ಕಾರಿ ನಿವಾಸದಲ್ಲಿ ಡಿಕೆ ಸುರೇಶ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ಏನೆಲ್ಲ ವಿಚಾರಗಳು ಚರ್ಚೆಯಾಗಿವೆ ಎಂಬುದು ಬಹಿರಂಗವಾಗಿಲ್ಲ. ಆದರೆ ವಿವಾದದ ಹೊತ್ತಲ್ಲೇ ನಡೆದ ಈ ಭೇಟಿ ಕಾಂಗ್ರೆಸ್ ಪಾಳಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರಗಳಿಗೆ ಕಾರಣದೆ.
ಏನಿದು ಆಡಿಯೋ ವೈರಲ್ ವಿವಾದ?
ಉಪಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ವಿರುದ್ಧ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪ ಕೇಳಿ ಬಂದಿದೆ ಇದಕ್ಕೆ ಪೂರಕವಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddarammaiah) ಅವರು ಸಂಪುಟ ರಚನೆ ಕುರಿತು ಚರ್ಚಿಸಲು ದೆಹಲಿಗೆ ತೆರಳುವ ಕೆಲವೇ ನಿಮಿಷಗಳ ಹಿಂದೆ ಈ ಆಡಿಯೋ ಹೊರಗೆ ಬಂದಿರುವುದು ತೀವ್ರ ಚರ್ಚೆ ಹುಟ್ಟುಹಾಕಿದೆ.
ದಾವಣಗೆರೆ ಕಾಂಗ್ರೆಸ್ ಮುಖಂಡ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್ನಲಾದ ಮೊಹಮ್ಮದ್ ಸಿರಾಜ್ ಜತೆ ಜಮೀರ್ ಅಹ್ಮದ್ ಮಾತನಾಡಿದ್ದಾರೆ ಎಂಬ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಜಮೀರ್-ಸಿರಾಜ್ ನಡುವಿನ ಆಡಿಯೋದಲ್ಲೇನಿದೆ?
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬದಲು ಎಸ್‌ಡಿಪಿಐ ಅಭ್ಯರ್ಥಿ ಗೆಲ್ಲುವಂತೆ ಮಾಡಲು ಜಮೀರ್ ಅಹ್ಮದ್ ಅವರು ಸಿರಾಜ್‌ಗೆ ಸೂಚನೆ ನೀಡಿದ್ದರು ಎಂದು ಹೇಳಲಾಗಿದೆ.
ಜಮೀರ್ ಅವರು, ‘ಮುಸ್ಲಿಂ ವೋಟಿಂಗ್ ಕಡಿಮೆ ಆಗಬೇಕು. ಮುಸ್ಲಿಮರು ಹೊರಗಡೆ ಬಂದರೆ ಕಾಂಗ್ರೆಸ್‌ಗೆ ಮತ ಹಾಕುತ್ತಾರೆ. ಆದಷ್ಟೂ ಮನೆಗಳಿಂದ ಹೊರ ಬಾರದಂತೆ ನೋಡಿಕೊಳ್ಳಬೇಕು. ಹೊರಗೆ ಬಂದರೆ ಕುಕ್ಕರ್ (ಎಸ್‌ಡಿಪಿಐ ಅಭ್ಯರ್ಥಿ ಗುರುತು) ಅಥವಾ ಪಕ್ಷೇತರ ಅಭ್ಯರ್ಥಿಗೆ ಮತ ಹಾಕುವಂತೆ ಸೂಚಿಸಬೇಕು’ ಎಂದಿರುವುದಾಗಿ ಆಡಿಯೋದಲ್ಲಿದೆ.
ಆಡಿಯೋ ರಾಜಕೀಯ ಪ್ರೇರಿತ ಎಂದ ಜಮೀರ್
ರಾಜ್ಯದ ಕೆಲ ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ ಹಾಗೂ ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ. ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು. ಆಡಿಯೋವನ್ನು ತನಿಖೆಗೆ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

