ಆರೋಗ್ಯ ಸುಧಾರಣೆಯಾದ ಬಳಿಕ ರಾಜರಾಜೇಶ್ವರಿ ದೇಗುಲಕ್ಕೆ ಎಚ್‌ಡಿಕೆ ಭೇಟಿ: ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಕೆ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು (ಸೆ.15): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ತಾಯಿ ಚೆನ್ನಮ್ಮ, ಪತ್ನಿ ಅನಿತಾ ಕುಮಾರಸ್ವಾಮಿ ಜತೆ ರಾಜರಾಜೇಶ್ವರಿ ದೇವಿಗೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಆರೋಗ್ಯ ಸುಧಾರಣೆ ಆದ ಬಳಿಕ ಎಚ್.ಡಿ.ಕುಮಾರಸ್ವಾಮಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಅವರ ಟೆಂಪಲ್ ರನ್ ಮುಂದುವರೆದಿದೆ.
ಕಾಂಗ್ರೆಸ್ ಪಕ್ಷವು ರಾಜ್ಯವನ್ನು ಕೊಳ್ಳೆ ಹೊಡೆಯುವುದನ್ನು ತಪ್ಪಿಸಲು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಮೈತ್ರಿಯಾಗಿವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದೊಳಗೆ 28ಕ್ಕೆ 28 ಸೀಟುಗಳನ್ನು ಮೈತ್ರಿ ಪಕ್ಷ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಸಿದ್ದರಾಮಯ್ಯ 2004ರಲ್ಲಿ ನಾನು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಯಾವ್ಯಾವ ಬಿಜೆಪಿ ನಾಯಕನ ಸಂಪರ್ಕ ಮಾಡಿದ್ದಾರೆ ಎನ್ನುವುದೂ ಗೊತ್ತಿದೆ. ಸಿದ್ದರಾಮಯ್ಯ, ಮಹಾದೇವಪ್ಪ, ಸತೀಶ್ ಜಾರಕಿಹೊಳಿ ಸೇರಿ ಯಡಿಯೂರಪ್ಪ ಮಂತ್ರಿಮಂಡಲದಲ್ಲಿ ಸಚಿವರಾಗಲು ಹೋಗಿದ್ದವರು ಎಂದು ಹೇಳಿದರು.