ಕರ್ನಾಟಕದ ನೂತನ ಸಿಎಂ: ಸಿದ್ದು ಫೋಟೋಗೆ ಕ್ಷೀರಾಭಿಷೇಕ, ಅಭಿಮಾನಿಗಳ ಸಂಭ್ರಮಾಚರಣೆ..!
ಚಿತ್ರಕೃಪೆ: ವೀರಮಣಿ, ಕನ್ನಡಪ್ರಭಬೆಂಗಳೂರು(ಮೇ.18): ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೊಸ ಸಿಎಂ ಆಯ್ಕೆಗಾಗಿ ಭಾರೀ ಕಸರತ್ತು ನಡೆದಿತ್ತು. ಆದರೆ, ಹೈಕಮಾಂಡ್ ಕೊನೆಗೂ ಸಿದ್ದರಾಮಯ್ಯ ಅವರನ್ನ ಸಿಎಂ ಆಗಿ ಘೋಷಿಸಿದೆ. ಹೀಗಾಗಿ ಸಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸ ಎದುರು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿ, ನೆಚ್ಚಿನ ನಾಯಕನ ಫೋಟೋಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಅವರ ನಿವಾಸದ ಎದುರು ಪಟಾಟಿ ಸಿಡಿಸಿ ಕುಣಿದು ಕುಪ್ಪಳಿಸಿದ್ದಾರೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಿದ್ದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ನೆರೆದ ಅಭಿಮಾನಿಗಳು ಪರಸ್ಪರ ಸಿಹಿ ಹಂಚುವ ಮೂಲಕ ಸಿದ್ದರಾಮಯ್ಯ ಪರ ಘೋಷಣೆಗಳನ್ನ ಕೂಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಿದ್ದು ನಿವಾಸದ ಸುತ್ತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಸಿದ್ದು ಅವರ ಫೋಟೋಗಳನ್ನ ಹಿಡಿದ ಅಭಿಮಾನಿಗಳು ಸಿದ್ದು ಪರ ಘೋಷಣೆಗಳನ್ನ ಕೂಗುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ನಡೆಸಿ ಸಿಎಂ ಕುರ್ಚಿಗಾಗಿ ನಡೆದ ಪ್ರಹಸನದಲ್ಲಿ ಸಿಎಂ ಗಾದಿ ಏರುವಲ್ಲಿ ಸಿದ್ದರಾಮಯ್ಯ ಅವರು ಸಫಲರಾಗಿದ್ದಾರೆ.
ಮೇ.20 ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.