ಬೆಳಗಾವಿ ಬೈ ಎಲೆಕ್ಷನ್: ಮಂಗಳಾ ಅಂಗಡಿಗೆ ಬಿಜೆಪಿ ಟಿಕೆಟ್ ಕೊಡುವುದಕ್ಕೆ 5 ಕಾರಣಗಳು
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ-ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನ ಘೋಷಿಸಿದ್ದು, ದಿ.ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ನೀಡಿದೆ. ಪ್ರಬಲ ನಾಯಕರು ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಸಿದ್ದರೂ. ಅದರಲ್ಲೂ ಸುರೇಶ್ ಅಂಗಡಿ ಅವರ ಪುತ್ರಿ ಹಾಗೂ ಜಗದೀಶ್ ಶೆಟ್ಟರ್ ಅವರ ಸೊಸೆ ಶ್ರದ್ಧಾ ಅವರನ್ನು ಕಣಕ್ಕಿಳಿಸಲು ಪ್ಲಾನ್ ನಡೆದಿತ್ತು. ಆದ್ರೆ, ಅಂತಿಮವಾಗಿ ಸುರೇಶ್ ಅಂಗಡಿ ಪತ್ನಿ ಅವರಿಗೆ ಅದೃಷ್ಟ ಒಲಿದಿದೆ. ಅಷ್ಟಕ್ಕೂ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ನೀಡಲು ಕಾರಣವೇನು? ಇಲ್ಲಿವೆ ನೋಡಿ..

ಕಾರಣ 1: ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಪ್ರಕರಣ ದೊಡ್ಡಮಟ್ಟದಲ್ಲಿ ಸಂಚನ ಮೂಡಿಸಿದ್ದು, ಇದು ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್ ಮೇಲೆ ಪರಿಣಾಮ ಬೀರುತ್ತೆ. ಮಂಗಳಾ ಸುರೇಶ್ ಅಂಗಡಿ ಅವರನ್ನ ಆಯ್ಕೆ ಮಾಡಿದ್ರೆ, ಸಿ.ಡಿ. ವಿಚಾರ ಪ್ರಸ್ತಾಪಕ್ಕೆ ಬರುವುದಿಲ್ಲ ಎನ್ನುವ ಲೆಕ್ಕಾಚಾರ.

ಕಾರಣ 2: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಅಜಾತಶತ್ರುವಾಗಿದ್ರು. ಅವರ ನಿಧನದಿಂದ ಕ್ಷೇತ್ರ ತೆರವಾಗಿದೆ. ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಕುಟುಂಬದ ಮೇಲೆ ಅನುಕಂಪವಿದೆ. ಈ ನಿಟ್ಟಿನಲ್ಲಿ ಅನುಕಂಪವನ್ನು ಉಳಿಸಿಕೊಳ್ಳಲು ಅಂಗಡಿ ಕುಟುಂಬಕ್ಕೆ ಮಣೆ ಹಾಕಿದ್ರೆ, ಗೆಲುವು ಸುಲಭವಾಗಲಿದೆ ಎಂಬುದು ಒಂದು ಕಾರಣ.

ಕಾರಣ 3: ಬೇರೆಯವರಿಗೆ ಕೊಟ್ಟರೇ ಇತರೆ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನಕ್ಕೆ ಕಾರಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಪಕ್ಷದಲ್ಲಿ ಆಂತರಿಕವಾಗಿ ಯಾವುದೇ ಗೊಂದಲ ಇರುವುದಿಲ್ಲ.

ಕಾರಣ 4: ಮಂಗಳಾ ಅಂಗಡಿಗೆ ಟಿಕೆಟ್ ಕೊಟ್ಟರೆ, ಗೆಲುವು ನಿರಾಯಾಸವಾಗಿ ಸಿಗಲಿದೆ ಎಂಬುದು ಬಿಜೆಪಿ ಹೈಕಮಾಂಡ್ ನಾಯಕರ ಲೆಕ್ಕಾಚಾರ ಎನ್ನಲಾಗಿದೆ.

ಕಾರಣ 3: ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೊಟ್ಟರೆ, ಸಿ.ಡಿ. ಆರೋಪದ ಬಗ್ಗೆ ಉಪ-ಚುನಾವಣೆಯ ಆಖಾಡದಲ್ಲಿ ಚರ್ಚೆ ಮಾಡುವ ಅಗತ್ಯವೇ ಇರುವುದಿಲ್ಲ. ಯಾಕಂದ್ರೆ ಸಿ.ಡಿ. ವಿಚಾರ ಚರ್ಚೆಗೆ ಬರುವುದಿಲ್ಲ. ಆ ವಿಚಾರ ಮಂಗಳಾ ಅಂಗಡಿ ಅವರ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಕಾಂಗ್ರೆಸ್ ಒಂದು ವೇಳೆ ಸಿ.ಡಿ. ವಿಚಾರವನ್ನು ಪ್ರಸ್ತಾಪ ಮಾಡಿದ್ದೇ ಅದ್ರೆ, ಅದು ಕಾಂಗ್ರೆಸ್‌ಗೆ ತಿರುಗು ಬಾಣವಾಗುತ್ತದೆ. ಏಕೆಂದರೆ, ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಕೇಳಿ ಬಂದಿದ್ದು, ಅವರ ಸಹೋದರ ಸತೀಶ್ ಜಾರಕಿಹೊಳಿ ಉಪ-ಚುನಾವಣೆಯ ಆಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.