ಡಿಕೆಶಿ ನಿವಾಸಕ್ಕೆ ನಾಯಕರು ದೌಡು, ಇದ್ರಲ್ಲಿ ಅನರ್ಹ ಶಾಸಕ ಪ್ರತ್ಯಕ್ಷ

First Published 29, Oct 2019, 7:41 PM

ಹವಾಲಾ ಹಣ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರಗಡೆ ಬಂದಿರುವ ಡಿಕೆ ಶಿವಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭೇಟಿಯಾಗಿ ಕುಶಲೋಪ ವಿಚಾರಿಸುತ್ತಿದ್ದಾರೆ. ಮೊನ್ನೇ ಮಾಜಿ ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಭೇಟಿ ಮಾಡಿದ ಬಳಿಕ ಇಂದು [ಮಂಗಳವಾರ] ಒಂದೇ ದಿನಕ್ಕೆ ಪ್ರಮುಖ ನಾಯಕರುಗಳು ಡಿಕೆಶಿ ನಿವಾಸಕ್ಕೆ ದೌಡಾಯಿಸಿದ್ದಾರೆ. ಹಾಗಾದ್ರೆ ಯಾರೆಲ್ಲ ಆಮಿಸಿದ್ದಾರೆ ಎನ್ನುವುದನ್ನು ಚಿತ್ರಗಳಲ್ಲಿ ನೋಡಿ.

ಮಾಜಿ ಸಚಿವೆ ರಾಣಿ ಸತೀಶ್ ಅವರು ಹೂಗುಚ್ಛದೊಂದಿಗೆ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.

ಆಳ್ವಾ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಹಾಗೂ ಮಾಜಿ ರಾಜ್ಯಪಾಲೆ ಮಾರ್ಗರೇಟ್‌ ಆಳ್ವಾ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಭೇಟಿ ನೀಡಿದ್ದು, ಸ್ವಲ್ಪ ಹೊತ್ತು ಮಾತುಕತೆ ನಡೆಸಿ ಅಲ್ಲಿಂದ ತೆರಳಿದರು.

ಕಾಂಗ್ರೆಸ್ ನ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಅವರು ಡಿಕೆಶಿ ಅವರನ್ನು ಕಂಡು ಆರೋಗ್ಯ ವಿಚಾರಿಸಿದರು. ಜತೆಗೆ ಪ್ರಸ್ತುತ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮತ್ತೊಂದು ಪ್ರಮುಖ ಅಂಶ ಅಂದ್ರೆ ಪಾಟೀಲ್ ವಿರೋಧ ಪಕ್ಷ ಸ್ಥಾನಕ್ಕಾಗಿ ಸಿದ್ದರಾಮಯ್ಯ ಅವರಿಗೆ ಪೈಪೋಟಿ ನೀಡಿದ್ದರು.

ಬೆಂಗಳೂರಿನ ಬಿಟಿಎಂ ಲೇಔಟ್ ನ ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗರೆಡ್ಡಿ ಅವರು ಸದಾಶಿವನಗರದಲ್ಲಿರುವ ಡಿಕೆಶಿ ಮನೆಗೆ ತೆರಳಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟರು.

ಮಾಜಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಹಾಗೂ ಕಾಂಗ್ರೆಸ್ ನಾಯಕಿಯಾಗಿರುವ ಮೋಟಮ್ಮ ಅವರು ಸಹ ತಮ್ಮ ಪಕ್ಷದ ಟ್ರಬಲ್ ಶೂಟರ್ ಅನ್ನು ಭೇಟಿ ಮಾಡಿದರು.

ಕಾಂಗ್ರೆಸ್ ನಾಯಕ ಮತ್ತು ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ ಸಹ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಮತ್ತೋರ್ವ ಕಾಂಗ್ರೆಸ್‌ನ ಹಿರಿಯ ನಾಯಕ, ಹಾಲಿ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಕೂಡ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಕ್ಕೆ ಭೇಟಿ ಮಾಡಿ ಕುಶಲೋಪಾರಿ ಮಾತುಗಳನ್ನಾಡಿ ಬಂದರು.

ಜೈಲಿನಿಂದ ಹೊರಗಡೆ ಬಂದಿರುವ ಡಿಕೆ ಶಿವಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭೇಟಿಯಾಗಿ ಕುಶಲೋಪ ವಿಚಾರಿಸಿದರು. ಆದ್ರೆ ಪ್ರಮುಖವಾಗಿ ಜೆಡಿಎಸ್ ಕೆ.ಆರ್.ಪೇಟೆಯ ಆನರ್ಹ ಶಾಸಕ ನಾರಾಯಣಗೌಡ ಸಹ ಡಿಕೆಶಿ ನಿವಾಸಕ್ಕೆ ಭೇಟಿ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದಂಪತಿ ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಸೋಮವಾರ ರಾತ್ರಿ ಭೇಟಿ ನೀಡಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

loader