MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕಾಂಗ್ರೆಸ್‌ನಿಂದ ವಿಡಂಬನಾತ್ಮಕ ಪ್ರೇಮಿಗಳ ದಿನಾಚರಣೆ: ಸಿಎಂ, ಸಚಿವರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ

ಕಾಂಗ್ರೆಸ್‌ನಿಂದ ವಿಡಂಬನಾತ್ಮಕ ಪ್ರೇಮಿಗಳ ದಿನಾಚರಣೆ: ಸಿಎಂ, ಸಚಿವರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ

ಬೆಂಗಳೂರು (ಫೆ.14): ಜಗತ್ತಿನೆಲ್ಲೆಡೆ ಪ್ರೇಮಿಗಳ ದಿನಾಚರಣೆಯ ಸಂಭ್ರಮ ಮತ್ತು ಸಡಗರವನ್ನು ಮಾಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಹೆಚ್ಚಾಗಿದ್ದು, ಪ್ರೇಮಿಗಳ ದಿನಾಚರಣೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ವಿಡಂಬನಾತ್ಮಕವಾಗಿ ಆಚರಣೆ ಮಾಡುತ್ತಿದೆ. ಈ ಮೂಲಕ ಆಡಳಿತ ಪಕ್ಷದ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಹಲವು ಸಚಿವರು ಮತ್ತು ಶಾಸಕರನ್ನು ಒಳಗೊಂಡ ಕಾರ್ಟೂನ್‌ ಭಾವಚಿತ್ರಗಳನ್ನು ಹಾಕಲಾಗಿದೆ. ಅದೊಂದಿಗೆ ಕೆಲವು ಹೇಳಿಕೆಗಳನ್ನು ನೀಡಲಾಗಿದ್ದು, ಈ ಮೂಲಕ ಆಡಳಿತ ಪಕ್ಷದವರನ್ನು ಟೀಕೆ ಮಾಡಲಾಗಿದೆ.

2 Min read
Sathish Kumar KH
Published : Feb 14 2023, 05:28 PM IST
Share this Photo Gallery
  • FB
  • TW
  • Linkdin
  • Whatsapp
112

ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!  ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ.....!! 

212

ಬಿಜೆಪಿಗರದ್ದು ಗೋ ಪ್ರೀತಿಯಲ್ಲ, Go (ಆಕಳು) ಪ್ರೀತಿ!! ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ!

312

ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು,
◆ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು.
◆ಸಿಎಂ ಮನೆಗೆ ಕಲ್ಲು ಹೊಡೆಯುವುದು.
◆ರೈತರಿಗೆ ಅವಮಾನಿಸುವುದು. 
ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ!

412

ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ! ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು!

512

"ಪ್ರೀತಿ ಮಧುರ, ತ್ಯಾಗ ಅಮರ" ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ!!

612

ಒಂದು ಮುತ್ತಿನ ಕತೆಯಲ್ಲಿ ಪ್ರೇಮಿಗೆ ಜಯ ಸಿಗಲಿಲ್ಲ! "ಸಚಿವ ಹುದ್ದೆ" ಎಂಬ ಪ್ರೇಮ ವೈಫಲ್ಯದಿಂದ ಭಗ್ನಪ್ರೇಮಿಯಾಗಿ ತಿರುಗುತ್ತಿರುವವರ ನೋವು ಜಗತ್ತಿನ ಕಣ್ಣಿಗೆ ಕಾಣುವುದಿಲ್ಲ!

712

ಪ್ರೀತಿಯ ಪಯಣದ ಹಾದಿಯಲ್ಲಿ ಕೇವಲ ಕಲ್ಲು ಮುಳ್ಳುಗಳಷ್ಟೇ ಇರುವುದಿಲ್ಲ.. ರಸ್ತೆ ಗುಂಡಿಗಳು, ಕಿತ್ತು ಹೋದ ಡಾಂಬರು ಕೂಡ ಇರುತ್ತವೆ! ಏಕೆಂದರೆ ಅದು - #40PercentLove !!

812

ಈ ಸ್ಪೆಷಲ್ ಡಾಕ್ಟರ್‌ಗೆ ಹೃದಯ ಬಡಿತವೂ ತಿಳಿಯುತ್ತದೆ. ಲೂಟಿ ಹೊಡೆತವೂ ತಿಳಿದಿದೆ! ಈ ಡಾಕ್ಟರ್‌ಗೂ ಲವ್ವಾಗಿದೆ - PSI ಹುದ್ದೆಗಳ ಮೇಲೆ!

912

ಪ್ರೇಮದಲ್ಲಿ ಮುಳುಗಿದವರು ಸದಾ ಕಲ್ಪನಾಲೋಕದಲ್ಲಿ ವಿಹರಿಸುತ್ತಿರುತ್ತಾರೆ. ಮತ್ತು ಆ ಭ್ರಮೆಗಳನ್ನೇ ವಾಸ್ತವ ಎಂದು ತಿಳಿದುಕೊಂಡಿರುತ್ತಾರೆ. ಇದು ಪ್ರೇಮದ ಮೊದಲ ಹಂತ!

1012

ಪ್ರೇಮವಿರುವ ಕಡೆ ದ್ವೇಷಕ್ಕೆ ಜಾಗವಿಲ್ಲ.. ಆದರೆ ದ್ವೇಷವನ್ನೇ ಪ್ರೇಮಿಸಿದರೆ....!? ದ್ವೇಷವನ್ನೇ ಪ್ರೀತಿಸಿ, ದ್ವೇಷವನ್ನೇ ಧ್ಯಾನಿಸಿ, ದ್ವೇಷದೊಂದಿಗೆ ರೊಮ್ಯಾನ್ಸ್ ಮಾಡುವ ವಿಶಿಷ್ಠ ಪ್ರೇಮಿ ಇವರು!!

1112

"ಸರಸ ಸಲ್ಲಾಪದ ಸಿಡಿಗಳು" ಬಿಜೆಪಿಗರ 'ಸಿಡಿ ಸಂಭ್ರಮ'ದ ಎಪಿಸೋಡ್‌ಗಳು ನೂರಾರಿವೆಯಂತೆ. ಯತ್ನಾಳರು ಹೇಳುವ ಸಿಡಿ ಸಿಡಿಯುವುದು ಯಾವಾಗ?

1212

ಕನಸಲ್ಲೂ ನೀನೇ, ಮನಸಲ್ಲೂ ನೀನೇ, ಉಸಿರಲ್ಲೂ ನೀನೇ, ಹೆಸರಲ್ಲೂ ನೀನೇ.. ಹೃದಯದ "ಆಕ್ಸಿಜನ್"! ಕಮಿಷನ್ ಕೊಡಿಸುವ, ಖಜಾನೆ ತುಂಬುವ "ಆಕ್ಸಿಜನ್" ಎಂದರೆ ಇವರಿಗೆ ಅದಮ್ಯ ಪ್ರೇಮ!!

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved