ಬೆಳಗಾವಿಗೆ ಜಗದೀಶ್ ಶೆಟ್ಟರ್ ಹೆಸರೇ ಮುಂಚೂಣಿಯಲ್ಲಿದೆ: ಪ್ರಲ್ಹಾದ್ ಜೋಶಿ
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೆಸರೇ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.

ಹುಬ್ಬಳ್ಳಿ (ಮಾ.18): ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೆಸರೇ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಶೆಟ್ಟರ ಅವರೊಂದಿಗೆ ಚರ್ಚಿಸಿದ್ದು, ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿಗೆ ನೀಡಿದ್ದಾರೆ.
ವರಿಷ್ಠರೂ ಇದನ್ನೇ ಹೇಳಿದ್ದಾರೆ. ನನಗೆ ಗೊತ್ತಿರುವಂತೆ ಶೆಟ್ಟರ ಹೆಸರೇ ಮುಂಚೂಣಿಯಲ್ಲಿದೆ. ಈ ಕುರಿತು ರಾಷ್ಟ್ರೀಯ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಬಂಡಾಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈಶ್ವರಪ್ಪ ಅವರಿಗೆ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ಸಿಗಲಿಲ್ಲ ಎಂಬ ಕೋಪವಿದೆ. ಚುನಾವಣೆಗೆ ಇನ್ನೂ 40 ದಿನಗಳಿವೆ.
ನಾಮಪತ್ರ ಸಲ್ಲಿಸಲು 20 ದಿನ ಬಾಕಿಯಿದೆ. ಅಷ್ಟರಲ್ಲಿ ನಾವೆಲ್ಲ ಕೂಡಿ ಸರಿ ಮಾಡುತ್ತೇವೆ. ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಿಲ್ಲ. ಸೋಮವಾರ ನಡೆಯಲಿರುವ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಬಹುದು ಎಂದರು.
ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಜೆಡಿಎಸ್ ಮೂರು ಕ್ಷೇತ್ರಗಳನ್ನು ಕೇಳುವುದು ಸಹಜ. ಈ ಬಗ್ಗೆ ಇನ್ನೂ ಯಾವುದು ಅಂತಿಮವಾಗಿಲ್ಲ. ಸದ್ಯದಲ್ಲೇ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.