ಡಿಕೆ ಅಣ್ಣಾ ಮೂರು ವರ್ಷಗಳಿಂದ ಹರಿದಿದ್ದೇನು ಗೊತ್ತಾ? ನಿಖಿಲ್ ಕುಮಾರಸ್ವಾಮಿ ಪ್ರಶ್ನೆ
ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಸಂಭ್ರಮಾಚರಣೆ ಮತ್ತು ಸಾಧನಾ ಸಮಾವೇಶವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಕನಸನ್ನು ವ್ಯಂಗ್ಯವಾಡಿದ ಅವರು, ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದ್ದು, ಸಂಭ್ರಮಾಚರಣೆ ಮಾಡಿಕೊಂಡಿದೆ. ಈ ಮೂರು ವರ್ಷದ ಕಾರ್ಯಕ್ರಮಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಕ್ಸ್ ಖಾತೆ ಮೂಲಕ ಪ್ರಶ್ನಿಸಿದ್ದಾರೆ. ಡಿ.ಕೆ. ಅಣ್ಣ, ನೀವು 136 ಜನ ಶಾಸಕರ ಭಾರಿ ಬಹುಮತ ಬೆನ್ನಿಗಿಟ್ಟುಕೊಂಡು ಈ ಮೂರು ವರ್ಷಗಳಿಂದ ಹರಿದಿದ್ದೇನು ಗೊತ್ತಾ ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ
ನಿಮ್ಮದೇ ಆಫೀಸಿನಲ್ಲಿ "ಡಿ.ಕೆ. ಶಿವಕುಮಾರ್ ಆದ ನಾನು..." ಅಂತ ಮುಖ್ಯಮಂತ್ರಿ ಆಗುವ ಹಗಲುಗನಸಿನ ಬೋರ್ಡ್ ಹಾಕಿಕೊಂಡು ಕಾಯುತ್ತಾ ಕುಳಿತಿರುವುದು! ಮೊದಲು ಆ ಬೋರ್ಡ್ ನಿಜ ಮಾಡಿಕೊಳ್ಳಿ, ಆಮೇಲೆ ಬೇರೆಯವರ ಸಂಖ್ಯಾಬಲದ ಬಗ್ಗೆ ಮಾತನಾಡಿ. ಕೊಟ್ಟ ಕುದುರೆಯನ್ನು ನೀವೇ ಏರಿದ್ದೀರೋ ಅಥವಾ ಬೇರೆಯವರು ನಿಮ್ಮನ್ನು ಕೆಳಗೆ ಇಳಿಸಿದ್ದಾರೋ ಎಂಬುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು ಎಂದು ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ.
ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?
ಸಾರಿಗೆ ನೌಕರಿಗೆ ಸರಿಯಾಗಿ ಸಂಬಳ ಹಾಗೂ ಸೌಲಭ್ಯಗಳನ್ನು ನೀಡಲು ಸರ್ಕಾರಕ್ಕೆ ಆಗುತ್ತಿಲ್ಲ, ಸಿಲಿಕಾನ್ ಸಿಟಿ ಬೆಂಗಳೂರು ಈಗ ಗಾರ್ಬೇಜ್ ಸಿಟಿ ಆಗುತ್ತಿದೆ. ಜನತೆಗೆ ಉತ್ತಮ ಜೀವನ ಕಲ್ಪಿಸಲು ಸರ್ಕಾರದ ಬಳಿ ಹಣವಿಲ್ಲ ಇಂತಹ ಸಂದರ್ಭದಲ್ಲಿ ಸರ್ಕಾರ ಈ ಎಲ್ಲ ಸಾಧನೆಗಳನ್ನು ಮುಂದಿಟ್ಟುಕೊಂಡು ತುಮಕೂರನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದರು.
ಪರಿಶ್ರಮ ಇದ್ದ ಕಡೆಗೆ ಇತಿಹಾಸ ಸೃಷ್ಟಿಯಾಗುತ್ತದೆ,
ಬಡವರ ಬದುಕಿನಲ್ಲಿ ಸಾಮಾಜಿಕವಾಗಿ ಬದಲಾವಣೆ ತಂದಿರುವ ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ. ನಮ್ಮ ಗ್ಯಾರಂಟಿಗಳ ಬಗ್ಗೆ ಟೀಕಿಸುವವರು ಈ ಹಿಂದೆ ಅಧಿಕಾರದಲ್ಲಿದ್ದಾಗ ಜನಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಿಲ್ಲ. ದಾನ ಧರ್ಮ ಮಾಡುವ 'ಕೈ' ರಾಜ್ಯದಲ್ಲಿ ಅಧಿಕಾರದಲ್ಲಿರುವುದರಿಂದ ನುಡಿದಂತೆ ಗ್ಯಾರಂಟಿಗಳನ್ನು ಜಾರಿಗೊಳಿಸಿ ಜನರ ಬದುಕಿನಲ್ಲಿ ಬದಲಾವಣೆ ತರುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

