Karnataka Election Result 2023: ಕಾಂಗ್ರೆಸ್‌ಗೆ ಜೈ ಎಂದ ಕರ್ನಾಟಕ, ಕಾರ್ಯಕರ್ತರಲ್ಲಿ ಹೆಚ್ಚಿದ ಸಂಭ್ರಮ
ಬೆಂಗಳೂರು(ಮೇ.13): ಕಾಂಗ್ರೆಸ್ ನಿರೀಕ್ಷೆಯಂತೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಸಾಗಿದೆ. ಈಗಾಗಲೇ ಚುನಾವಣಾ ಫಲಿತಾಂಶಲ್ಲಿ ಸ್ಪಷ್ಟ ಬಹುಮತದತ್ತ ಕಾಂಗ್ರೆಸ್ ಮುನ್ನುಗ್ಗುತ್ತಿದೆ. ಹೀಗಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಕೆಪಿಸಿಸಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕುಣಿದು ಕಪ್ಪಳಿಸಿದ್ದಾರೆ.
ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ವಿವಾಹ ವಾರ್ಷಿಕೋತ್ಸವ. ಇಂದೇ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸುವ ಮೂಲಕ ಖರ್ಗೆ ಅವರಿಗೆ ಗಿಫ್ಟ್ ಕೊಟ್ಟಿದ್ದಾರೆ.
ಕೆಪಿಸಿಸಿ ಕೆಚೇರಿ ಎದುರು ಸಲೀಂ ಅಹ್ಮದ್ ಅವರನ್ನು ಎತ್ತಿಕೊಂಡು ಕುಣಿದು ಕಪ್ಪಳಿಸಿದ್ದಾರೆ. ಕಾರ್ಯಕರ್ತರು ಪರಸ್ಪರ ಶುಭಾಶಯಗಳನ್ನ ವಿನಿಮಯ ಮಾಡಿಕೊಂಡು ಕುಣಿದಾಡಿದ್ದಾರೆ.
ಇನ್ನು ವರುಣಾದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ. ಸೋಮಣ್ಣ ಅವರು ಹೀನಾಯವಾಗಿ ಸೋಲು ಕಂಡಿದ್ದಾರೆ. ಸಿದ್ದರಾಮಯ್ಯ ಅಳೆದು ತೂಗಿ ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧಿಸಿದ್ದರು. ಆದರೂ ಕೂಡ ವುರಣಾ ಜನ ಸಿದ್ದರಾಮಯ್ಯ ಅವರನ್ನ ಕೈಬಿಟ್ಟಿಲ್ಲ.
ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ದಾಪುಗಾಲು ಹಾಕುತ್ತಿದ್ದಂತೆ ಕಾರ್ಯಕರ್ತರು ರಾಜ್ಯಾದ್ಯಂತ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಾಯಯಕರು ಕೂಡ ಸಂಭ್ರಮಿಸಿದ್ದಾರೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಯೂ ಕೂಡ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ಅತಂತ್ರವೋ, ಸ್ಥಿರವೋ ಎಂಬ ಗೊಂದಲದಲ್ಲಿದ್ದ ಮತದಾರರಿಗೆ ಸ್ವಷ್ಟ ಚಿತ್ರಣ ಸಿಗುತ್ತಿದ್ದು, ಕಾಂಗ್ರೆಸ್ 130 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತದತ್ತ ಸಾಗುತ್ತಿದೆ. ಹೀಗಾಗಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯವುದು ಬಹುತೇಕ ಪಕ್ಕಾ ಆಗುತ್ತಿದೆ.
ರಾಜ್ಯದಲ್ಲಿ ಸ್ಪಷ್ಟ ಬಹುಮದತ್ತ ಕಾಂಗ್ರೆಸ್ ಮುನ್ನುಗ್ಗುತ್ತಿದೆ. ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ತರುವಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಯಶಸ್ವಿಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಮೂರನೇ ಗೆಲುವು ದಾಖಲಿಸಿದ್ದಾರೆ. ಹಿಮಾಚಲ್ ಪ್ರದೇಶ, ಛತ್ತೀಸ್‌ಗಢ ಸಾಲಿನಲ್ಲಿ ಇದೀಗ ಕರ್ನಾಟಕ ಸೇರ್ಪಡೆಯಾಗಿದೆ. ಎಐಸಿಸಿ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್‌ಗೆ ಗೆಲುವಿನ ರುಚಿ ತಂದುಕೊಟ್ಟಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಯಾವುದೇ ಕಮಾಲ್ ಮಾಡಿಲ್ಲ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ಸಾಗುತ್ತಿದ್ದಾರೆ. ಈ ಮೂಲಕ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.