ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚುರುಕು: ಒಬ್ಬರಿಂದೊಬ್ಬರು ದೆಹಲಿ ದಂಡಯಾತ್ರೆ
ಮಹಾಮಾರಿ ಕೊರೋನಾ ಅಬ್ಬರ ಹಾಗೂ ಕಳೆದ ವಾರ ಬೆಂಗಳೂರಿನಲ್ಲಿ ನಡೆದ ಗಲಭೆ ಸದ್ದು ಜೋರಾಗಿರುವ ಸಂದರ್ಭದಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅನ್‍ಲಾಕ್ ಆಗ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಪುನಾರಂಭಗೊಂಡಿದ್ದು, ಸ್ಥಾನಮಾನದ ಲೆಕ್ಕಾಚಾರದಲ್ಲಿರುವ ನಾಯಕರು ದೆಹಲಿ ದಂಡಯಾತ್ರೆ ಪ್ರಾರಂಭಿಸಿದ್ದು, ಹೈಕಮಾಂಡ್ ನಾಯಕರ ಮನ ಗೆಲ್ಲಲು ಪ್ರಯತ್ನ ಆರಂಭಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚಿಸುವುದರಲ್ಲಿ ಮುಂಚೂಣಿಯಲ್ಲಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಈಗ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಸಿಪಿ ಯೊಗೇಶ್ವರ್ ಸಚಿವ ಸ್ಥಾನಕ್ಕೆ ಲಾಬಿಗೆ ಮುಂದಾಗಿದ್ದಾರೆ. ಈ ಕಾರಣಕ್ಕಾಗಿಯೇ ಈ ಇಬ್ಬರೂ ನಾಯಕರು ದೆಹಲಿಗೆ ಆಗಮಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ

ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಂದು ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್‍ರವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನ ದೆಹಲಿಯಲ್ಲಿ ಭೇಟಿಯಾದ ಕರ್ನಾಟಕದ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಸಿಟಿ ರವಿ

ರಾಜ್ಯದ ಪ್ರವಾಸೋದ್ಯಮ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಸಿ.ಟಿ ರವಿ ಅವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಕ್ರಿಯಾಲ್ ಅವರನ್ನು ನವದೆಹಲಿಯಲ್ಲಿ ಇಂದು ಭೇಟಿ ಮಾಡಿದರು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಭೇಟಿಯಾದ ಸಚಿವ ಸಿಟಿ ರವಿ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.