ಕೊಪ್ಪಳದಲ್ಲೇ ಸಿಕ್ಕ ರಾಜ್ಯಸಭಾ ಅಚ್ಚರಿ ಅಭ್ಯರ್ಥಿಗೆ ಸಿಹಿ ತಿನ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ

First Published Jun 8, 2020, 5:33 PM IST

ಭಾರತೀಯ ಜನತಾ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿ ಪ್ರಸ್ತುತ ರಾಜ್ಯಸಭೆಗೆ ರಾಜ್ಯದಿಂದ ಅಭ್ಯರ್ಥಿಗಳಾಗಿ ಆಯ್ಕೆಯಾದ ಈರಣ್ಣ ಕಡಾಡಿ ಹಾಗೂ ಅಶೋಕ ಗಸ್ತಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಇನ್ನು ಕೊಪ್ಪಳ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವವರಿಗೆ ಕಾರ್ಯಕ್ರಮವೊಂದರಲ್ಲಿ ಸಿಕ್ಕ ರಾಜ್ಯಸಭಾ ಅಭ್ಯರ್ಥಿ ಅಶೋಕ ಗಸ್ತಿ ಅವರಿಗೆ ಸಿಹಿ ತಿನ್ನಿಸಿ ಅಭಿನಂದನೆ ಹೇಳಿದರು.