ವೈಕುಂಠ ಏಕಾದಶಿ ಪ್ರಯುಕ್ತ ರಾಜಕೀಯ ನಾಯಕರಿಂದ ಪೂಜೆ: ಜಮೀರ್ ಭಾಗಿ

First Published Dec 25, 2020, 6:54 PM IST

ಮಾಸದ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯು ವಿಶೇಷವಾಗಿದ್ದು, ಈ ಏಕಾದಶಿಗೆ ತನ್ನದೇ ಆದ ಪಾವಿತ್ರ್ಯತೆ ಇದೆ. ಈ ವೈಕುಂಟ ಏಕಾದಶಿಯು ದಕ್ಷಿಣ ಭಾರತದ ಪ್ರಮುಖ ಉತ್ಸವಗಳಲ್ಲಿ ಒಂದಾಗಿದ್ದು ಎಲ್ಲ ವಿಷ್ಣು ಮಂದಿರಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ವೆಂಕಟೇಶ್ವರ, ಶ್ರೀನಿವಾಸ, ಶ್ರೀ ವಿಷ್ಣು, ದೇವಸ್ಥಾನಗಳಲ್ಲಿ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಸೇರಿರುತ್ತಾರೆ. ಈ ಪವಿತ್ರವಾದ ದಿನದಂದು ದೇವಾಲಯದ ಹೊರ ಭಾಗದಿಂದ ಒಳಭಾಗಕ್ಕೆ ಪ್ರವೇಶಿಸಲು ವಿಶೇಷವಾಗಿ ನಿರ್ಮಿಸಲಾಗಿರುವ ವೈಕುಂಠ ದ್ವಾರವನ್ನು ಪ್ರವೇಶಿಸಿದರೆ ಮೋಕ್ಷ ಸಿಗುವುದು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ನಾಯಕರು ವಿವಿಧ ದೇವಸ್ಥಾನಗಳಿಗೆ ಹೋಗಿ ವಿಶೇಷ ಪೂಜೆ ಸಲ್ಲಿಸಿದರು.

ವೈಕುಂಠ ಏಕಾದಶಿ ನಿಮಿತ್ತ ನಾಡಿನಾದ್ಯಂತ ಸಂಭ್ರಮಾಚರಣೆಗಳು ನಡೆದಿದ್ದು, ವಿಷ್ಣು ದೇಗುಲಗಳಲ್ಲಿ ಭಕ್ತರು ಸರದಿ ನಿಂತು ದೇವರ ದರ್ಶನ ಪಡೆದರು.

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಇಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಶ್ರೀ ಶ್ರೀನಿವಾಸ ದೇವಸ್ಥಾನಕ್ಕೆ ಭೇಟಿ‌ ನೀಡಿ ದೇವರ ದರ್ಶನ ಪಡೆದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರಾಜಾಜಿನಗರದ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಮೀರ್ ಅಹಮ್ಮದ್ ಮತ್ತು ಇತರರು ಜತೆಗಿದ್ದರು.

ವೈಕುಂಠ ಏಕಾದಶಿ ಪ್ರಯುಕ್ತ ಮಾಜಿ ವಿಧಾನ ಪರಿಷತ್ ಸದಸ್ಯ ಶರವಣ ಅವರು ಬ್ರಾಹ್ಮೀಮುಹೂರ್ತದಲ್ಲಿ   ಆರಾಧ್ಯ ದೈವ ತಿರುಪತಿ ವೆಂಕೇಶ್ವರ  ನಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು.

ವೈಕುಂಠ ಏಕಾದಶಿ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಅವರು  ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ಇಸ್ಕಾನ್ ಕೃಷ್ಣ ದೇಗುಲಕ್ಕೆ ಭೇಟಿ ನೀಡಿದ ಅವರು ಶ್ರೀಕೃಷ್ಣನ ದರ್ಶನ ಪಡೆದು, ವಿಶೇಷ ಸೇವೆ ಸಲ್ಲಿಸಿದರು.

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ಬಹುದಿನಗಳ ನಂತರ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಇಂದು ವೈಕುಂಠ ಏಕಾದಶಿ ಹಿನ್ನೆಲೆ ನಗರದ ಮಲ್ಲೇಶ್ವರಂನಲ್ಲಿರುವ ಟಿ.ಟಿ.ಡಿ. ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?