Kalaburagi Election Result 2023: ಕಲಬುರಗಿಯಲ್ಲಿ ಕಾಂಗ್ರೆಸ್ ಕಮಾಲ್, ಕಾರ್ಯಕರ್ತರ ಸಂಭ್ರಮ
ಕಲಬುರಗಿ(ಮೇ.13): ಚಿತ್ತಾಪುರ ಕ್ಷೇತ್ರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯ ಮಣಿಕಾಂತ್ ರಾಠೋಡ್ ಅವರ ವಿರುದ್ಧ ಜಯಸಾಧಿಸಿದ್ದಾರೆ. ಈ ಮೂಲಕ ಚಿತ್ತಾಪುರ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ಪ್ರಿಯಾಂಕ್ ಖರ್ಗೆ ಜಯಶಾಲಿಯಾಗಿದ್ದಾರೆ.
ಪ್ರಿಯಾಂಕ್ ಖರ್ಗೆ ಒಟ್ಟು 81323 ಮತಗಳನ್ನ ಪಡೆದರೆ, ಮಣಿಕಾಂತ್ ರಾಠೋಡ್ 67683 ಮತಗಳನ್ನ ಪಡೆಯುವ ಮೂಲಕ ಪ್ರಿಯಾಂಕ್ ಖರ್ಗೆ ಒಟ್ಟು 13640 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಮತ ಎಣಿಕೆ ಕೇಂದ್ರ ಎದುರು ಜಮಾಯಿಸಿದ್ದ ಕಾರ್ಯಕರ್ತರು ವಿಜೇತ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರನ್ನ ಎತ್ತಿಕೊಂಡು ಸಂಭ್ರಮಪಟ್ಟಿದ್ದಾರೆ. ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಕುಣಿದು ಕುಪ್ಪಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ 9 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 7ರಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮದಲ್ಲಿದ್ದಾರೆ.
7 ರಲ್ಲಿ ಗೆಲುವು ದಾಖಲಿಸುವ ಮೂಲಕ ಕಲಬುರಗಿ ಜಿಲ್ಲೆ ಕಾಂಗ್ರೆಸ್‌ನ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಭೀತಾಗಿದೆ. ಜಿಲ್ಲೆಯ ಚಿತ್ತಾಪುರದಲ್ಲಿ ಪ್ರಿಯಾಂಕ್ ಖರ್ಗೆ, ಸೇಡಂನಲ್ಲಿ ಡಾ. ಶರಣಪ್ರಕಾಶ ಪಾಟೀಲ, ಅಫಜಲಪುರದಲ್ಲಿ ಎಂ.ವೈ.ಪಾಟೀಲ, ಆಳಂದದಲ್ಲಿ ಬಿ.ಆರ್. ಪಾಟೀಲ್, ಕಲಬುರಗಿ ಉತ್ತರದಲ್ಲಿ ಖನೀಜ್ ಫಾತಿಮಾ, ಹಾಗೂ ಜೇವರ್ಗಿಯಲ್ಲಿ ಡಾ. ಅಜಯಸಿಂಗ್ ಕಾಂಗ್ರೆಸ್ ಅಭ್ಯರ್ಥಿಗಲು ಗೆಲುವು ದಾಖಲಿಸಿದ್ದಾರೆ.
ಕಲಬುರಗಿ ಗ್ರಾಮೀಣದಲ್ಲಿ ಬಸವರಾಜ ಮತ್ತಿಮಡು ಹಾಗೂ ಚಿಂಚೋಳಿಯಲ್ಲಿ ಅವಿನಾಶ ಜಾಧವ ಜಯಸಾಧಿಸಿದ್ದಾರೆ. ಜಿಲ್ಲೆಯ ಮತದಾರ ಪ್ರಭುಗಳು ಬಿಜೆಪಿಗೆ ನೋ, ಕಾಂಗ್ರೆಸ್‌ಗೆ ಜೈ ಎಂದಿದ್ದಾರೆ.