Karnataka Election Eresults 2023: ಚಿತ್ರಗಳಲ್ಲಿ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಡಿಕೆಶಿ
ತುಮಕೂರು (ಮೇ.14): ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೆಂಪಲ್ ರನ್ ನಡೆಸುತ್ತಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಶಿವಕುಮಾರ್ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಕಾಡುಸಿದ್ದೇಶ್ವರ ಮಠಕ್ಕೆ ಭೇಟಿ ಬಳಿಕ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ . ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ನಮಸ್ಕರಿದ ಡಿ.ಕೆ ಶಿವಕುಮಾರ್.
ಗದ್ದುಗೆಗೆ ನಮಸ್ಕರಿಸಿದ ಬಳಿಕ ಶ್ರೀ ಸಿದ್ದಲಿಂಗ ಸ್ವಾಮೀಜಿಯಿಂದ ಆಶೀರ್ವಾದ ಪಡೆದರು. ಡಿಕೆಶಿಗೆ ಶಾಲು ಹೊದಿಸಿ, ಹಾರ ಹಾಕಿ ಆಶೀರ್ವಾದ ಮಾಡಿದ ಸಿದ್ದಲಿಂಗ ಸ್ವಾಮೀಜಿ.
ಡಿ.ಕೆ ಶಿವಕುಮಾರ್‌ಗೆ ಜಿಲ್ಲಾ ಕಾಂಗ್ರೆಸ್‌ನ ಮುಖಂಡರು ಸಾಥ್ ನೀಡಿದರು. ಇದಕ್ಕೂ ಮುನ್ನ ಕಾಡುಸಿದ್ದೇಶ್ವರ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ ಕೊಟ್ಟರು.
ಮಂಡ್ಯದ ಕಾಂಗ್ರೆಸ್ ಶಾಸಕ ದರ್ಶನ್ ಪುಟ್ಟಣಯ್ಯ, ತಿಪಟೂರಿನ ಷಡಾಕ್ಷರಿ, ಚೆಲುವನಾರಾಯಸ್ವಾಮಿ, ಬೇಳೂರು ಗೋಪಾಲಕೃಷ್ಣ, ಮಳವಳ್ಳಿ ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ ಕೂಡ ಕಾಡುಸಿದ್ದೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿದರು.