MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ರಾಜ್ಯಪಾಲರು ಗೆಹ್ಲೋಟ್ ಇಲ್ಲದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯವೇ? ರಾಜಭವನದ ನಿಯಮಗಳೇನು?

ರಾಜ್ಯಪಾಲರು ಗೆಹ್ಲೋಟ್ ಇಲ್ಲದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯವೇ? ರಾಜಭವನದ ನಿಯಮಗಳೇನು?

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಸಿದ್ಧರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅನಿರೀಕ್ಷಿತ ಪ್ರಯಾಣದಿಂದಾಗಿ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ರಾಜ್ಯಪಾಲರ ಅನುಪಸ್ಥಿತಿಯಲ್ಲಿ,   ರಾಜೀನಾಮೆ ಪತ್ರ ಸಲ್ಲಿಸಲು  ಇರುವ ನಿಯಮಗಳೇನು?

2 Min read
Author : Gowthami K
Published : May 28 2026, 10:18 AM IST
Share this Photo Gallery
  • FB
  • TW
  • Linkdin
  • Whatsapp
17
ರಾಜೀನಾಮೆ ಪ್ರಕ್ರಿಯೆ ಹೊಸದೊಂದು ಗೊಂದಲ
Image Credit : Asianet News

ರಾಜೀನಾಮೆ ಪ್ರಕ್ರಿಯೆ ಹೊಸದೊಂದು ಗೊಂದಲ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಭಾರಿ ರೋಚಕ ತಿರುವುಗಳು ಸಿಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಹೊಸದೊಂದು ಗೊಂದಲಕ್ಕೆ ಸಿಲುಕಿದೆ. ಹೈಕಮಾಂಡ್ ಸೂಚನೆಯಂತೆ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಅಧಿಕೃತವಾಗಿ ರಾಜೀನಾಮೆ ನೀಡಲು ಸರ್ವಸನ್ನದ್ಧರಾಗಿದ್ದ ಬೆನ್ನಲ್ಲೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮಧ್ಯಪ್ರದೇಶದ ಇಂದೋರ್‌ಗೆ ಪ್ರಯಾಣ ಬೆಳೆಸಿರುವುದು ರಾಜೀನಾಮೆ ಬಗ್ಗೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
ಪತ್ನಿ ಅನಾರೋಗ್ಯ: ಮುಂಬೈ ಮೂಲಕ ಇಂದೋರ್‌ಗೆ ತೆರಳಿದ ಗೆಹ್ಲೋಟ್
Image Credit : Asianet News

ಪತ್ನಿ ಅನಾರೋಗ್ಯ: ಮುಂಬೈ ಮೂಲಕ ಇಂದೋರ್‌ಗೆ ತೆರಳಿದ ಗೆಹ್ಲೋಟ್

ಮೂಲಗಳ ಪ್ರಕಾರ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪತ್ನಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಅವರು ತುರ್ತಾಗಿ ಇಂದೋರ್‌ಗೆ ತೆರಳಿದ್ದಾರೆ. ಬುಧವಾರ ರಾತ್ರಿ 11:45 ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ರಾಜ್ಯಪಾಲರು, ರಾತ್ರಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಮುಂಜಾನೆ 7 ಗಂಟೆಯ ವಿಮಾನದ ಮೂಲಕ ಮುಂಬೈನಿಂದ ಇಂದೋರ್‌ಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯಪಾಲರು ಬೆಂಗಳೂರಿಗೆ ಮರಳಿ ಬರುವ ಅಧಿಕೃತ ವೇಳಾಪಟ್ಟಿ ಇನ್ನೂ ಖಚಿತವಾಗಿಲ್ಲ. ಆದರೆ, ನಾಳೆ ಅಂದರೆ ಶುಕ್ರವಾರ ಕರ್ನಾಟಕಕ್ಕೆ ಉಪರಾಷ್ಟ್ರಪತಿಗಳು ಭೇಟಿ ನೀಡಲಿರುವ ಕಾರ್ಯಕ್ರಮ ಇರುವುದರಿಂದ, ರಾಜ್ಯಪಾಲರು ಇಂದು ಸಂಜೆಯ ವೇಳೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Related Articles

Related image1
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿ ಪ್ರವಾಸಕ್ಕೆ ಸಿದ್ಧತೆ, ನಿವಾಸಕ್ಕೆ ಸಚಿವರ ದಂಡು
Related image2
Karnataka Political Update Live: ರಾಜ್ಯಪಾಲರು ಗೆಹ್ಲೋಟ್ ಇಲ್ಲದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯವೇ? ರಾಜಭವನದ ನಿಯಮಗಳೇನು?
37
ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ: ಪ್ರಕ್ರಿಯೆ ಏನು?
Image Credit : Asianet News

ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ: ಪ್ರಕ್ರಿಯೆ ಏನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆಯೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದರು. ಇದಕ್ಕೆ ಸ್ಪಂದಿಸಿದ್ದ ರಾಜಭವನ, ಬೆಳಗ್ಗೆ 11:30 ಅಥವಾ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶ ನೀಡಿತ್ತು. ಆದರೆ ಈಗ ರಾಜ್ಯಪಾಲರೇ ನಗರದಲ್ಲಿ ಇಲ್ಲದಿರುವುದರಿಂದ ಸಿದ್ದರಾಮಯ್ಯ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಮೂಡಿದೆ.

ರಾಜಭವನದ ಅಧಿಕೃತ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ (ಸೆಕ್ರೆಟರಿ) ಪ್ರಭುಶಂಕರ್ ಅವರಿಗೆ ಸಲ್ಲಿಕೆ ಮಾಡಲು ಕಾನೂನಾತ್ಮಕವಾಗಿ ಅವಕಾಶವಿದೆ. ಸಿದ್ದರಾಮಯ್ಯ ಅವರು ಮಧ್ಯಾಹ್ನದ ಬಳಿಕ ರಾಜಭವನಕ್ಕೆ ತೆರಳಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

47
ರಾಜೀನಾಮೆ ಅಂಗೀಕಾರದ ನಿಯಮ
Image Credit : ANI

ರಾಜೀನಾಮೆ ಅಂಗೀಕಾರದ ನಿಯಮ

ಕಾರ್ಯದರ್ಶಿಗೆ ರಾಜೀನಾಮೆ ಪತ್ರ ನೀಡಿದರೂ, ಅದರ ಅಂತಿಮ ನಿರ್ಧಾರವನ್ನು ರಾಜ್ಯಪಾಲರೇ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯಪಾಲರು ಬೆಂಗಳೂರಿಗೆ ವಾಪಸ್ ಬಂದ ನಂತರ, ನಿಯಮಾವಳಿಗಳ ಪ್ರಕಾರ ಮುಖ್ಯಮಂತ್ರಿಗಳನ್ನು ಮತ್ತೊಮ್ಮೆ ಖುದ್ದಾಗಿ ಕರೆಸಿ, ರಾಜೀನಾಮೆಯನ್ನು ಖಚಿತಪಡಿಸಿಕೊಂಡ ಬಳಿಕವಷ್ಟೇ ಅದನ್ನು ಅಧಿಕೃತವಾಗಿ ಅಂಗೀಕರಿಸಲಿದ್ದಾರೆ.

57
ರಾಜಭವನದ ಸುತ್ತ ಬಿಗಿ ಭದ್ರತೆ: ಬ್ಯಾರಿಕೇಡ್ ಅಳವಡಿಕೆ
Image Credit : ANI

ರಾಜಭವನದ ಸುತ್ತ ಬಿಗಿ ಭದ್ರತೆ: ಬ್ಯಾರಿಕೇಡ್ ಅಳವಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಾಜಭವನದತ್ತ ಧಾವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ರಾಜಭವನದ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಪೊಲೀಸ್ ಭದ್ರತೆಯನ್ನು ತೀವ್ರಗೊಳಿಸಲಾಗಿದೆ.

67
ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ ಸುರ್ಜೇವಾಲಾ
Image Credit : ANI

ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ ಸುರ್ಜೇವಾಲಾ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆಗಳನ್ನು ಸುಗಮವಾಗಿ ನಡೆಸಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ತಂಗಿರುವ ಅವರು, ಹೈಕಮಾಂಡ್‌ನ ರಾಯಭಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

77
ಸುರ್ಜೇವಾಲಾ ಅವರ ಭೇಟಿ
Image Credit : our own

ಸುರ್ಜೇವಾಲಾ ಅವರ ಭೇಟಿ

ಇಂದು ಮಧ್ಯಾಹ್ನ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆ ಅಧಿಕೃತಗೊಳ್ಳುತ್ತಿದ್ದಂತೆ, ಸುರ್ಜೇವಾಲಾ ಅವರನ್ನು ಭೇಟಿಯಾಗಲು ಕಾಂಗ್ರೆಸ್‌ನ ಹಿರಿಯ ಮುಖಂಡರು ಹಾಗೂ ಸಚಿವರು ಹೋಟೆಲ್‌ಗೆ ದೌಡಾಯಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರು? ಶಾಸಕಾಂಗ ಪಕ್ಷದ (CLP) ಸಭೆಯನ್ನು ಯಾವಾಗ ಕರೆಯಬೇಕು? ಎಂಬಿತ್ಯಾದಿ ಹೈವೋಲ್ಟೇಜ್ ಚರ್ಚೆಗಳು ಇಂದು ಸಂಜೆಯೊಳಗೆ ತಾರ್ಕಿಕ ಅಂತ್ಯ ಕಾಣುವ ನಿರೀಕ್ಷೆಯಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಕರ್ನಾಟಕದ ರಾಜ್ಯಪಾಲರು
ಕರ್ನಾಟಕ ಸುದ್ದಿ
ಥಾವರ್ ಚಂದ್ ಗೆಹ್ಲೋಟ್

Latest Videos
Recommended Stories
Recommended image1
Siddaramaiah: ಸಿದ್ದರಾಮಯ್ಯ ಇಂದೇ ರಾಜೀನಾಮೆ? ರಾಜ್ಯ ರಾಜಕೀಯದಲ್ಲಿ ಬಿರುಗಾಳಿ, ಮುಂದಿನ ಸಿಎಂ ಪರಮೇಶ್ವರ್?
Recommended image2
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿ ಪ್ರವಾಸಕ್ಕೆ ಸಿದ್ಧತೆ, ನಿವಾಸಕ್ಕೆ ಸಚಿವರ ದಂಡು
Recommended image3
Karnataka Power Tussle: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ನನ್ನೆರಡು ಕಣ್ಣುಗಳಿದ್ದಂತೆ: ಚಲುವರಾಯಸ್ವಾಮಿ
Related Stories
Recommended image1
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿ ಪ್ರವಾಸಕ್ಕೆ ಸಿದ್ಧತೆ, ನಿವಾಸಕ್ಕೆ ಸಚಿವರ ದಂಡು
Recommended image2
Karnataka Political Update Live: ರಾಜ್ಯಪಾಲರು ಗೆಹ್ಲೋಟ್ ಇಲ್ಲದೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯವೇ? ರಾಜಭವನದ ನಿಯಮಗಳೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved