ಕೋರ್ ಕಮಿಟಿ ಸಭೆಯಲ್ಲಿ ಸಿಎಂಗೆ ಹಲವು ಖಡಕ್ ಸೂಚನೆ ಕೊಟ್ಟ ಉಸ್ತುವಾರಿ..!

First Published Dec 5, 2020, 6:04 PM IST

ಬಿಜೆಪಿ ಮಹತ್ವದ ಕೋರ್​ ಕಮಿಟಿ ಮೀಟಿಂಗ್​ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಇದರಲ್ಲಿ ರಾಜ್ಯ ನೂತನ ಉಸ್ತುವಾರಿ ಅರುಣ್‌ಸಿಂಗ್ ಭಾಗಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಈ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಜತೆ ಚರ್ಚೆ ಮಾಡುವಾಗ  ಕೆಲ ಮಹತ್ವದ ವಿಷಯ ಪ್ರಸ್ತಾಪವಾಗಿದೆ. ಈ ಬಗ್ಗೆ ಸಿಎಂಗೆ ಅರುಣ್ ಕುಮಾರ್ ಖಡಕ್ ಸೂಚನೆಗಳನ್ನ ಕೊಟ್ಟಿದ್ದಾರೆ. ಅವು ಈ ಕೆಳಗಿನಂತಿವೆ.

2ನೇ ದಿನವಾದ ಇಂದು (ಶನಿವಾರ) ಬೆಳಗಾವಿಯಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆಯಾದವು.

ಮುಂದಿನ ದಿನಗಳಲ್ಲಿ ನಿಗಮ-ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಾಗ ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಆದ್ಯತೆ ನೀಡಬೇಕೆಂದು ನೂತನ ರಾಜ್ಯ ಉಸ್ತುವಾರಿ ಅರುಣ್‍ಸಿಂಗ್ ಸೂಚನೆ ಕೊಟ್ಟಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಜತೆ ಚರ್ಚೆ ಮಾಡುವಾಗ ಈ ವಿಷಯ ಪ್ರಸ್ತಾಪವಾಗಿದೆ.

ನಿಗಮ-ಮಂಡಳಿಯಲ್ಲಿ ಹಾಲಿ ಶಾಸಕರಿಗೆ ಆದ್ಯತೆ ನೀಡುವ ಬದಲು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿಗಳು ಸೇರಿದಂತೆ ಪದಾಧಿಕಾರಿಗಳಿಗೆ ಸ್ಥಾನ ಕಲ್ಪಿಸಬೇಕೆಂದು ರಾಜ್ಯ ನಾಯಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಅರುಣ್‍ಸಿಂಗ್ ಬಾಕಿ ಉಳಿದಿರುವ ನಿಗಮ-ಮಂಡಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ನಾಮ ನಿರ್ದೇಶಕರನ್ನಾಗಿ ಪಕ್ಷದ ಪದಾಧಿಕಾರಿಗಳನ್ನೇ ಪರಿಗಣಿಸಬೇಕು ಎಂದಿದ್ದಾರೆ.

ಅಲ್ಲದೇ ಯಾವುದೇ ಪ್ರಮುಖ ತೀರ್ಮಾನವಾಗುವಾಗ ಪಕ್ಷದ ವೇದಿಕೆಯಲ್ಲೇ ಅಂತಿಮವಾಗಬೇಕೆಂದು ಖಡಕ್ ಸೂಚನೆ ಕೊಟ್ಟಿದ್ದಾರೆ.

ಪ್ರಮುಖರ ಜತೆ ಚರ್ಚೆ ಮಾಡದೆ ಏಕಪಕ್ಷೀಯವಾಗಿ ತೀರ್ಮಾನ ಮಾಡಬಾರದು. ಇದರಿಂದ ಪಕ್ಷ ಹಾಗೂ ಸರ್ಕಾರದ ನಡುವೆ ಸೌಹಾರ್ದಯುತ ಸಂಬಂಧ ಹಾಳಾಗುತ್ತದೆ ಎಂದು  ಸಿಎಂಗೆ ಬಿಎಸ್‌ವೈಗೆ ನಿರ್ದೇಶನ ನೀಡಿದರು.

ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರಿಗೇ ಪ್ರಮುಖ ಆದ್ಯತೆ ನೀಡುತ್ತಿದೆ. ರಾಜ್ಯಸಭೆ, ವಿಧಾನ ಪರಿಷತ್‍ಗೆ ನಾಮಕರಣ ಸೇರಿದಂತೆ ಪದಾಧಿಕಾರಿಗಳಿಗೆ ಅಗ್ರಸ್ಥಾನ. ಕಾರ್ಯಕರ್ತರಿಂದಲೇ ಪಕ್ಷ ಬೆಳೆಯುವುದರಿಂದ ಅವರನ್ನು ಯಾವ ಹಂತದಲ್ಲೂ ಕಡೆಗಣಿಸಬಾರದು ಎಂದು ಅರುಣ್ ಸಿಂಗ್ ಖಡಕ್ ಆಗಿ ರಾಜ್ಯ ನಾಯಕರುಗಳಿಗೆ ತಿಳಿಸಿದರು.

ಮುಂದಿನ ದಿನಗಳಲ್ಲಿ ರಾಜ್ಯಘಟಕದ ನಾಯಕರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗೂ ಅರುಣ್‍ಸಿಂಗ್ ನಿರ್ದೇಶನ ನೀಡಿದ್ದಾರೆ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?