MLC Election: ಕಾಂಗ್ರೆಸ್ ನಿಂದ ಬಹುದೊಡ್ಡ ಆಫರ್; ಅಡ್ಡಮತದಾನ ಮಾಡಿದ್ರಾ ಮೂವರು?
ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಸುಳಿವು ಸಿಕ್ಕಿದ್ದು, ಬಿಜೆಪಿಯಿಂದ ಉಚ್ಚಾಟಿತ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಪರ ಮತ ಚಲಾಯಿಸುವ ಸಾಧ್ಯತೆಯಿದೆ. ಇತ್ತ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರೂ ಪ್ರತ್ಯೇಕವಾಗಿ ಮತ ಚಲಾಯಿಸಿ ಕುತೂಹಲ ಮೂಡಿಸಿದ್ದಾರೆ.

ವಿಧಾನಪರಿಷತ್ ಚುನಾವಣೆ
ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ 5ನೇ ಅಭ್ಯರ್ಥಿಯಾಗಿರುವ ವಿನಯ್ ಕಾರ್ತಿಕ್ ಅವರಿಗೆ ಮತದಾನ ಮಾಡಿದ್ರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೈ ಪಕ್ಷದಿಂದ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಟಿಕೆಟ್ ಭರವಸೆ?
ಬೆಳಗ್ಗೆ 9 ಗಂಟೆಗೆ ಮತದಾನ ಆರಂಭವಾಗಿದ್ದು, ಬಿಜೆಪಿ ಶಾಸಕರು ಬಂದು ಮತದಾನ ಮಾಡುತ್ತಿದ್ದಾರೆ. ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕರಾದ ಯಲ್ಲಾಪುರ ಕ್ಷೇತ್ರದ ಶಿವರಾಂ ಹೆಬ್ಬಾರ್ ಮತ್ತು ಯಶವಂತಪುರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಟಿಕೆಟ್ ಭರವಸೆ ಹಿನ್ನೆಲೆ ಕೈ ಪರವಾಗಿ ಮತದಾನ ಮಾಡಿರುವ ಸಾಧ್ಯತೆಗಳಿವೆ.
ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ
ಇನ್ನು ದಳಪತಿಗಳ ವಿರುದ್ಧ ಮುನಿಸಿಕೊಂಡಿರುವ ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಒಂಟಿಯಾಗಿ ಬಂದು ಮತದಾನ ಮಾಡಿದ್ದಾರೆ. ಚುನಾವಣೆ ಹಿನ್ನೆಲೆ ಜೆಡಿಎಸ್ ಶಾಸಕರನ್ನು ದೇವನಹಳ್ಳಿಯ ರೆಸಾರ್ಟ್‌ನಲ್ಲಿರಿಸಲಾಗಿತ್ತು. ಎಲ್ಲಾ ಶಾಸಕರು ಒಂದೇ ಬಸ್‌ನಲ್ಲಿ ಮತದಾನ ಮಾಡಲು ಆಗಮಿಸುತ್ತಿದ್ದಾರೆ.
ಆತ್ಮಸಾಕ್ಷಿ ಮತ ಹಾಕುತ್ತೇವೆ
ಮತ್ತೊಂದೆಡೆ ಕಾಂಗ್ರೆಸ್‌ನ ಎಲ್ಲಾ ಶಾಸಕರು ಐದು ಬಸ್‌ಗಳಲ್ಲಿ ವಿಧಾನಸೌಧಕ್ಕೆ ಬರುತ್ತಿದ್ದಾರೆ. ಇನ್ನು ಮತದಾನಕ್ಕೂ ಮುನ್ನ ಪ್ರತಿಕ್ರಿಯಿಸಿರುವ ಎಸ್.ಟಿ.ಸೋಮಶೇಖರ್, ಬಿಜೆಪಿ ಅವರು ಮಾತಾಡಿಸಿಲ್ಲ. ಕಾಂಗ್ರೆಸ್ ಮಾತಾಡಿಸಿದ್ದಾರೆ. ನಾವು ಆತ್ಮಸಾಕ್ಷಿ ಮತ ಹಾಕುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ಮತ ಹಾಕುವೆ
ಬಿಜೆಪಿ ಅಭ್ಯರ್ಥಿಗೆ ಮತ ಹಾಕೋದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅರ್ಭ್ಯರ್ಥಿಗೆ ಮತ ಹಾಕುತ್ತೇನೆ. ನಾನು ಬಿಜೆಪಿಯಿಂದ ಚುನಾಯಿತನಾಗಿದ್ದೇನೆ. ಹೀಗಾಗಿ ಪಕ್ಷದ ಅಭ್ಯರ್ಥಿಗೆ ಮತಹಾಕುತ್ತೇನೆ. ನನ್ನ ಹೋರಾಟ ಪಕ್ಷದ ವಿರುದ್ಧವಲ್ಲ, ಕುಟುಂಬದ ವಿರುದ್ಧ ಎಂದು ಪತ್ರದಲ್ಲಿ ಶಾಸಕ ಯತ್ನಾಳ್ ಉಲ್ಲೇಖಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

