MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಕೆಂಡಾಮಂಡಲ, ಅಂಕಿಅಂಶ ಸಹಿತ ಸುದೀರ್ಫ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ!

ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಕೆಂಡಾಮಂಡಲ, ಅಂಕಿಅಂಶ ಸಹಿತ ಸುದೀರ್ಫ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ!

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಫೋನ್ ಟ್ಯಾಪಿಂಗ್ಆರೋಪವನ್ನು ತಳ್ಳಿಹಾಕಿದ CM ಸಿದ್ದರಾಮಯ್ಯ, ಇದು ವಿಪಕ್ಷಗಳ ಹತಾಶ ಹೇಳಿಕೆಯಾಗಿದ್ದು, ತಮ್ಮ ಹಿಂದಿನ ಅನುಭವದಿಂದಲೇ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೆ,  HDK ಸ್ವಾಮೀಜಿಗಳ ಫೋನ್ ಕದ್ದಾಲಿಸಿದ್ದರು ಎಂದು ಆರೋಪಿಸಿದ್ದಾರೆ.

3 Min read
Author : Gowthami K
Published : Mar 03 2026, 03:38 PM IST
Share this Photo Gallery
  • FB
  • TW
  • Linkdin
  • Whatsapp
19
ಹೆಚ್‌ಡಿಕೆ ಪೋನ್ ಟ್ಯಾಪಿಂಗ್ ಆರೋಪಕ್ಕೆ ಸಿಎಂ ಗರಂ
Image Credit : Asianet News

ಹೆಚ್‌ಡಿಕೆ ಪೋನ್ ಟ್ಯಾಪಿಂಗ್ ಆರೋಪಕ್ಕೆ ಸಿಎಂ ಗರಂ

ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರಿನಲ್ಲಿ ಮಾತನಾಡಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈಗ ಪೋನ್ ಟ್ಯಾಪಿಂಗ್ ನಡೆಯುತ್ತಿದೆ. ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಈಗಲೂ ಫೋನ್ ಟ್ಯಾಪಿಂಗ್ ಇದೆ. ಕೆಲವರು ಫೋನ್ ಟ್ಯಾಪಿಂಗ್ ಮಾಡಿಯೂ ಪತಿವ್ರತೆ ರೀತಿ ವರ್ತಿಸುತ್ತಾರೆ. ನಾನು ಸತ್ಯ ಹೇಳುತ್ತೇನೆ ಕೇಳಿ, ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು. ಇವತ್ತಿನ ಸರ್ಕಾರದಲ್ಲಿ ಅದು ಎಷ್ಟು ಹೆಚ್ಚಾಗಿದೆ ಎಂಬುದು ಅವರನ್ನೇ ಕೇಳಬೇಕು ಅವರದ್ದೇ ಶಾಸಕರ ಮೇಲೆ ಅವರದ್ದೇ ಸಚಿವರು ಗುಪ್ತಚಾರಿಕೆ ಮಾಡುತ್ತಿರುವುದು ಇದೇ ಮೊದಲು. ಸಿಎಂ ಆಗಬೇಕೆಂದುಕೊಂಡವರು ಅವರ ಸರ್ಕಾರದ ಮೇಲೆ ಗುಪ್ತಚರಿಕೆ ಆರಂಭಿಸಿರುವುದು ದುರಂತ ಎಂದ ಹೆಚ್‌ಡಿಕೆ ಹೇಳಿಕೆ ಈಗ ರಾಜ್ಯ ರಾಜಕೀಯಲ್ಲಿ ತಲ್ಲಣ ಮೂಡಿಸಿದೆ.

29
ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ
Image Credit : Facebok

ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ

ಈ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಪಕ್ಷದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ.

ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಈ ನಿರುದ್ಯೋಗಿ ವಿರೋಧ ಪಕ್ಷದ ನಾಯಕರು ನನ್ನ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಪ್ರಯತ್ನಿಸುತ್ತಲೇ ಇದ್ದಾರೆ, ಇದರಿಂದ ಅವರೊಳಗೆ ತುಂಬಿಕೊಂಡಿರುವ ಹುಳಿ ಖಾಲಿಯಾಗಬಹುದೇ ಹೊರತು ನಮ್ಮ ಹಾಲು-ಜೇನಿನಂತಹ ಸಂಬಂಧದ ಮೇಲೆ ಯಾವ ಪರಿಣಾಮವೂ ಆಗುವುದಿಲ್ಲ ಎನ್ನುವುದು ಇಬ್ಬರಿಗೂ ತಿಳಿದಿರಲಿ.‌

Related Articles

Related image1
ವಿಧಾನಸಭೆಯಲ್ಲಿ ಗಂಭೀರ ಆರೋಪ - ಮತ್ತೆ ಟೆಲಿಫೋನ್‌ ಕದ್ದಾಲಿಕೆ ಗದ್ದಲ!
Related image2
ಫೋನ್ ಟ್ಯಾಪಿಂಗ್ ಕೇಸ್: ಸರ್ಕಾರದ ತನಿಖಾ ಆದೇಶ ರದ್ದು, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್‌ಗೆ ಜಯ
39
ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಸಿಎಂ ಬಳಿಯೇ ಇತ್ತು
Image Credit : our own

ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಸಿಎಂ ಬಳಿಯೇ ಇತ್ತು

ಆರೋಪ ಮಾಡಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡಾ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ.

ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಧಾನಿ ಎದುರು ಬಾಯಿ ಬಿಡಲಾಗದೆ ಕೈಕಾಲು ನಡುಗುವಂತಹ ಸ‍್ಥಿತಿ ಇರುವ ಬಿಜೆಪಿಯೂ ಅಲ್ಲ, ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಕೂಡಾ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ಕೂಡಾ ನನ್ನ ಇಲ್ಲವೇ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ, ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯಗಳು ಅವರಿಗೆ ಇದೆ. ಆದರೆ ಯಾವ ಶಾಸಕರು ಏನನ್ನೇ ಹೇಳಿದರೂ ಅಂತಿಮವಾಗಿ ಅವರನ್ನೂ ಸೇರಿದಂತೆ ನಾನು ಮತ್ತು ಶಿವಕುಮಾರ್ ನಮ್ಮ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು. ಇದನ್ನು ನಾವಿಬ್ಬರೂ ಒಂದಲ್ಲ ನೂರು ಬಾರಿ ಹೇಳಿದ್ದೇವೆ. ಇದೇ ಅಂತಿಮ ಸತ್ಯ.

49
ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧ ಕೆಡಿಸುತ್ತಿದ್ದಾರೆ
Image Credit : Siddaramaiah FB

ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧ ಕೆಡಿಸುತ್ತಿದ್ದಾರೆ

ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧವನ್ನು ಕೆಡಿಸಿ ಡಿ.ಕೆ.ಶಿವಕುಮಾರ್ ಅವರನ್ನು ಒಲಿಸಿಕೊಳ್ಳುವ ದುರಾಲೋಚನೆ ಏನಾದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇದ್ದರೆ, ಅವರ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ. ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸಿಗ, ಸುಳ್ಳು ಕೇಸ್ ಗಳನ್ನು ಹಾಕಿ, ಜೈಲಿಗೆ ಕಳಿಸಿ ಅವರನ್ನು ಮಣಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಮಾಡಿಯಾಗಿದೆ. ಇದಕ್ಕೆಲ್ಲ ಮಣಿಯದೆ ಅವರು ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎನ್ನುವುದು ಈ ಕುತಂತ್ರಿ ನಾಯಕರಿಗೆ ತಿಳಿದಿರಲಿ.

59
ಬೆನ್ನಿಗೆ ಚೂರಿ ಹಾಕುವ ಕುತಂತ್ರ ವಿಪಕ್ಷದ್ದು
Image Credit : Siddaramaiah X

ಬೆನ್ನಿಗೆ ಚೂರಿ ಹಾಕುವ ಕುತಂತ್ರ ವಿಪಕ್ಷದ್ದು

ಕರ್ನಾಟಕದ ಇತ್ತೀಚಿನ ರಾಜಕೀಯ ಇತಿಹಾಸದ ಪುಟಗಳ ಮೇಲೆ ಒಮ್ಮೆ ಕಣ್ಣಾಡಿಸಿದರೆ ಈ ಪೋನ್ ಕದ್ದಾಲಿಕೆ, ಗೂಢಚರ್ಯೆಗಳೆಲ್ಲ ಯಾವ ಪಕ್ಷದ ದುಷ್ಕೃತ್ಯಗಳು ಎನ್ನುವುದು ಅರಿವಾಗುತ್ತದೆ. ಈ ದುರ್ಬುದ್ದಿಯ ಕಾರಣದಿಂದಾಗಿಯೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ, ವಚನಭಂಗದಂತಹ ಅನಿಷ‍್ಠಗಳು ಕಾಣಿಸಿಕೊಂಡಿರುವುದು. 2004ರಿಂದ 2013 ವರೆಗಿನ ಒಂಬತ್ತು ವರ್ಷಗಳ ಅವಧಿಯಲ್ಲಿ ರಾಜ್ಯ ಐದು ಮುಖ್ಯಮಂತ್ರಿಗಳನ್ನು, 2018ರಿಂದ 2023ರ 5 ವರ್ಷಗಳ ಅವಧಿಯಲ್ಲಿ ಮೂರು ಮುಖ್ಯಮಂತ್ರಿಗಳನ್ನು ರಾಜ್ಯ ಕಾಣುವಂತಾಗಲು ಇವರೊಳಗಿನ ಪರಸ್ಪರ ಅಪನಂಬಿಕೆ, ದ್ವೇಷ, ಅಸೂಯೆ, ಬೆನ್ನಿಗೆ ಚೂರಿ ಹಾಕುವ ಕುತಂತ್ರಗಳೇ ಕಾರಣ.

69
2018ರಲ್ಲಿ ಹೆಚ್‌ಡಿಕೆ ನಿರ್ಮಲಾನಂದನಾಥ ಸ್ವಾಮಿಗಳ ಫೋನನ್ನೆ ಕದ್ದಾಲಿಸಿದ್ದಾರೆ
Image Credit : Asianet News

2018ರಲ್ಲಿ ಹೆಚ್‌ಡಿಕೆ ನಿರ್ಮಲಾನಂದನಾಥ ಸ್ವಾಮಿಗಳ ಫೋನನ್ನೆ ಕದ್ದಾಲಿಸಿದ್ದಾರೆ

2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ಪೂಜ್ಯ ನಿರ್ಮಲಾನಂದನಾಥ ಸ್ವಾಮಿಗಳ ಫೋನನ್ನೆ ಕದ್ದಾಲಿಸಿದ್ದಾರೆ ಎಂದು ಈಗಿನ ಅವರ ರಾಜಕೀಯ ಸಂಗಾತಿ ಬಿ.ವೈ ವಿಜಯೇಂದ್ರ ಅವರೇ ಆರೋಪ ಮಾಡಿದ್ದರು. ಇದರ ಬಗ್ಗೆ ತನಿಖೆ ಮಾಡಿದ್ದ ಸಿಬಿಐ, ಒಬ್ಬ ಸ್ವಾಮೀಜಿಗಳದ್ದಷ್ಟೇ ಅಲ್ಲ, ಬದಲಿಗೆ ಏಳು ಸ್ವಾಮೀಜಿಗಳ ಫೋನ್ ಗಳ ಕದ್ದಾಲಿಕೆ ಮಾಡಲಾಗಿದೆ ಎಂದು ತಿಳಿಸಿತ್ತು. ನಂಬಿಕೆಗೆ ತಾನು ಅರ್ಹ ಅಲ್ಲ ಎಂದು ಸಾಬೀತು ಮಾಡಿರುವ ಕುಮಾರಸ್ವಾಮಿವರನ್ನು ಬಿಜೆಪಿಯವರು ಸುಮ್ಮನೆ ಬಿಟ್ಟಾರೆಯೇ? ಅವರ ವಿರುದ್ಧವೂ ಗೂಢಚಾರರನ್ನು ಬಿಟ್ಟಿರಬಹುದು. ಇಂತಹ ದುರ್ಬುದ್ದಿಗಾಗಿಯೇ ರಾಜ್ಯದ ಜನತೆ ಈ ಎರಡೂ ಪಕ್ಷಗಳನ್ನು ತಿರಸ್ಕರಿಸಿರುವುದು ಎನ್ನುವುದು ನೆನಪಿರಲಿ.

79
ನನ್ನ ಪಕ್ಷದ ಯಾವ ನಾಯಕರಾಗಲಿ ಜಗ್ಗುವವರಲ್ಲ, ಬಗ್ಗುವವರೂ ಅಲ್ಲ
Image Credit : Asianet News

ನನ್ನ ಪಕ್ಷದ ಯಾವ ನಾಯಕರಾಗಲಿ ಜಗ್ಗುವವರಲ್ಲ, ಬಗ್ಗುವವರೂ ಅಲ್ಲ

ಅಧಿಕಾರವನ್ನು ದುರ್ಬಳಕೆ ಮಾಡಿ ಸರ್ಕಾರಿ ಯಂತ್ರಗಳ ಮೂಲಕವೇ ವಿರೋಧ ಪಕ್ಷದ ನಾಯಕರನ್ನು ಮಾತ್ರವಲ್ಲ, ಸ್ವಪಕ್ಷದಲ್ಲಿ ತಮ್ಮ ನಾಯಕತ್ವಕ್ಕೆ ಪೈಪೋಟಿ ನೀಡಬಲ್ಲ ನಾಯಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬಂದ ದಿನದಿಂದಲೇ ಮಾಡುತ್ತಿದ್ದಾರೆ ಎನ್ನುವುದು ಜಗಜ್ಜಾಹೀರಾಗಿರುವ ಸತ್ಯ. ಹಾಡಹಗಲೇ ಪೊಲೀಸ್, ಸಿಬಿಐ, ಇಡಿ, ಐಟಿ ಇಲಾಖೆಗಳ ದುರ್ಬಳಕೆಯಾಗುತ್ತಿರುವ ಬಗ್ಗೆ ಇಡೀ ದೇಶದ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇಂತಹವರು ತಮ್ಮ ರಾಜಕೀಯ ವಿರೋಧಿಗಳ ಫೋನ್‌ ಗಳನ್ನು ಕದ್ದು ಆಲಿಸದೆ ಬಿಡುತ್ತಾರೆಯೇ? ಆದರೆ ಇಂತಹ ಬೆದರಿಕೆಗಳಿಗೆ ನಾನಾಗಲಿ, ನನ್ನ ಪಕ್ಷದ ಯಾವ ನಾಯಕರಾಗಲಿ ಜಗ್ಗುವವರಲ್ಲ, ಬಗ್ಗುವವರೂ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇನೆ.

89
ಕುಮಾರಸ್ವಾಮಿಯವರಿಗೆ ಗೂಢಚರ್ಯೆಯ ಪಾಠ ತಂದೆ ಹೇಳಿಕೊಟ್ಟಿರಬಹುದು
Image Credit : star of mysore

ಕುಮಾರಸ್ವಾಮಿಯವರಿಗೆ ಗೂಢಚರ್ಯೆಯ ಪಾಠ ತಂದೆ ಹೇಳಿಕೊಟ್ಟಿರಬಹುದು

ಕುಮಾರಸ್ವಾಮಿಯವರಿಗೆ ಈ ಗೂಢಚರ್ಯೆಯ ಪಾಠವನ್ನು ಅವರ ಪೂಜ್ಯ ತಂದೆಯವರೇ ಹೇಳಿಕೊಟ್ಟಿರಬಹುದು. ತನ್ನನ್ನು ಪ್ರಧಾನಿ ಮಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಸೀತಾರಾಂ ಕೇಸರಿಯವರ ವಿರುದ್ಧವೇ ಗೂಡಚರ್ಯೆ ಮಾಡಿದ್ದ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಿರುವುದು ಇತಿಹಾಸದ ಪುಟಗಳಲ್ಲಿದೆ. ಈ ಅಪನಂಬಿಕೆ ಮತ್ತು ಸಣ್ಣತನಗಳಿಂದಾಗಿ ಕನ್ನಡಿಗರೊಬ್ಬರು ಇನ್ನಷ್ಟು ಕಾಲ ಪ್ರಧಾನಿಯಾಗುವ ಅವಕಾಶ ತಪ್ಪಿಹೋಯಿತು ಎನ್ನುವುದು ವಿಷಾದನೀಯ ವಾಸ್ತವ.

99
ಆರ್ ಅಶೋಕ್, ಕುಮಾರಸ್ವಾಮಿ ಕುಟಿಲ ತಂತ್ರ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ
Image Credit : Asianet News

ಆರ್ ಅಶೋಕ್, ಕುಮಾರಸ್ವಾಮಿ ಕುಟಿಲ ತಂತ್ರ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ

ಹೆಚ್.ಡಿ.ಕುಮಾರಸ್ವಾಮಿ ಮತ್ತು ಆರ್ ಅಶೋಕ್ ಅವರು ತಮ್ಮ ಅಮೂಲ್ಯ ಕ್ಷಣಗಳನ್ನು ಈ ರೀತಿ ಕುಟಿಲ ರಾಜಕೀಯದಲ್ಲಿ ವ್ಯರ್ಥಮಾಡುವ ಬದಲಿಗೆ ರಚನಾತ್ಮಕ ವಿರೋಧ ಪಕ್ಷದ ರೀತಿಯಲ್ಲಿ ಕೆಲಸ ಮಾಡಿ ರಾಜ್ಯಕ್ಕೆ ಒಳ್ಳೆಯದನ್ನು ಮಾಡಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಜ್ಞಾವಂತ ಮತದಾರರು ಐದು ವರ್ಷಗಳ ಕಾಲ ಸರ್ಕಾರ ನಡೆಸಲು ನಮಗೆ ಜನಾದೇಶ ನೀಡಿದ್ದಾರೆ. ವಿರೋಧ ಪಕ್ಷಗಳ ಎಲ್ಲ ಕುತಂತ್ರ-ಕುಚೇಷ್ಠೆಗಳ ನಡುವೆಯೂ ಈ ಅವಧಿಯನ್ನು ಕಾಂಗ್ರೆಸ್ ಪಕ್ಷ ಪೂರ್ಣಗೊಳಿಸಲಿದೆ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಡಿ.ಕೆ. ಶಿವಕುಮಾರ್
ಸಿದ್ದರಾಮಯ್ಯ
ಹೆಚ್.ಡಿ. ಕುಮಾರಸ್ವಾಮಿ
ಕರ್ನಾಟಕ ರಾಜಕೀಯ

Latest Videos
Recommended Stories
Recommended image1
ಅಲಿಪ್ತ ನೀತಿ ಶಾಶ್ವತವಲ್ಲ: ನಮಗೆ ದೇಶದ ಹಿತಾಸಕ್ತಿ ಮೊದಲು, ಕಾಂಗ್ರೆಸ್‌ಗೆ ವೋಟ್ ಬ್ಯಾಂಕ್ ಮುಖ್ಯ - ಸಿಟಿ ರವಿ ತಿರುಗೇಟು
Recommended image2
ನೆತನ್ಯಾಹು ದೊಡ್ಡ ಕೊಲೆಗಡುಕ: ಖಮೇನಿ ಸಾವಿಗೆ ಸಂತಾಪ ಸೂಚಿಸದ ಪ್ರಧಾನಿ ಮೋದಿ ವಿರುದ್ಧ ಬಿಕೆ ಹರಿಪ್ರಸಾದ್ ವಾಗ್ದಾಳಿ
Recommended image3
ಖಮೇನಿ ಸಾವಿನ ಬಗ್ಗೆ ಮೌನ: ಕೇಂದ್ರ ಸರ್ಕಾರದ ನಡೆ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
Related Stories
Recommended image1
ವಿಧಾನಸಭೆಯಲ್ಲಿ ಗಂಭೀರ ಆರೋಪ - ಮತ್ತೆ ಟೆಲಿಫೋನ್‌ ಕದ್ದಾಲಿಕೆ ಗದ್ದಲ!
Recommended image2
ಫೋನ್ ಟ್ಯಾಪಿಂಗ್ ಕೇಸ್: ಸರ್ಕಾರದ ತನಿಖಾ ಆದೇಶ ರದ್ದು, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್‌ಗೆ ಜಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved