ಸಿದ್ದು ಆರೋಗ್ಯ ವಿಚಾರಿಸಿದ ವಿವಿಧ ಮಠಾಧೀಶರು: ಮತ್ತೊಂದೆಡೆ ವಿಶೇಷ ಪೂಜೆ

First Published 13, Dec 2019, 8:24 PM

ಹೃದಯ ಸಂಬಂಧಿ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದತೆ ರಾಜಕೀಯ ಮುಖಂಡರು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.  ಇನ್ನೊಂದು ಕಡೆ  ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು [ಶುಕ್ರವಾರ] 2ನೇ ದಿನ ಟೀಂ  ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಹಾಗೂ ವಿವಿಧ ಸಮುದಾಯದ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯನವರ ಯೋಗಕ್ಷೆಮ ವಿಚಾರಿಸಿ ಬೇಗ ಗುಣಮುಖರಾಗಲೆಂದು ಆಶೀರ್ವಾದಿಸಿದರು. ಅಷ್ಟೇ ಅಲ್ಲದೇ ತಾತನನ್ನು ಮಾತನಾಡಿಸಲು ದಿವಂಗತ ರಾಕೇಶ್ ಸಿದ್ದರಾಮಯ್ಯ ಪುತ್ರ ಸಹ ಓಡೋಡಿ ಆಸ್ಪತ್ರೆಗೆ ಬಂದಿದ್ದಾನೆ. ಯಾರೆಲ್ಲ ಬಂದಿದ್ದರು ಎನ್ನುವುದನ್ನು ಚಿತ್ರಗಳಲ್ಲಿ ನೋಡಿ..

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶ್ರೀ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ.

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು  ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.

ಸಿದ್ದರಾಮಯ್ಯನವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು

ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಯೋಗ ಕ್ಷೇಮ ವಿಚಾರಿಸಿದ ವಿವಿಧ ಮಠಾಧೀಶರು

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಹೊಸದುರ್ಗ ಶಾಖೆ ಕನಕ ಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಂಗಳೂರಿನ ರಾಮಾನುಜ ಮಠದ ಶ್ರೀ ತ್ರಿದಂಡಿ ವೆಂಕಟ ರಾಮಾನುಜ ಜಿಯರ್ ಸ್ವಾಮೀಜಿ, ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡರು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು

ಮಾಜಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ಕಾಂಗ್ರೆಸ್ ತೊರೆದು ಹಿರೇಕೆರೂರು ಬೈ  ಎಲೆಕ್ಷನ್ ನಲ್ಲಿ ಬಿಜೆಪಿಯಿಂದ ಗೆದ್ದ ಬಿ.ಸಿ.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ನೋಡಲು  ಆಸ್ಪತ್ರೆಗೆ ಆಗಮಿಸಿದರು.

ಒಂದು ಕಡೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ನಾಯಕರ ದಂಡೆ ಹರಿದುಬಂದ್ರೆ, ಇನ್ನೊಂದು ಕಡೆ  ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲೆಂದು ಸ್ವಕ್ಷೇತ್ರದ ಅವರ ಅಭಿಮಾನಿಗಳು ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀರ್ಘದಂಡ ನಮಸ್ಕಾರ ಹಾಕಿದ್ರು.

loader