ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯೋನ್ಮುಖ: ಬಿಜೆಪಿಗೆ ನಡುಕ
ಡೆಡ್ಲಿ ಕೊರೋನಾದಿಂದಾಗಿ ಎಲ್ಲರೂ ಕೈಕಟ್ಟಿಕೊಂಡು ಮನೆಯಲ್ಲಿ ಕುಳಿತುಕೊಂಡ್ರೆ, ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತ್ರ ಮಾರಕ ವೈರಸ್‌ಗೆ ಕ್ಯಾರೆ ಎನ್ನದೇ ಪಕ್ಷ ಸಂಘಟನೆಗೆ ತಾಲೀಮು ನಡೆಸಿದ್ದಾರೆ. ಬಹುತೇಕ ನಾಯಕರ ವಿರೋಧದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಿರುವ ಡಿ.ಕೆ.ಶಿವಕುಮಾರ್ ಅವರು ಈಗ ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ವಿಶ್ವಾಸಗಳಿಸುವತ್ತ ಕಾರ್ಯೋನ್ಮುಖರಾಗಿದ್ದು, ಬಹುತೇಕ ಎಲ್ಲ ನಾಯಕರನ್ನು ಭೇಟಿ ಮಾಡಿ ಒಟ್ಟುಗೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಗುಂಪುಗಾರಿಕೆಯಿಂದ ಕೂಡಿರುವ ಕಾಂಗ್ರೆಸ್‌ನಲ್ಲಿ ನಾಯಕರು ಒಟ್ಟುಗೂಡಿಸುವ ಪ್ರಯತ್ನ ನಡೆಸಿದ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಿರುವ ಡಿ.ಕೆ.ಶಿವಕುಮಾರ್ ಅವರು ಈಗ ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ವಿಶ್ವಾಸಗಳಿಸುವತ್ತ ಕಾರ್ಯೋನ್ಮುಖರಾಗಿದ್ದು, ಬಹುತೇಕ ಎಲ್ಲ ನಾಯಕರನ್ನು ಭೇಟಿ ಮಾಡಿ ಒಟ್ಟುಗೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸಕ್ಕೆ ಶನಿವಾರ ಭೇಟಿ ನೀಡಿದ್ದರು. ಶಾಸಕ ವಿ. ಮುನಿಯಪ್ಪ ಜತೆಗಿದ್ದರು.
ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾತ್ರಿ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಅವರ ಬೆಂಗಳೂರಿನ ಸಂಜಯನಗರ ನಿವಾಸಕ್ಕೆ ತೆರಳಿ ಕೃತಜ್ಞತೆ ಸಲ್ಲಿಸಿದರು.
ಶನಿವಾರ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸಕ್ಕೆ ತೆರಳಿ ಕೃತಜ್ಞತೆ ಸಲ್ಲಿಸಿದರು.
ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ಕೃತಜ್ಞತೆ ಸಲ್ಲಿಸಿದರು.
ಭಾನುವಾರ ಹಿರಿಯ ಕಾಂಗ್ರೆಸ್ ಮುಖಂಡ ಕೆ. ರೆಹಮಾನ್ ಖಾನ್ ಅವರ ನಿವಾಸಕ್ಕೆ ಭೇಟಿ ನೀಡಿದರು.
ಬೆಂಗಳೂರಿನಲ್ಲಿ ಭಾನುವಾರ ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೋಯ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ, ಕೃತಜ್ಞತೆ ಸಲ್ಲಿಸಿದರು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷವನ್ನು ಮುನ್ನಡೆಸುವುದು ಹಾಗೂ ಆಡಳಿತರೂಢ ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ನಡೆಸಲು ನಿಮ್ಮ ಸಹಕಾರ ಅತ್ಯಗತ್ಯ ಎಂದು ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ.