RR ನಗರ ಉಪಕದನ: ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್‌ ಖಂಡಿಸಿ ಕಾಂಗ್ರೆಸ್‌ ಧರಣಿ

First Published 17, Oct 2020, 9:57 AM

ಬೆಂಗಳೂರು(ಅ.17): ರಾಜರಾಜೇಶ್ವರಿ ನಗರ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ಸ್ಥಳೀಯ ಪೊಲೀಸರು ದೂರು ದಾಖಲಿಸಿರುವುದು ಪೂರ್ವ ನಿಯೋಜಿತ ಹಾಗೂ ರಾಜಕೀಯ ಪ್ರೇರಿತವಾಗಿದ್ದು, ಕೂಡಲೇ ಈ ದೂರು ಕೈಬಿಡುವಂತೆ ಆಗ್ರಹಿಸಿ ಕೆಪಿಸಿಸಿ ಮಹಿಳಾ ಘಟಕದ ಮುಖಂಡರು, ಕಾರ್ಯಕರ್ತರು ಶುಕ್ರವಾರ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆ ಮಂದೆ ಪ್ರತಿಭಟನೆ ನಡೆಸಿದ್ದಾರೆ.

<p>ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಆತ್ಮೀಯರಾಗಿರುವ ಠಾಣೆಯ ಇನ್‌ಸ್ಪೆಕ್ಟರ್‌ ನವೀನ್‌ ಅವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು</p>

ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಆತ್ಮೀಯರಾಗಿರುವ ಠಾಣೆಯ ಇನ್‌ಸ್ಪೆಕ್ಟರ್‌ ನವೀನ್‌ ಅವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು

<p>ಪ್ರತಿಭಟನಾನಿರತ ಮಹಿಳಾ ಕಾಂಗ್ರೆಸ್‌ ನಾಯಕಿಯರು ಇನ್‌ಸ್ಪೆಕ್ಟರ್‌ ವಿರುದ್ಧ ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸುವಂತೆ ಪಶ್ಚಿಮ ವಲಯ ಪೊಲೀಸ್‌ ಆಯುಕ್ತರಿಗೆ ಇದೇ ವೇಳೆ ದೂರು ಸಲ್ಲಿಸಿದ್ದಾರೆ.&nbsp;</p>

ಪ್ರತಿಭಟನಾನಿರತ ಮಹಿಳಾ ಕಾಂಗ್ರೆಸ್‌ ನಾಯಕಿಯರು ಇನ್‌ಸ್ಪೆಕ್ಟರ್‌ ವಿರುದ್ಧ ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸುವಂತೆ ಪಶ್ಚಿಮ ವಲಯ ಪೊಲೀಸ್‌ ಆಯುಕ್ತರಿಗೆ ಇದೇ ವೇಳೆ ದೂರು ಸಲ್ಲಿಸಿದ್ದಾರೆ. 

<p>ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಮಾತನಾಡಿ, ಎಸಿಪಿ ಅವರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಿಂದ ಯಾವುದೇ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗದಿರುವುದು ಸಾಭೀತಾಗಿದೆ. ಹಾಗಾಗಿ ಕೂಡಲೇ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.</p>

ಈ ವೇಳೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಮಾತನಾಡಿ, ಎಸಿಪಿ ಅವರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಿಂದ ಯಾವುದೇ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗದಿರುವುದು ಸಾಭೀತಾಗಿದೆ. ಹಾಗಾಗಿ ಕೂಡಲೇ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

<p>ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪ ಅಮರನಾಥ್‌, ಮಾಜಿ ಸಚಿವೆ ಉಮಾಶ್ರೀ, ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಸೇರಿದಂತೆ ಹಲವು ಮಹಿಳಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.</p>

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪ ಅಮರನಾಥ್‌, ಮಾಜಿ ಸಚಿವೆ ಉಮಾಶ್ರೀ, ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಸೇರಿದಂತೆ ಹಲವು ಮಹಿಳಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

loader