ರಾಹುಲ್ ಭೇಟಿ ಮಾಡಿದ ಮಧು ಬಂಗಾರಪ್ಪ.. ಹೊಸ ವಿಚಾರ!
ನವದೆಹಲಿ( ಸೆ. 09) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಧು ಬಂಗಾರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮಧು ಬಂಗಾರಪ್ಪ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
ಇಂದು ನವದೆಹಲಿಯಲ್ಲಿ ಏಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆನು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಹರ್ಷ ವ್ಯಕ್ತಪಡಿಸಿ ಸ್ವಾಗತಿಸಿದರು ಎಂದು ಮಧು ಬಂಗಾರಪ್ಪ ಬರೆದುಕೊಂಡಿದ್ದಾರೆ.
ಮಾಜಿ ಸಿಎಂ ಬಂಗಾರಪ್ಪ ಅವರು ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಓಡನಾಟವನ್ನು ಹಂಚಿಕೊಂಡರು. ಬಂಗಾರಪ್ಪ ನವರು ಮುಖ್ಯಮಂತ್ರಿಯಾಗಿ ನೀಡಿದ್ದ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪಕ್ಷ ಬಲವರ್ಧನೆ ಹಾಗೂ ಇನ್ನಿತರ ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ನೀಡಿ ಮುಂದಿನ ರಾಜಕೀಯಕ್ಕೆ ಶುಭ ಹಾರೈಸಿದರು ಎಂದು ಮಧು ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ ರವರು ಉಪಸ್ಥಿತರಿದ್ದರು ಎಂದಿರುವ ಮಧು ಕೆಲ ಸಮಯ ಮಾತುಕತೆ ನಡೆಸಿದ್ದಾರೆ.
ಜೆಡಿಎಸ್ ನಿಂದ ಸೊರಬದ ಶಾಸಕರಾಗಿ ಆಯ್ಕೆಯಾಗಿದ್ದ ಮಧು ಬಂಗಾರಪ್ಪ ನಂತರ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ಮಾಡಿದ್ದರು. ಜೆಡಿಎಸ್ ನಲ್ಲಿ ಅನೇಕ ಬದಲಾವಣೆಗಳ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.