ಮಗಳು ಪ್ರಿಯಾಂಕಾ ಹೇಳಿದ್ರೆ ಅದು ರಾಜ್ಯದ ಅಭಿಪ್ರಾಯವಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ
2028ಕ್ಕೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿದ್ದಾರೆ ಎಂಬ ಪುತ್ರಿ ಪ್ರಿಯಾಂಕಾ ಹೇಳಿಕೆಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. ಇದು ರಾಜ್ಯದ ಅಭಿಪ್ರಾಯವಲ್ಲ ಎಂದ ಅವರು, ಮುಂದೆ ಕಾಯ್ದು ನೋಡೋಣ ಎನ್ನುವ ಮೂಲಕ ಸಿಎಂ ಸ್ಥಾನದ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಪುತ್ರಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
2028ಕ್ಕೆ ಸತೀಶ್ ಜಾರಕಿಹೊಳಿ ಸಿಎಂ ಎಂಬ ಪುತ್ರಿ, ಸಂಸದೆ ಪ್ರಿಯಾಂಕಾ ಹೇಳಿಕೆಗೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸಚಿವರು ಪ್ರತಿಕ್ರಿಯಿಸಿದ್ದಾರೆ. ಮಗಳು ಹೇಳಿದ್ರೆ, ಅದು ರಾಜ್ಯದ ಅಭಿಪ್ರಾಯವಲ್ಲ. ಮುಂದೆ ಚುನಾವಣೆ ಆಗಲಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಆಗ ಮುಂದೆ ಚರ್ಚೆ ಮಾಡೋಣ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಎಂ ಸ್ಥಾನ
ಮುಂದುವರಿದು ಮಾತನಾಡಿದ ಸತೀಶ್ ಜಾರಕಿಹೊಳಿ, ಸಿಎಂ ಆಗುವ ಬಗ್ಗೆ ಬಹಳಷ್ಟು ಜನರು ಹೇಳುತ್ತಾರೆ. ಆದ್ರೆ ಅದಕ್ಕೆ ಕನೆಕ್ಟ್ ಆಗುವಂತಹದ್ದು ಏನು ಇಲ್ಲ. ಎಲ್ಲರಗೂ ಸಿಎಂ ಆಗುವ ಆಸೆ ಇರುತ್ತದೆ. ಮುಂದೆ ಕಾಯ್ದು ನೋಡೋಣ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿಎಂ ಸ್ಥಾನದ ಬಗ್ಗೆ ಆಸೆ ವ್ಯಕಪಡಿಸಿದರು.
ಹೈಕಮಾಂಡ್ ನಿರ್ಧಾರ ಅಂತಿಮ
ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಹೊಸಬರಿಗೆ ಅವಕಾಶ ಹೈಕಮಾಂಡ್‌ಗೆ ಬಿಟ್ಟದ್ದು. ಯಾವಾಗ ಮಾಡ್ತಾರೆ, ಯಾರನ್ನು ಮಾಡ್ತಾರೆ ಅಂತ ಹೈಕಮಾಂಡ್ ಗೆ ಬಿಟ್ಟದ್ದು. ಕಾದು ನೋಡೋಣ. ಬೇರೆ ಬೇರೆಯವರು ಬೇರೆ ಲಿಸ್ಟ್ ಕೊಟ್ಟಿದ್ದು ನಿಜ. ಹೈಕಮಾಂಡ್ ಎಲ್ಲವನ್ನೂ ಕೂಡಿ ಒಂದು ಪಟ್ಟಿಯನ್ನು ಮಾಡುತ್ತಾರೆ.
ಹೊಸಬರಿಗೆ ಅವಕಾಶ ಸಿಗಬೇಕು
20ಕ್ಕೆ ಎಲ್ಲಾ 20 ಸ್ಥಾನಗಳನ್ನು ಭರ್ತಿ ಮಾಡಬೇಕು. ಹೊಸ ಮುಖಗಳು ಬೇಕು ಅಂತ ರಾಹುಲ್ ಗಾಂಧಿ ಅವರು ಸಹ ಹೇಳಿದ್ದಾರೆ. ಹೊಸಬರಿಗೆ ಖಂಡಿತವಾಗಿ ಸ್ಥಾನ ಕೊಡಬೇಕು ಎಂದು ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಹೈಕಮಾಂಡ್ ಬುಲಾವ್
ಹೈಕಮಾಂಡ್ ಬುಲಾವ್ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್ ದೆಹಲಿಯತ್ತ ಹೊರಟಿಸಿದ್ದಾರೆ. ಸಿಎಂ ಜೊತೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾಸ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜೊತೆಗಿನ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

