ಬೆಂಗಳೂರಿನಲ್ಲಿ NDA ರಾಷ್ಟ್ರಪತಿ ಅಭ್ಯರ್ಥಿ, ದೇವೇಗೌಡ್ರ ಬೆಂಬಲ ಕೋರಿದ ದ್ರೌಪದಿ ಮುರ್ಮು
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತಯಾಚನೆಗಾಗಿ ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ಬೆಂಗಳೂರಿಗೆ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು(ಭಾನುವಾರ) ಸಂಜೆ ಬೆಂಗಳೂರಿಗೆ ಆಮಿಸಿದರು. ಎಚ್ಎಎಲ್ ಏರ್ಪೋರ್ಟ್ ನಲ್ಲಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಬರಮಾಡಿಕೊಂಡರು.ಬಳಿಕ ನಡೆದ ಸಭೆ, ಚರ್ಚೆಗಳ ಮಾಹಿತಿ ಪೋಟೋಗಳಲ್ಲಿ ನೋಡಿ...

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು(ಭಾನುವಾರ) ಸಂಜೆ ಬೆಂಗಳೂರಿಗೆ ಆಮಿಸಿದರು.
ಎಚ್ಎಎಲ್ ಏರ್ಪೋರ್ಟ್ ನಲ್ಲಿ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಬರಮಾಡಿಕೊಂಡರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಬಿಜೆಪಿ ಗಣ್ಯರು ಮುರ್ಮ ಅವರಿಗೆ ಗ್ರ್ಯಾಂಡ್ ವೆಲ್ ಮಾಡಿಕೊಂಡರು.
ಎಚ್ಎಎಲ್ ಏರ್ಪೋರ್ಟ್ನಿಂದ ನೇರವಾಗಿ ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ ಆಮಿಸಿದ ಮುರ್ಮು ಅವರಿಗೆ ಆದಿವಾಸಿ ಕಲಾತಂಡಗಳು ಭರ್ಜರಿ ಸ್ವಾಗತ ಕೋರಿದವು.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುರ್ಮು ಅವರು ಬಿಜೆಪಿ ಶಾಸಕರು, ಸಂಸದರ ಜೊತೆ ಸಭೆ ನಡೆಸಿದರು.
ಮುರ್ಮು ಅವರು ಇದೇ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಚುನಾವಣೆಯ ಮತದಾರರೂ ಆಗಿರುವ ಶಾಸಕರ ಬಳಿ ಮತಯಾಚಿಸಿದರು.
ಸಭೆ ಬಳಿಕ ಕರ್ನಾಟಕ ಬಿಜೆಪಿ ವತಿಯಿಂದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಪೇಟ ತೊಡಿಸಿ ಸನ್ಮಾನಿಸಿ ಶುಭ ಹಾರೈಸಿದರು.
ಬೆಂಗಳೂರಿನಲ್ಲಿ NDA ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರನ್ನು ಭೇಟಿ ಮಾಡಿ ಬೆಂಬಲ ಸಹ ಕೋರಿದರು.
ಮುರ್ಮು ಅವರು ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು.
2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ಶಿಕ್ಷಣದ ಪೂರೈಸಿದ ಬಳಿಕ ಒಡಿಶಾ ಸರ್ಕಾರದ ನೀರಾವರಿ ಇಲಾಖೆಯಲ್ಲಿ ಕೆಲಸ, ಬಳಿಕ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಈ ನಡುವೆ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯಾಗಿದ್ದರು.