ಕನ್ನಡ ನಾಡಿಗೆ ಬಂದಿಳಿದ ನೂತನ ರಾಜ್ಯಪಾಲ, ಗ್ರ್ಯಾಂಡ್ ವೆಲ್‌ಕಮ್
ರಾಜ್ಯಕ್ಕೆ ಹೊಸ ರಾಜ್ಯಪಾಲರ ನೇಮಕವಾಗಿದೆ. ಸುಮಾರು ಏಳು ವರ್ಷಗಳಿಂದ ಕರ್ನಾಟಕದ ರಾಜ್ಯಪಾಲರಾಗಿದ್ದ ವಜೂಭಾಯಿ ವಾಲಾ ಅವರ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ (73) ಅವರನ್ನು ನೇಮಕ ಮಾಡಲಾಗಿದೆ. ಇದೀಗ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕ್ಕೆ ಆಗಮಿಸಿದ್ದಾರೆ.

ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು(ಭಾನುವಾರ) ರಾಜ್ಯಕ್ಕಾಗಮಿಸಿದರು.

ಅವರನ್ನು ಕಂದಾಯ ಸಚಿವ ಆರ್ ಅಶೋಕ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗ ಪಿ ರವಿಕುಮಾರ್, ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕೂಡ ನೂತನ ರಾಜ್ಯಪಾಲರನ್ನ ಸ್ವಾಗತ ಕೋರಿದರು.

ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ರವಿವಾರ ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ...

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯವರಾದ ಗೆಹ್ಲೋಟ್ ಅವರು ದಲಿತ ಕುಟುಂಬದಲ್ಲಿ 1948ರ ಮೇ 18ರಂದು ಜನಿಸಿದ್ದಾರೆ.

ಬಿ.ಎ ಪದವೀಧರರಾಗಿರುವ ಅವರು, ಡಾ. ಬಿಆರ್ ಅಂಬೇಡ್ಕರ್ ಸಾಮಾಜಿಕ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.

ಕರ್ನಾಟಕದ ರಾಜ್ಯಪಾಲರಾಗಿ ಸುದೀರ್ಘಾವಧಿ ಕಾರ್ಯನಿರ್ವಹಿಸಿದ್ದ ವಜೂಭಾಯಿ ವಾಲಾ ಅವರ ಸ್ಥಾನಕ್ಕೆ ಇದೀಗ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.