ಶಿರಾ ಬೈಎಲೆಕ್ಷನ್:ನಂಜಾವಧೂತ ಶ್ರೀಗಳ ಆಶೀರ್ವಾದ ಪಡೆದು ಪ್ರಚಾರದ ಅಖಾಡಕ್ಕೆ ಧುಮುಕಿದ ನಿಖಿಲ್
ತುಮಕೂರು(ಅ.24): ರಾಜ್ಯದಲ್ಲಿ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ಆರ್.ಅರ್.ನಗರದ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ, ಜಡಿಎಸ್ ಪಕ್ಷಗಳು ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿವೆ. ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ಜೆಡಿಎಸ್ ಪಕ್ಷದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಕೂಡ ಪ್ರಚಾರ ಕಾರ್ಯಕ್ಕೆ ಧುಮುಕಿದ್ದಾರೆ.
ಇಂದು(ಶನಿವಾರ) ಜಿಲ್ಲೆಯ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿದ ನಿಖಿಲ್ ಕುಮಾರಸ್ವಾಮಿ
ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿಯ ಆಶೀರ್ವಾದ ಪಡೆದು ಬಳಿಕ ಪ್ರಚಾರಕ್ಕೆ ತೆರಳಿದ ನಿಖಿಲ್ ಕುಮಾರಸ್ವಾಮಿ. ಇದೇ ವೇಳೆ ಶ್ರೀಗಳನ್ನ ಸನ್ಮಾಸಿದ ನಿಖಿಲ್
ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರ ಪ್ರಚಾರ ನಡೆಸಲಿರುವ ನಿಖಿಲ್ ಕುಮಾರಸ್ವಾಮಿ
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಪಟ್ಟನಾಯಕನಹಳ್ಳಿ, ತಿಪ್ಪನಹಳ್ಳಿ, ಕಳ್ಳಂಬೆಳ್ಳ ಗ್ರಾಮಗಳಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ.
ಮಠದ ಆವರಣದಲ್ಲಿ ನಿಖಿಲ್ ಕುಮಾರಸ್ವಾಮಿ ಜೊತೆ ಫೋಟೋಗಾಗಿ ಮುಗಿಬಿದ್ದ ಅಭಿಮಾನಿಗಳು