MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಡಿ.ಕೆ.ಶಿವಕುಮಾರ್ ಭಧ್ರಕೋಟೆಯಲ್ಲಿರೋ ಒಡಿಶಾ ಶಾಸಕರಿಗೆ ಆಪರೇಷನ್ ಕಮಲ; ಬ್ಲ್ಯಾಂಕ್ ಚೆಕ್ ಸಮೇತ ಸಿಕ್ಕಿಬಿದ್ದ ಮುಖಂಡರು!

ಡಿ.ಕೆ.ಶಿವಕುಮಾರ್ ಭಧ್ರಕೋಟೆಯಲ್ಲಿರೋ ಒಡಿಶಾ ಶಾಸಕರಿಗೆ ಆಪರೇಷನ್ ಕಮಲ; ಬ್ಲ್ಯಾಂಕ್ ಚೆಕ್ ಸಮೇತ ಸಿಕ್ಕಿಬಿದ್ದ ಮುಖಂಡರು!

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ರಕ್ಷಣೆಯಲ್ಲಿ ಬಿಡದಿ ರೆಸಾರ್ಟ್‌ನಲ್ಲಿದ್ದ ಒಡಿಶಾ ಕಾಂಗ್ರೆಸ್ ಶಾಸಕರನ್ನು ಸೆಳೆಯಲು 'ಆಪರೇಷನ್ ಕಮಲ'ಕ್ಕೆ ಯತ್ನ ನಡೆದಿದೆ. ಬ್ಲ್ಯಾಂಕ್ ಚೆಕ್‌ಗಳ ಸಮೇತ ಬಂದಿದ್ದ ವ್ಯಕ್ತಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

2 Min read
Author : Sathish Kumar KH
Published : Mar 15 2026, 12:19 PM IST
Share this Photo Gallery
  • FB
  • TW
  • Linkdin
  • Whatsapp
16
ಟ್ರಬಲ್ ಶೂಟರ್ ಭಧ್ರಕೋಟೆಯಲ್ಲೇ ಆಪರೇಷನ್ ಕಮಲ
Image Credit : Asianet News

ಟ್ರಬಲ್ ಶೂಟರ್ ಭಧ್ರಕೋಟೆಯಲ್ಲೇ ಆಪರೇಷನ್ ಕಮಲ

ಬೆಂಗಳೂರು ದಕ್ಷಿಣ/ರಾಮನಗರ (ಮಾ.15): ದೇಶದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿನ 'ಟ್ರಬಲ್ ಶೂಟರ್' ಎಂದೇ ಖ್ಯಾತಿ ಪಡೆದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭದ್ರಕೋಟೆಯಲ್ಲೇ ಹೈವೋಲ್ಟೇಜ್ ರಾಜಕೀಯ ಡ್ರಾಮಾ ನಡೆದಿದೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಡದಿಯ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಒಡಿಶಾ ಕಾಂಗ್ರೆಸ್ ಶಾಸಕರನ್ನು ಸೆಳೆಯಲು 'ಆಪರೇಷನ್ ಕಮಲ'ಕ್ಕೆ ಯತ್ನ ನಡೆದಿದ್ದು, ಬ್ಲ್ಯಾಂಕ್ ಚೆಕ್‌ಗಳ ಸಮೇತ ಬಂದಿದ್ದ ವ್ಯಕ್ತಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

26
ಘಟನೆಯ ಹಿನ್ನೆಲೆ ಏನು?
Image Credit : Asianet News

ಘಟನೆಯ ಹಿನ್ನೆಲೆ ಏನು?

ನಾಳೆ ಒಡಿಶಾದಲ್ಲಿ ರಾಜ್ಯಸಭಾ ಚುನಾವಣೆ ನಡೆಯಲಿದೆ. ಈ ವೇಳೆ ಶಾಸಕರ ಕುದುರೆ ವ್ಯಾಪಾರ ನಡೆಯುವ ಭೀತಿಯಿಂದಾಗಿ ಒಡಿಶಾ ಕಾಂಗ್ರೆಸ್ ಶಾಸಕರನ್ನು ಡಿ.ಕೆ. ಶಿವಕುಮಾರ್ ಅವರ ರಕ್ಷಣೆಯಲ್ಲಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ರಾಮನಗರ ಜಿಲ್ಲೆಯ ಬಿಡದಿ ಸಮೀಪದ 'ವಂಡರ್ ಲಾ' ರೆಸಾರ್ಟ್‌ನಲ್ಲಿ ಈ ಶಾಸಕರಿಗೆ ವಾಸ್ತವ್ಯ ಕಲ್ಪಿಸಲಾಗಿತ್ತು. ಆದರೆ, ಶಾಸಕರು ಬೆಂಗಳೂರಿಗೆ ಬಂದರೂ ಆಪರೇಷನ್ ಕಮಲದ ಕರಿನೆರಳು ಮಾತ್ರ ಅವರನ್ನು ಬೆನ್ನಟ್ಟಿದೆ.

Related Articles

Related image1
ಒಡಿಶಾ ಕಾಂಗ್ರೆಸ್ ಶಾಸಕರಿಗೆ ಆಪರೇಷನ್ ಕಮಲದ ಭೀತಿ ಇಲ್ಲ: ಶಾಸಕ ಎಚ್.ಸಿ. ಬಾಲಕೃಷ್ಣ
Related image2
ಅಪರೇಶನ್‌ ಕಮಲಕ್ಕೆ ಹೆದರಿ ಬಿಡದಿ ರೆಸಾರ್ಟ್‌ಗೆ 8 ಕಾಂಗ್ರೆಸ್ ಶಾಸಕರು ಶಿಫ್ಟ್, ಮಹತ್ವದ ಬೆಳವಣಿಗೆ
36
ಬ್ಲ್ಯಾಂಕ್ ಚೆಕ್ ಹಿಡಿದು ಬಂದಿದ್ದ 'ಅತಿಥಿಗಳು'
Image Credit : Asianet News

ಬ್ಲ್ಯಾಂಕ್ ಚೆಕ್ ಹಿಡಿದು ಬಂದಿದ್ದ 'ಅತಿಥಿಗಳು'

ಒಡಿಶಾದಿಂದ ಬಂದಿದ್ದ ಮೂವರು ವ್ಯಕ್ತಿಗಳು ಶಾಸಕರು ತಂಗಿದ್ದ ಅದೇ ವಂಡರ್ ಲಾ ರೆಸಾರ್ಟ್‌ನಲ್ಲಿ ರೂಂ ಬುಕ್ ಮಾಡಿಕೊಂಡಿದ್ದರು. ಶಾಸಕರ ಜೊತೆ ಮಾತುಕತೆ ನಡೆಸಿ ಅವರನ್ನು ತಮ್ಮತ್ತ ಸೆಳೆಯಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಶಾಸಕರನ್ನು ಖರೀದಿ ಮಾಡಲು ಈ ವ್ಯಕ್ತಿಗಳು ತಮ್ಮೊಂದಿಗೆ ಸಹಿ ಮಾಡಿರುವ 'ಬ್ಲ್ಯಾಂಕ್ ಚೆಕ್'ಗಳನ್ನು (ಸಹಿ ಮಾಡಿದ ಖಾಲಿ ಚೆಕ್) ತಂದಿದ್ದರು. ಈ ಚೆಕ್‌ಗಳು ಒಡಿಶಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಗೆ ಸೇರಿದವು ಎಂದು ತಿಳಿದುಬಂದಿದೆ.

46
ಸ್ಥಳೀಯ ಕಾಂಗ್ರೆಸ್ ಮುಖಂಡರಿಂದ ಪತ್ತೆ
Image Credit : Asianet News

ಸ್ಥಳೀಯ ಕಾಂಗ್ರೆಸ್ ಮುಖಂಡರಿಂದ ಪತ್ತೆ

ಶಾಸಕರನ್ನು ಭೇಟಿ ಮಾಡಲು ಈ ವ್ಯಕ್ತಿಗಳು ಪ್ರಯತ್ನಿಸುತ್ತಿದ್ದಾಗ ಅನುಮಾನಗೊಂಡ ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಅವರನ್ನು ತಡೆದು ಪ್ರಶ್ನಿಸಿದ್ದಾರೆ. ಈ ವೇಳೆ ಅವರ ಬಳಿ ಬ್ಲ್ಯಾಂಕ್ ಚೆಕ್‌ಗಳು ಪತ್ತೆಯಾಗಿದ್ದು, ಆಪರೇಷನ್ ಕಮಲದ ಹೂರಣ ಬಯಲಾಗಿದೆ. ತಕ್ಷಣವೇ ಕಾರ್ಯಕರ್ತರು ಆ ಮೂವರನ್ನು ಹಿಡಿದು ಕೂರಿಸಿದ್ದು, ಬಿಡದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

56
ಸ್ಥಳಕ್ಕೆ ಪೊಲೀಸರ ಭೇಟಿ:
Image Credit : Asianet News

ಸ್ಥಳಕ್ಕೆ ಪೊಲೀಸರ ಭೇಟಿ:

ಮಾಹಿತಿ ಸಿಗುತ್ತಿದ್ದಂತೆಯೇ ಬಿಡದಿ ಪೊಲೀಸರು ರೆಸಾರ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಅವರು ತಂದಿದ್ದ ಬ್ಲ್ಯಾಂಕ್ ಚೆಕ್ ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇವರು ಯಾರ ಪರವಾಗಿ ಬಂದಿದ್ದರು? ಇವರಿಗೆ ಹಣದ ಆಮಿಷ ಒಡ್ಡಲು ಸೂಚಿಸಿದವರು ಯಾರು? ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. 

'ಡಿ.ಕೆ. ಶಿವಕುಮಾರ್ ಅವರ ರಕ್ಷಣೆಯಲ್ಲಿದ್ದರೂ ಬಿಜೆಪಿ ಇಂತಹ ಕೆಳಮಟ್ಟದ ರಾಜಕಾರಣಕ್ಕೆ ಇಳಿದಿದೆ. ಬ್ಲ್ಯಾಂಕ್ ಚೆಕ್ ಹಿಡಿದು ಶಾಸಕರನ್ನು ಖರೀದಿ ಮಾಡಲು ಬಂದಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ' ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಹಣದ ಬಲ ಬಳಸುತ್ತಿದೆ ಎಂಬುದು ಇದರಿಂದ ಸಾಬೀತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

66
ರೆಸಾರ್ಟ್ ಸುತ್ತಮುತ್ತ ಪೊಲೀಸ್ ಭದ್ರತೆ
Image Credit : Asianet News

ರೆಸಾರ್ಟ್ ಸುತ್ತಮುತ್ತ ಪೊಲೀಸ್ ಭದ್ರತೆ

ನಾಳೆ ಚುನಾವಣೆ ನಡೆಯಲಿರುವ ಕಾರಣ, ಉಳಿದಿರುವ ಕೆಲವೇ ಗಂಟೆಗಳಲ್ಲಿ ಯಾವುದೇ ಅಹಿತಕರ ಘಟನೆ ಅಥವಾ ಶಾಸಕರ ಖರೀದಿ ನಡೆಯದಂತೆ ರೆಸಾರ್ಟ್ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಡಿ.ಕೆ. ಶಿವಕುಮಾರ್ ಅವರ ತವರಲ್ಲೇ ನಡೆದ ಈ ಆಪರೇಷನ್ ಕಮಲ ಯತ್ನ ಈಗ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ರಾಜಕೀಯ ಸುದ್ದಿ
ಡಿ.ಕೆ. ಶಿವಕುಮಾರ್
ಒಡಿಶಾ
ಕರ್ನಾಟಕ ರಾಜಕೀಯ
Latest Videos
Recommended Stories
Recommended image1
'ಚುಂಚುಶ್ರೀ ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ...' ವಿವಾದ ಸೃಷ್ಟಿಸಿದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಹೆಚ್‌ಡಿಕೆ ಹೇಳಿದ್ದೇನು?
Recommended image2
Karnataka News Live: Kamal Haasan Controversy - 'ಆ ನಟಿಗೆ ಯಾಕೆ ಅಷ್ಟು ಸ್ಕೋಪ್?'; ಕಮಲ್ ಸಿನಿಮಾ ಬಿಡಲು ಕಾರಣ 30 ವರ್ಷಗಳ ನಂತರ ಬಯಲು!
Recommended image3
ಮುಳುಗಡೆ ಸಂತ್ರಸ್ತರಿಗೆ ವಿಷ ಕೊಟ್ಟವರೇ ಬಿಜೆಪಿಯವರು: ಶಾಸಕ ಗೋಪಾಲಕೃಷ್ಣ ಬೇಳೂರು
Related Stories
Recommended image1
ಒಡಿಶಾ ಕಾಂಗ್ರೆಸ್ ಶಾಸಕರಿಗೆ ಆಪರೇಷನ್ ಕಮಲದ ಭೀತಿ ಇಲ್ಲ: ಶಾಸಕ ಎಚ್.ಸಿ. ಬಾಲಕೃಷ್ಣ
Recommended image2
ಅಪರೇಶನ್‌ ಕಮಲಕ್ಕೆ ಹೆದರಿ ಬಿಡದಿ ರೆಸಾರ್ಟ್‌ಗೆ 8 ಕಾಂಗ್ರೆಸ್ ಶಾಸಕರು ಶಿಫ್ಟ್, ಮಹತ್ವದ ಬೆಳವಣಿಗೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved