ಬಿಜೆಪಿ ಧರ್ಮ ರಾಜಕೀಯಕ್ಕೆ ಜನ ಬ್ರೇಕ್ ಹಾಕ್ತಾರೆ: ಸಚಿವ ಮಧು ಬಂಗಾರಪ್ಪ
ಹಣ ಹಾಗೂ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯವರು ನ್ಯಾಯ ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ ಜನರೇ ಬ್ರೇಕ್ ಹಾಕುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ (ಏ.11): ಹಣ ಹಾಗೂ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿಯವರು ನ್ಯಾಯ ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ ಜನರೇ ಬ್ರೇಕ್ ಹಾಕುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸವಳಂಗ ರಸ್ತೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಯುಗಾದಿ ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಬಿಜೆಪಿಯವರು ದೇವರನ್ನು ಬೀದಿಗೆ ತಂದು ಮತ ಕೇಳುತ್ತಿದ್ದಾರೆ. ಇದು ರಾಜಕೀಯದಲ್ಲಿ ಸಲ್ಲದು ಎಂದರು.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಕುಂಚೇಹಳ್ಳಿಯಲ್ಲಿ ಅಭಿಮಾನಿ ಬಳಗ ಹೆಚ್ಚು. ನನಗೆ ಹಾಗೂ ಗೀತಕ್ಕಗೆ ಈಗ ತಂದೆ ಇಲ್ಲ. ಆದ್ದರಿಂದ ನೀವೇ ನಮ್ಮ ತಂದೆ-ತಾಯಿ. ಇಂದಿನಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ.
ಬಂಗಾರಪ್ಪ ಅವರಿಗೆ ನೀಡಿದ್ದ ಪ್ರೋತ್ಸಾಹ ಗೀತಾ ಅವರಿಗೂ ನೀಡಿ ಎಂದು ಕೋರಿದರು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಬಡತನ ನಿರ್ಮೂಲನೆ ಹಾಗೂ ಬಡ ಕುಟುಂಬಗಳ ಹಸಿವು ನೀಗಿಸುವುದು.
ಅದೇ, ಉದ್ದೇಶದಿಂದ ಲೋಕಸಭಾ ಚುನಾವಣೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನ ಸಾಮಾನ್ಯರಿಗೆ ಪೂರಕವಾದ ಯೋಜನೆಗಳನ್ನು ಘೋಷಿಸಲಾಗಿದೆ ಎಂದರು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್, ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.