Karnataka Congress: ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು(ಮಾ.17): ನಟ, ನಿರ್ದೇಶಕ ಎಸ್.ನಾರಾಯಣ್(S Narayan) ಅವರು ತಮ್ಮ ಪುತ್ರನಾದ ನಟ ಪಂಕಜ್ ನಾರಾಯಣ್(Pankaj Narayan) ಅವರ ಸಮೇತ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬುಧವಾರ ನಗರದ ಕೆಪಿಸಿಸಿ(KPCC) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಕಾಂಗ್ರೆಸ್(Congress) ಪಕ್ಷ ಸೇರ್ಪಡೆಯಾದ ಎಸ್.ನಾರಾಯಣ್ ಹಾಗೂ ನಟ ಪಂಕಜ್ ನಾರಾಯಣ್
ಪಕ್ಷದಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ. 2023ಕ್ಕೆ ರಾಜ್ಯದಲ್ಲಿ(Karnataka) ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ. ಇದಕ್ಕಾಗಿ ಹಗಲಿರುಳು ಕೆಲಸ ಮಾಡುತ್ತೇನೆ ಎಂದು ತಿಳಿಸಿದ ಎಸ್.ನಾರಾಯಣ್
ಎಸ್.ನಾರಾಯಣ್ ಅವರು ಸ್ವಇಚ್ಛೆಯಿಂದ ಕಾಂಗ್ರೆಸ್‌ಗೆ ಪಕ್ಷದ ಸಿದ್ಧಾಂತ ಒಪ್ಪಿ ಸೇರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಸಮುದಾಯ, ಚಿತ್ರರಂಗ, ವಾಣಿಜ್ಯ ಮಂಡಳಿ ಸೇರಿದಂತೆ ಎಲ್ಲ ಕಡೆ ಪಕ್ಷದ ಸಂಘಟನೆ ಮಾಡುವ ವಿಶ್ವಾಸವಿದೆ ಎಂದು ಹೇಳಿದ ಡಿ.ಕೆ. ಶಿವಕುಮಾರ್
ಇದೇ ವೇಳೆ ಯಾದಗಿರಿ(Yadgir) ಜಿಲ್ಲೆಯ ಶಹಾಪುರದ ತಿಮ್ಮಯ್ಯ ಪುರ್ಲೆ ಸೇರ್ಪಡೆಯಾಗಿದ್ದಾರೆ. ಇವರು ಉತ್ತರ ಕರ್ನಾಟಕ(North Karnataka) ಭಾಗದಲ್ಲಿ ಪಕ್ಷಕ್ಕೆ ಶಕ್ತಿಯಾಗಲಿದ್ದಾರೆ. ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ(Vidhan Parishat Election) ನಾವು ಗುರಿಕಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು ಅವರಿಗೆ ತಿಮ್ಮಯ್ಯ ಅವರು ಶಕ್ತಿ ತುಂಬಲಿದ್ದಾರೆ ಎಂದ ಡಿಕೆಶಿ