- Home
- News
- Politics
- ಡಬಲ್ ಗುಡ್‌ನ್ಯೂಸ್ ನಿರೀಕ್ಷೆಯಲ್ಲಿದ್ದ ಸತೀಶ್ ಜಾರಕಿಹೊಳಿಗೆ ಶಾಕ್; ಬಿಕೆ ಹರಿಪ್ರಸಾದ್‌ಗೆ ಜಾಕ್‌ಪಾಟ್
ಡಬಲ್ ಗುಡ್‌ನ್ಯೂಸ್ ನಿರೀಕ್ಷೆಯಲ್ಲಿದ್ದ ಸತೀಶ್ ಜಾರಕಿಹೊಳಿಗೆ ಶಾಕ್; ಬಿಕೆ ಹರಿಪ್ರಸಾದ್‌ಗೆ ಜಾಕ್‌ಪಾಟ್
ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿದೆ ಎನ್ನಲಾಗಿದೆ. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೇ ಖುದ್ದು ಕರೆ ಮಾಡಿ ಸೂಚನೆ ನೀಡಿದ್ದು, ಹರಿಪ್ರಸಾದ್ ಅವರು ಈ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್
ಬೆಳಗಾವಿ ಭಾಗದ ಪ್ರಮುಖ ನಾಯಕರಾಗಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಜೊತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಸತೀಶ್ ಜಾರಕಿಹೊಳಿ ಡಿಮ್ಯಾಂಡ್ ಮಾಡಿದ್ರು ಎನ್ನಲಾಗುತ್ತಿತ್ತು. ಆದ್ರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಪಾಲಾಗಿದೆ ಎಂಬ ಮಾಹಿತಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
ರಾಹುಲ್ ಗಾಂಧಿ ಕರೆ
ಬಿ.ಕೆ.ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೇ ಕರೆ ಮಾಡಿ, ಕೆಪಿಸಿಸಿ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳವಂತೆ ಸೂಚನೆ ನೀಡಿದ್ದಾರೆ ಎಂದು ಎಐಸಿಸಿ ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ: DK Shivakumar: ವಾಸ್ತು ಪ್ರಕಾರ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಅಜ್ಜಯ್ಯನ ಫೋಟೋ!
ಬಿ.ಕೆ.ಹರಿಪ್ರಸಾದ್
ಬಿ.ಕೆ.ಹರಿಪ್ರಸಾದ್ ಅವರು ಸಚಿವ ಸ್ಥಾನದ ಮೇಲೆ ನಿರೀಕ್ಷೆ ಹೊಂದಿದ್ದರು. ಆದ್ರೆ ಹೈಕಮಾಂಡ್ ನಾಯಕರ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷರಾಗಲು ಬಿ.ಕೆ.ಹರಿಪ್ರಸಾದ ಸಮ್ಮತಿ ಸೂಚಿಸಿದ್ದಾರಂತೆ. ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಇದನ್ನೂ ಓದಿ: ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.