ಲೆಕ್ಕ ಕೇಳಿದ ಅಮಿತ್ ಶಾಗೆ ಅಂಕಿ-ಸಂಖ್ಯೆ ಸಮೇತ ಉತ್ತರ ಕೊಟ್ಟ ಸಿದ್ದರಾಮಯ್ಯ
ನಿನ್ನೆ (ಜ.17) ಬೆಳಗಾವಿಯಲ್ಲಿ ನಡೆದ ಜನಸೇವಕ್ ಸಮಾವೇಶದಲ್ಲಿ ಅಮಿತ್ ಶಾ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕರ್ನಾಟಕಕ್ಕೆ ಎಷ್ಟು ಹಣ ನೀಡಿದ್ದಾರೆ ಅಂತ ಲೆಕ್ಕ ಕೊಡಲಿ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇಂದು (ಸೋಮವಾರ) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಹಿಂದೆ ರಾಜ್ಯಕ್ಕೆ ಕೇಂದ್ರದಿಂದ ಹರಿದುಬಂದ ಹಣದ ಬಗ್ಗೆ ಅಂಕಿ-ಸಂಖ್ಯೆ ಮೂಲಕ ವಿವರ ನೀಡಿ ಅಮಿತ್ ಶಾಗೆ ತಿರುಗೇಟು ಕೊಟ್ಟಿದ್ದಾರೆ. ಲೆಕ್ಕ ಇಲ್ಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುಪಿಎ ಸರ್ಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಕ್ಕೆ ಸಿದ್ದರಾಮಯ್ಯನವರು ಅಂಕಿ-ಸಂಖ್ಯೆ ಸಮೇತ ಲೆಕ್ಕ ಕೊಟ್ಟಿದ್ದಾರೆ.
ಸರಣಿ ಟ್ವೀಟ್ಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ರಾಜ್ಯಕ್ಕೆ ಕೇಂದ್ರದಿಂದ ಹರಿದುಬಂದ ಹಣದ ಬಗ್ಗೆ ವಿವರ ನೀಡಿದ್ದಾರೆ.
ಲೆಕ್ಕ ಕೊಡುವ ಮೂಲಕ ರಾಜ್ಯಕ್ಕೆ ಆಗಮಿಸಿದಾಗ ಅಮಿತ್ ಶಾ ಹೋಮ್ ವರ್ಕ್ ಮಾಡಿಕೊಂಡು ಬರಲಿ ಎಂದು ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಈ ರೀತಿ ತಿರುಚಿದ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಆರೋಪಗಳನ್ನು ಮಾಡುವ ಮೊದಲು ಕೇಂದ್ರ ಹೋಮ್ ಮಿನಿಸ್ಟರ್ ಅಮಿತ್ ಶಾ ಅವರು ಮತ್ತೊಮ್ಮೆ ತಮ್ಮ ಹೋಂವರ್ಕ್ ಸರಿಯಾಗಿ ಮಾಡಿಕೊಂಡು ಬರಬೇಕೆಂದು ಅವರಿಗೆ ಸಲಹೆ ನೀಡುತ್ತೇನೆ ಎಂದಿದ್ದಾರೆ.
ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುಪಿಎ ಸರ್ಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದರು.
ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿದೆ ಎಂದು ಒಂದಷ್ಟು ಸುಳ್ಳು ಅಂಕಿ-ಅಂಶಗಳನ್ನು ಮುಂದಿಟ್ಟು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಆಯೋಜಿಸಿದ್ದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಅಂಶಗಳ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ
ಲೆಕ್ಕ ಕೊಟ್ಟಿರುವ ಸಿದ್ದರಾಮಯ್ಯ, ಅಮಿತ್ ಶಾ ರಾಜ್ಯಕ್ಕೆ ಆಗಮಿಸುವ ಮುನ್ನ ಹೋಮ್ ವರ್ಕ್ ಮಾಡಿಕೊಂಡ ಬರಬೇಕೆಂದು ಲೇವಡಿ ಮಾಡಿದ್ದಾರೆ.
ವ್ಯಾಪಾರದಲ್ಲಿ ನುರಿತ ಗುಜರಾತಿಗಳು ಲೆಕ್ಕದಲ್ಲಿ ಪಕ್ಕಾ ಎನ್ನುವ ಅಭಿಪ್ರಾಯ ಇದೆ. ಆದರೆ ಗುಜರಾತ್ ರಾಜ್ಯದವರಾದ ಪ್ರಧಾನಿ ಮತ್ತು ಗೃಹಸಚಿವರು ಬಾಯಿಬಿಟ್ಟರೆ ಸುಳ್ಳು ಲೆಕ್ಕಗಳೇ ಉದುರುತ್ತವೆ. ಗೃಹ ಸಚಿವ ಅಮಿತ್ ಶಾ ಅವರು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿಹೋಗಿದ್ದಾರೆ ಎಂದು ಸಿದ್ದು ವ್ಯಂಗ್ಯವಾಡಿದರು.
ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಕೇಳಬೇಕು ಮತ್ತು ತಾಳ್ಮೆಯಿಂದ ಉತ್ತರ ಕೊಡಬೇಕು ಎಂದು ಸಿದ್ದರಾಮಯ್ಯನವರು ಅಮಿತ್ ಶಾಗೆ ಮರು ಪ್ರಶ್ನೆ ಹಾಕಿದ್ದಾರೆ.
ದಶಕಗಳ ನಮ್ಮ ಒಟ್ಟು ಸಾಲ ಅಂದಾಜು ರೂ.3.2ಲಕ್ಷ ಕೋಟಿ. ಆದರೆ ಈಗಿನ ಒಂದೇ ವರ್ಷದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ ಎಂದು ಸಿದ್ದು ಲೆಕ್ಕ ಕೊಟ್ಟರು.