ಬೈ ಎಲೆಕ್ಷನ್: ಶಿರಾದಲ್ಲಿ ಧೂಳೆಬ್ಬಿಸಿದ ಡಿಕೆ ಶಿವಕುಮಾರ್-ಸಿದ್ಧರಾಮಯ್ಯ
ಟಿಕೆಟ್ ಕೈತಪ್ಪಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಅ.9ರಂದು ಬಿ.ಫಾರಂ ಇಲ್ಲದೆ ಟಿಕೆಟ್ ಘೋಷಣೆಗೂ ಮೊದಲೇ ತರಾತುರಿಯಲ್ಲಿ ನಾಮಪತ್ರ ಸಲ್ಲಿಸಿದ ಟಿ.ಬಿ.ಜಯಚಂದ್ರ ಅವರು ಇಂದು (ಗುರುವಾರ) ಅಪಾರ ಜನರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಕೊರೋನಾ ಭೀತಿ ನಡುವೆಯೂ ಜನಸಾಗರವೇ ಸೇರಿತ್ತು...
ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಟಿ. ಬಿ. ಜಯಚಂದ್ರ ನಾಮಪತ್ರ ಸಲ್ಲಿಕೆ ಮಾಡಿದರು.
ಅಕ್ಟೋಬರ್ 9ರ ಶುಕ್ರವಾರ ಚುನಾವಣಾ ಅಧಿಸೂಚನೆ ಪ್ರಕಟವಾದ ದಿನ ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ಟಿ. ಬಿ. ಜಯಚಂದ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಿಫಾರಂ ಜೊತೆ ಇಂದು ಅಧಿಕೃತವಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಿದರು.
ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಉಪಸ್ಥಿತರಿದ್ದರು.
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಅವರನ್ನ ಮುಗಿಬಿದ್ದರು
ಮೊದಲೇ ವಿಶ್ವದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತ ಕಾಯ್ದುಕೊಳ್ಳಿ ಎಂದು ಸರ್ಕಾರಗಳು ಮಾರ್ಗಸೂಚಿಗಳನ್ನ ಹೊರಡಿಸಿದರು. ಇಲ್ಲಿ ಯಾವುದೇ ಲೆಕ್ಕಕ್ಕಿರಲಿಲ್ಲ.
ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಫಲಿತಾಂಶ ಪ್ರಕಟವಾಗಲಿದೆ.
ರ್ಯಾಲಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು.