MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಬರೋಬ್ಬರಿ 5 ಪುಟಗಳ ಸುದೀರ್ಘ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಅಣ್ಣಾಮಲೈ!

ಬರೋಬ್ಬರಿ 5 ಪುಟಗಳ ಸುದೀರ್ಘ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಅಣ್ಣಾಮಲೈ!

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಹೈಕಮಾಂಡ್ ಜೊತೆಗಿನ ಭಿನ್ನಾಭಿಪ್ರಾಯದಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮದೇ ಆದ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸುವ ಮೂಲಕ 'ದ್ರಾವಿಡ ಮಾದರಿ'ಗೆ ಪರ್ಯಾಯವನ್ನು ಒದಗಿಸಲು ಸಜ್ಜಾಗಿದ್ದಾರೆ.

2 Min read
Author : Gowthami K
Published : Jun 02 2026, 06:24 PM IST
Share this Photo Gallery
  • FB
  • TW
  • Linkdin
  • Whatsapp
16
ತಮಿಳುನಾಡಿನಲ್ಲಿ ದ್ರಾವಿಡ ಯುಗ ಅಂತ್ಯ?
Image Credit : ANI

ತಮಿಳುನಾಡಿನಲ್ಲಿ ದ್ರಾವಿಡ ಯುಗ ಅಂತ್ಯ?

ಚೆನ್ನೈ: ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಮುಂದಿನ ರಾಜಕೀಯ ನಡೆ ಕೊನೆಗೂ ಸ್ಪಷ್ಟವಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಿದ್ದ ಅಣ್ಣಾಮಲೈ, ಪ್ರಸ್ತುತ ರಾಷ್ಟ್ರೀಯ ನಾಯಕರ ಕಡೆಗಣನೆಯಿಂದ ಬೇಸತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಗಳವಾರ (ಜೂನ್ 2) ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿ ಮಾಡಿದ ಅಣ್ಣಾಮಲೈ, ತಮ್ಮ 5 ಪುಟಗಳ ಸುದೀರ್ಘ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ಈ ಬೆಳವಣಿಗೆಯು ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಗೃಹ ಸಚಿವ ಅಮಿತ್ ಶಾ ಭೇಟಿ
Image Credit : ANI

ಗೃಹ ಸಚಿವ ಅಮಿತ್ ಶಾ ಭೇಟಿ

ರಾಜೀನಾಮೆ ಸಲ್ಲಿಕೆಯ ಬೆನ್ನಲ್ಲೇ ಅಣ್ಣಾಮಲೈ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಹೈಕಮಾಂಡ್ ನಾಯಕರು ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಜವಾಬ್ದಾರಿ ನೀಡಲು ಕೊನೆಯ ಕ್ಷಣದವರೆಗೂ ಮನವೊಲಿಸುವ ಪ್ರಯತ್ನ ನಡೆಸಿದರಾದರೂ, ಅಣ್ಣಾಮಲೈ ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದಾರೆ ಎನ್ನಲಾಗಿದೆ. "ನನ್ನದೇ ಆದ ಸ್ವತಂತ್ರ ರಾಜಕೀಯ ಮಾರ್ಗವನ್ನು ರೂಪಿಸಿಕೊಳ್ಳಲು ಬಯಸುತ್ತೇನೆ" ಎಂದು ಅವರು ಹೈಕಮಾಂಡ್‌ಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ

Related Articles

Related image1
ಎರಡು ದಿನ ಕಾಯಿರಿ, ಬಿಜೆಪಿ ತೊರೆಯುವ ಪ್ರಶ್ನೆಗೆ ಅಣ್ಣಾಮಲೈ ಉತ್ತರ, ಹುಟ್ಟಹಬ್ಬಕ್ಕೆ ಹೊಸ ಪಾರ್ಟಿ?
Related image2
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ!
36
ಅಣ್ಣಾಮಲೈ ಅಸಮಾಧಾನಕ್ಕೆ ಕಾರಣವೇನು?
Image Credit : X

ಅಣ್ಣಾಮಲೈ ಅಸಮಾಧಾನಕ್ಕೆ ಕಾರಣವೇನು?

2020ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿ ಅತ್ಯಂತ ಕಿರಿಯ ವಯಸ್ಸಿಗೆ ತಮಿಳುನಾಡು ಬಿಜೆಪಿ ಸಾರಥ್ಯ ವಹಿಸಿದ್ದ ಅಣ್ಣಾಮಲೈ ಮತ್ತು ಹೈಕಮಾಂಡ್ ನಡುವಿನ ಭಿನ್ನಾಭಿಪ್ರಾಯ ಇತ್ತೀಚಿನ ದಿನಗಳಲ್ಲಿ ತಾರಕಕ್ಕೇರಿತ್ತು. 2026ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಎಐಎಡಿಎಂಕೆ (AIADMK) ಜೊತೆ ಮೈತ್ರಿ ಪುನರುಜ್ಜೀವನಗೊಳಿಸಲು ಹೈಕಮಾಂಡ್ ಬಯಸಿತ್ತು. ಆದರೆ ಅಣ್ಣಾಮಲೈ ಅವರ ಆಕ್ರಮಣಕಾರಿ ಶೈಲಿ ಹಾಗೂ ಇವಿಆರ್, ಎಂಜಿಆರ್ ಮತ್ತು ಜಯಲಲಿತಾ ಅವರ ಮೇಲಿನ ರಾಜಕೀಯ ಟೀಕೆಗಳು ಮೈತ್ರಿಗೆ ಮುಳುವಾಗಿದ್ದವು. ಈ ಕಾರಣ ನೀಡಿ 2025ರಲ್ಲೇ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ, ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಲಾಯಿತು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈ ತಾವು ಸ್ಪರ್ಧಿಸಲು ಇಚ್ಛಿಸಿದ್ದ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಟಿಕೆಟ್ ನಿರಾಕರಿಸಿತ್ತು. ಆದಾಗ್ಯೂ, ಅವರು ಪಕ್ಷದ ಪರವಾಗಿ ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದರು. ಆದರೆ, ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದ್ದು ಅಣ್ಣಾಮಲೈ ಬೆಂಬಲಿಗರನ್ನು ಮತ್ತಷ್ಟು ಕೆರಳಿಸಿತ್ತು. ಅಣ್ಣಾಮಲೈ ಅವರ ಶ್ರಮವನ್ನು ಹೈಕಮಾಂಡ್ ಸರಿಯಾಗಿ ಗುರುತಿಸುತ್ತಿಲ್ಲ ಎಂಬ ಅಸಮಾಧಾನ ಅವರ ಆಪ್ತ ವಲಯದಲ್ಲಿ ತೀವ್ರವಾಗಿತ್ತು.

46
ನಟ ವಿಜಯ್ ಎಂಟ್ರಿ ಮತ್ತು ಬದಲಾದ ರಾಜಕೀಯ ಸಮೀಕರಣ
Image Credit : X

ನಟ ವಿಜಯ್ ಎಂಟ್ರಿ ಮತ್ತು ಬದಲಾದ ರಾಜಕೀಯ ಸಮೀಕರಣ

ಅಣ್ಣಾಮಲೈ ಅವರ ಈ ತೀರ್ಮಾನದ ಹಿಂದೆ ತಮಿಳುನಾಡಿನ ಪ್ರಸ್ತುತ ರಾಜಕೀಯ ಸ್ಥಿತ್ಯಂತರಗಳು ಪ್ರಮುಖ ಪಾತ್ರ ವಹಿಸಿವೆ. ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಅವರು ಸಿನಿಮಾ ರಂಗ ತ್ಯಜಿಸಿ "ತಮಿಳಗ ವೆಟ್ರಿ ಕಳಗಂ" (TVK) ಪಕ್ಷ ಸ್ಥಾಪಿಸಿ ಯಶಸ್ವಿಯಾಗಿ ಉದಯಿಸಿರುವುದು ಅಣ್ಣಾಮಲೈ ಅವರ ಯೋಚನೆಯನ್ನು ಬದಲಿಸಿದೆ.

ತಮಿಳುನಾಡಿನಲ್ಲಿ ಸಾಂಪ್ರದಾಯಿಕ ದ್ರಾವಿಡ ರಾಜಕೀಯದ ಯುಗ ಮುಗಿದಿದೆ. ಕೇವಲ ಭಾಷಾ ಪ್ರೇಮದ ಮೇಲಿನ ರಾಜಕೀಯ ಇನ್ಮುಂದೆ ನಡೆಯುವುದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಟ ವಿಜಯ್ ಅವರ ಜನಪ್ರಿಯತೆಗೆ ಸರಿಸಮನಾಗಿ ನಿಂತು ಹೋರಾಡಬಲ್ಲ ಸಮರ್ಥ ನಾಯಕ ರಾಜ್ಯದಲ್ಲಿಲ್ಲ. ಈ ಶೂನ್ಯವನ್ನು ತುಂಬಲು ಅಣ್ಣಾಮಲೈ ಅವರಿಗೆ ಪ್ರಾದೇಶಿಕ ಅಸ್ಮಿತೆಯ ವೇದಿಕೆ ಅಗತ್ಯವಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

56
ಜೂನ್ 4ಕ್ಕೆ ಹೊಸ ಅವತಾರ, ಬೆಂಬಲಿಗರ ಪೋಸ್ಟರ್ ವಾರ್!
Image Credit : x

ಜೂನ್ 4ಕ್ಕೆ ಹೊಸ ಅವತಾರ, ಬೆಂಬಲಿಗರ ಪೋಸ್ಟರ್ ವಾರ್!

ಬಿಜೆಪಿಯಿಂದ ಹೊರಬರಲಿರುವ ಅಣ್ಣಾಮಲೈ ಮುಂದೇನು ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಜೂನ್ 4 ರಂದು ಉತ್ತರ ಸಿಗುವ ಸಾಧ್ಯತೆ ಇದೆ. ಅಂದು ಅಣ್ಣಾಮಲೈ ಅವರ ಜನ್ಮದಿನವಾಗಿದ್ದು, ಈ ಸಂದರ್ಭದಲ್ಲೇ ಅವರು ತಮ್ಮ ಸ್ವಂತ ಪ್ರಾದೇಶಿಕ ಪಕ್ಷ ಅಥವಾ ಜನಾಂದೋಲನ ವೇದಿಕೆಯನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ವರದಿಯಾಗಿದೆ.

ಈಗಾಗಲೇ ಕೊಯಮತ್ತೂರು ಹಾಗೂ ಮಧುರೈನಾದ್ಯಂತ ಅವರ ಬೆಂಬಲಿಗರು ಬೃಹತ್ ಪೋಸ್ಟರ್‌ಗಳನ್ನು ಅಂಟಿಸಿದ್ದು, ಅಣ್ಣಾಮಲೈ ಅವರ ಮುಂದಿನ ಅವತಾರವೇ ತಮಿಳುನಾಡಿನ ರಕ್ಷಣೆ ಎಂದು ಘೋಷಿಸಿದ್ದಾರೆ. ಮೂಲಗಳ ಪ್ರಕಾರ, ಬಿಜೆಪಿಯ ಕೇಂದ್ರ ನಾಯಕತ್ವ ನೀಡಿದ ದೆಹಲಿ ಮಟ್ಟದ ಹುದ್ದೆಗಳ ಆಫರ್ ಅನ್ನು ಸಂಪೂರ್ಣವಾಗಿ ತಿರಸ್ಕರಿಸಿರುವ ಅವರು, ತಮಿಳುನಾಡಿನಲ್ಲೇ ನೆಲೆ ನಿಂತು 'ದ್ರಾವಿಡ ಮಾದರಿ'ಗೆ ಪರ್ಯಾಯವಾಗಿ ತೀವ್ರ ರಾಷ್ಟ್ರೀಯತಾವಾದಿ ಸದ್ಧಾಂತಿಕ ಪ್ರಾದೇಶಿಕ ಪಕ್ಷವನ್ನು ಕಟ್ಟಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

66
ಎರಡು ದಿನಗಳ ಕಾಲ ತಾಳ್ಮೆಯಿಂದ ಕಾಯುವಂತೆ ವಿನಂತಿ
Image Credit : Asianet News

ಎರಡು ದಿನಗಳ ಕಾಲ ತಾಳ್ಮೆಯಿಂದ ಕಾಯುವಂತೆ ವಿನಂತಿ

ಚೆನ್ನೈನಿಂದ ದೆಹಲಿಗೆ ತೆರಳುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ್ದ ಅಣ್ಣಾಮಲೈ, ಎರಡು ದಿನಗಳ ಕಾಲ ತಾಳ್ಮೆಯಿಂದ ಕಾಯುವಂತೆ ವಿನಂತಿಸಿದ್ದರು. ಆ ಎರಡು ದಿನಗಳ ಗಡುವು ನಾಳೆಗೆ ಮುಗಿಯಲಿದ್ದು, ಬುಧವಾರ ಅಥವಾ ಗುರುವಾರ ಅವರ ರಾಜಕೀಯ ಭವಿಷ್ಯದ ಅಧಿಕೃತ ಘೋಷಣೆ ಹೊರಬೀಳಲಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ತಮಿಳುನಾಡು
ಅಣ್ಣಾಮಲೈ
ಅಮಿತ್ ಶಾ
ರಾಜಕೀಯ ಸುದ್ದಿ
ಬಿಜೆಪಿ
Latest Videos
Recommended Stories
Recommended image1
Thalapathy Vijay: ಫಸ್ಟ್ ಭಾಷಣದಲ್ಲೇ ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ‌ ಎಬ್ಬಿಸಿದ ಹೊಸ ಸಿಎಂ ವಿಜಯ್
Recommended image2
ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿ ಅಂತಿಮ, ಇಲ್ಲಿದೆ ಸಂಪುಟ ಪಟ್ಟಿ!
Recommended image3
ಬಿಜೆಪಿ, ಕಾಂಗ್ರೆಸ್‌ ಬಿಟ್ಟು ಜೆಡಿಎಸ್‌ಗೆ ಸೇರಿದ್ಯಾಕೆ? ಟ್ರೋಲರ್ಸ್‌ಗೆ ಬಿಗ್‌ಬಾಸ್‌ ಜಾಹ್ನವಿ ಕೊಟ್ರು ಖಡಕ್‌ ಉತ್ತರ
Related Stories
Recommended image1
ಎರಡು ದಿನ ಕಾಯಿರಿ, ಬಿಜೆಪಿ ತೊರೆಯುವ ಪ್ರಶ್ನೆಗೆ ಅಣ್ಣಾಮಲೈ ಉತ್ತರ, ಹುಟ್ಟಹಬ್ಬಕ್ಕೆ ಹೊಸ ಪಾರ್ಟಿ?
Recommended image2
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved