ಇದು ಪ್ರಜಾಪ್ರಭುತ್ವ, ಚುನಾವಣೆಗೆ ನಿಲ್ಲುವ ಹಕ್ಕು ಎಲ್ಲರಿಗೂ ಇದೆ: ನಳಿನ್ ಕುಮಾರ್ ಕಟೀಲ್
ಮುಂಬರುವ ಲೋಕಸಭೆ ಚುನಾವಣೆ ಸ್ಪರ್ಧೆಗೆ ಟಿಕೆಟ್ ನೀಡುವುದು ರಾಷ್ಟ್ರೀಯ ನಾಯಕರ ತೀರ್ಮಾನ. ವರಿಷ್ಠರು ಏನೇ ತೀರ್ಮಾನ ಮಾಡಿದರೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಅದಕ್ಕೆ ಬದ್ಧ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಮಂಗಳೂರು (ಮಾ.01): ಮುಂಬರುವ ಲೋಕಸಭೆ ಚುನಾವಣೆ ಸ್ಪರ್ಧೆಗೆ ಟಿಕೆಟ್ ನೀಡುವುದು ರಾಷ್ಟ್ರೀಯ ನಾಯಕರ ತೀರ್ಮಾನ. ವರಿಷ್ಠರು ಏನೇ ತೀರ್ಮಾನ ಮಾಡಿದರೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಅದಕ್ಕೆ ಬದ್ಧ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ನಳಿನ್, ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ಸಾಧ್ಯತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ.
ಅವರ ಮನವೊಲಿಕೆಗೆ ಪಕ್ಷ ಪ್ರಯತ್ನ ಮಾಡಿದೆ. ಬಿಜೆಪಿ ಬಹಳ ವರ್ಷಗಳ ಹೋರಾಟದಿಂದ ಇದೀಗ ಅತಿ ದೊಡ್ಡ ಪಕ್ಷವಾಗಿ ಬೆಳೆದಿದೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ನ್ನು ಎದುರಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಸೀಟು ಗೆದ್ದಿದೆ. ಪಕ್ಷಕ್ಕೆ ಎದುರಾಳಿಯ ಪ್ರಶ್ನೆ ಇಲ್ಲ.
ಇದು ಪ್ರಜಾಪ್ರಭುತ್ವ, ಚುನಾವಣೆಗೆ ನಿಲ್ಲುವ ಹಕ್ಕು ಎಲ್ಲರಿಗೂ ಇದೆ. ಪ್ರತಿ ಚುನಾವಣೆಗೆ ಬಂದಾಗ ಹತ್ತಾರು ಸಮಸ್ಯೆಗಳು ಉದ್ಭವವಾಗುತ್ತವೆ. ಆ ಎಲ್ಲ ಸವಾಲುಗಳನ್ನು ಬಿಜೆಪಿ ಗೆದ್ದು ಗೆಲುವು ಸಾಧಿಸಿದೆ. ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುವುದು ನಿಶ್ಚಿತ ಎಂದರು.
ರಾಮಮಂದಿರ ನಿರ್ಮಾಣದ ಬಳಿಕ ಬಿಜೆಪಿ ಪರ ವಾತವರಣ ಅದ್ಭುತವಾಗಿದೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನರು ಒಗ್ಗಟಾಗುತ್ತಾರೆ ಎಂದು ನಳಿನ್ ಕುಮಾರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.