MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • Lok Sabha Election 2024: ಲೋಕಸಭಾ ಚುನಾವಣೆ ಅಭ್ಯರ್ಥಿಗಳಿಂದ ಮತದಾನ

Lok Sabha Election 2024: ಲೋಕಸಭಾ ಚುನಾವಣೆ ಅಭ್ಯರ್ಥಿಗಳಿಂದ ಮತದಾನ

ಬೆಂಗಳೂರು(ಮೇ.07):  ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಇಂದು(ಮೇ.07) ರಂದು 2ನೇ ಹಾಗೂ ಕೊನೆಯ ಹಂತದ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ರ ವರೆಗೆ ಮತದಾನ ನಡೆಯಲಿದೆ. ಜನರು ಕೂಡ ಬೆಳಿಗ್ಗೆಯಿಂದ ಬಹಳ ಉತ್ಸಾಹದಿಂದ ಬಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ನು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳು ಕೂಡ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದ್ದಾರೆ.  ಯಾರ್ಯಾರು ಎಲ್ಲೆಲ್ಲಿ ಮತದಾನ ಮಾಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ. 

1 Min read
Girish Goudar
Published : May 07 2024, 10:38 AM IST| Updated : May 07 2024, 10:50 AM IST
Share this Photo Gallery
  • FB
  • TW
  • Linkdin
  • Whatsapp
110

ಹಾವೇರಿ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಹಾನಗಲ್ಲ ಪಟ್ಟಣದ ಮತಗಟ್ಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. 

210

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರುಗುಂಟಾದಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಮತದಾನ ಮಾಡಿದ್ದಾರೆ.
 

310

ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಡಾ. ಉಮೇಶ್‌ ಜಾಧವ್‌ ಅವರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
 

410

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಮತದಾನ ಮಾಡಿದ್ದಾರೆ. 
 

510

ಬೆಳಗಾವಿಯ ನಗರದ ಹಿಂಡಲಗಾ ಸಮೀಪ ವಿಜಯನಗರ ಕನ್ನಡ- ಮರಾಠಿ ಶಾಲೆ ಮತಗಟ್ಟೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದ್ದಾರೆ. 
 

610

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಕೂಡ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ್ದಾರೆ.
 

710

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಬೆಲಗಾವಿ ಜಿಲ್ಲೆಯ ಖಾನಾಪುರದಲ್ಲಿ ಮತದಾನ ಮಾಡಿದ್ದಾರೆ. 
 

810

ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕುಟುಂಬ ಸಮೇತರಾಗಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

910

ಶಿವಮೊಗ್ಗ ಬಿಜೆಪಿ ಬಿ.ವೈ.ರಾಘವೇಂದ್ರ ಅವರು ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ರಾಘವೇಂದ್ರ ಜತೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕುಟುಂಬದ ಸದಸ್ಯರೆಲ್ಲರೂ ಮತ ಚಲಾಯಿಸಿದ್ದಾರೆ.

1010

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಜಿಲ್ಲೆಯ ಕುಷ್ಟಗಿ ಪಟ್ಟಣದ ವಿದ್ಯಾನಗರ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ತಂದೆ ಮಾಜಿ ಶಾಸಕ ಕೆ.ಶರಣಪ್ಪ ಸೇರಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ. 

About the Author

GG
Girish Goudar
ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಮ್‌ನಲ್ಲಿ ಹಿರಿಯ ಉಪ ಸಂಪಾದಕ. ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ನನ್ನ ಊರು ಬಾಗಲಕೋಟೆ ಜಿಲ್ಲೆಯ ಹುನಗುಂದ . ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎಸ್‌ಸಿ ಎಲೆಕ್ಟ್ರಾನಿಕ್‌ ಮೀಡಿಯಾ ಪದವಿ ಪಡೆದಿದ್ದೇನೆ. ಈಟಿವಿ ಭಾರತ್‌, ವೇ ಟು ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಕ್ರೀಡೆ, ಚಲನಚಿತ್ರ, ರಾಜಕೀಯ ಸುದ್ದಿಗಳ ಬಗ್ಗೆ ಅತೀವ ಆಸಕ್ತಿ ಇದೆ. ಸಂಗೀತ ಕೇಳುವುದು, ಕ್ರಿಕೆಟ್‌ ಆಡುವುದು ನೆಚ್ಚಿನ ಹವ್ಯಾಸಗಳಾಗಿವೆ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved