ಪರಿಷತ್ ಟಿಕೆಟ್ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ ಹೇಮಲತಾ ನಾಯಕ ಯಾರು? ಹೈಕಮಾಂಡ್ ಗುರುತಿಸಿದ್ದೇಗೆ?
ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಬಿವೈ ವಿಜಯೇಂದ್ರರಂತಹ ಘಟಾನುಘಟಿ ನಾಯಕರನ್ನು ಹೊರತುಪಡಿಸಿ ಅಚ್ಚರಿ ಎಂಬಂತೆ ಯಾರು ಊಹಿಸದ ಬಿಜೆಪಿ ನಾಯಕಿಗೆ ಪರಿಷತ್ ಟಿಕೆಟ್ ಸಿಕ್ಕಿದೆ. ಮೊದಲ ಬಾರಿ ರಾಜ್ಯ ಕಾರ್ಯದರ್ಶಿಯಾಗಿರುವ ಹೇಮಲತಾ ನಾಯಕ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ. ಯಾರು ಈ ಹೇಮಲತಾ ನಾಯಕ? ಎಲ್ಲಿಯವರು? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ ಹೇಮಲತಾ ನಾಯಕ ಅವರಿಗೆ ಅಚ್ಚರಿ ಎಂಬಂತೆ ಟಿಕೆಟ್ ಸಿಕ್ಕಿದೆ. ಹೇಮಲತಾ ಅವರಿಗೆ ಟಿಕೆಟ್ ಸಿಗುತ್ತೆ ಎಂದು ಯಾರು ಊಹಿಸಿರಲಿಲ್ಲ.
ಕೊಪ್ಪಳದ ಹೇಮಲತಾ ಅವರಿಗೆ ಟಿಕೆಟ್ ಫೈನಲ್ ಮಾಡಿದ್ದು, ಬಿಜೆಪಿ ಅಚ್ಚರಿ ನೀಡಿದೆ. ಸಂಸದ ಸಂಗಣ್ಣ ಕರಡಿ ಅವರ ಕಟ್ಟಾ ಬೆಂಬಲಿಗರಾಗಿರುವ ಹೇಮಲತಾ ನಾಯಕ ಅವರು ಸಂಗಣ್ಣ ಕರಡಿ ಅವರು ಬಿಜೆಪಿಗೆ ಬಂದಾಗ ಹೇಮಲತಾ ನಾಯಕ ಸಹ ಬಿಜೆಪಿಗೆ ಬಂದಿದ್ದರು.
ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿರುವ ಹೇಮಲತಾ ನಾಯಕ ಅವರು, ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆಯೂ ಆಗಿ ಕೆಲಸ ಮಾಡಿದ್ದಾರೆ. ಸದ್ಯ ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯೆಯಾಗಿದ್ದಾರೆ.
ಸದ್ಯ ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯೆ ಆಗಿರುವ ಹೇಮಲತಾ ಈ ಹಿಂದೆ ಕೊಪ್ಪಳ ನಗರಸಭೆಗೆ ಸ್ಪರ್ಧೆಗೆ ಟಿಕೆಟ್ ಕೇಳಿದ್ದರು. ಆಗ ಬಿಜೆಪಿ ಟಿಕೆಟ್ ಸಿಕ್ಕಿರಲಿಲ್ಲ. ಈ ಹಿಂದೆ ನಗರಸಭೆಯ 18ನೇ ವಾರ್ಡಿಗೆ ಜೆಡಿಎಸ್‍ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ಮೂಲದ ಹೇಮಲತಾ ನಾಯಕ್ ಅವರು ಕೊಪ್ಪಳದಲ್ಲಿ ಸುಮಾರು ಮೂವತ್ತು ವರ್ಷಗಳಿಂದ ವಾಸಿಸುತ್ತಿದ್ದಾರೆ. ಅವರ ಪತಿ ಪರೀಕ್ಷಿತರಾಜ್ ಅವರು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಹೇಮಲತಾ ಅವರು ಫುಲ್ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಅವರ ಕಾರ್ಯಚಟುವಟಿಕೆಗಳನ್ನ ಗಮನಿಸಿ ಮೊದಲ ಬಾರಿಗೆ ಹೇಮಲತಾ ಅವರನ್ನ ಬಿಜೆಪಿಯ ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಕಾರ್ಯದರ್ಶಿಯನ್ನಾಗಿ ನೇಮಕವಾದ ಬಳಿಕ ಮತ್ತಷ್ಟು ಉತ್ಸಾಹದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡರು. ಈ ಮೂಲಕ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೆಟ್ಟರ್ ಸೇರಿದಂತೆ ಘಟಾನುಘಟಿ ನಾಯಕರು ಗುರುಸಿವಂತೆ ಬೆಳೆದರು.
ಓರ್ವ ಸಾಮಾನ್ಯ ಕಾರ್ಯಕರ್ತೆಯಾಗಿದ್ದ ಹೇಮಲತಾ ಅವರ ಕಾರ್ಯಚಟುವಟಿಕೆಗಳನ್ನ ಗಮನಿಸಿ ಬಿಜೆಪಿ ವರಿಷ್ಠರು ಈಗ ವಿಧಾನಪರಿಷತ್ ಟಿಕೆಟ್ ನೀಡಿದ್ದಾರೆ.
ತಮ್ಮ ಕಾರ್ಯಚಟುವಟಿಕೆಗಳಿಂದ ರಾಜ್ಯ ಬಿಜೆಪಿ ನಾಯಕರನ್ನ ಗಮನಸೆಳೆದ ಹೇಮಲತಾ ಅವರಿಗೆ ಟಿಕೆಟ್ ಸಿಕ್ಕಿದ್ದು, ಇದನ್ನು ಯಾರು ಸಹ ಊಹಿಸಿರಲಿಲ್ಲ. ದಿಢೀರ್ ಹೇಮಲತಾ ಅವರ ಹೆಸರು ಕೆಲ ನಾಯಕರಿಗೆ ತಿಳಿದಿರಲಿಕ್ಕಿಲ್ಲ ಅನ್ಸುತ್ತೆ.
ಪರಿಷತ್ ಟಿಕೆಟ್ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ ಹೇಮಲತಾ ನಾಯಕ ಯಾರು? ಅವರನ್ನ ಹೈಕಮಾಂಡ್ ಗುರುತಿಸಿದ್ದೇಗೆ?
ಮಹಿಳಾ ಕೋಟಾದ ಅಡಿಯಲ್ಲಿ ಮಂಜುಳಾ ಹಾಗೂ ರಾಜ್ಯ ಬಿಜೆಪಿ ಮಹಿಳಾ ಅಧ್ಯಕ್ಷೆ ಗೀತಾ ವಿವೇಕಾನಂದ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಅದರಲ್ಲೂ ಪ್ರಮುಖವಾಗಿ ಮಂಜುಳಾ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದ್‌ರೆ, ಕೊನೆ ಕ್ಷಣದಲ್ಲಿ ಅಚ್ಚರಿ ಎಂಬಂತೆ ಹೇಮಲತಾ ಅವರಿಗೆ ಹೈಕಮಾಂಡ್ ಮಣೆ ಹಾಕಿದೆ.
ಪರಿಷತ್ ಟಿಕೆಟ್ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ ಹೇಮಲತಾ ನಾಯಕ ಯಾರು? ಅವರನ್ನ ಹೈಕಮಾಂಡ್ ಗುರುತಿಸಿದ್ದೇಗೆ?
ಹೇಮಲತಾ ಅವರು ಮಹಿಳಾ ಸದಸ್ಯರುಗಳನ್ನು ಒಗ್ಗೂಡಿಸಿಕೊಂಡು ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದರು. ಅಲ್ಲದೇ ಸಭೆ ಸಮಾರಂಭಲ್ಲಿ ಮಹಿಳಾ ಕಾರ್ಯಕರ್ತರನ್ನ ಒಗ್ಗೂಡಿಸುತ್ತಿದ್ರು. ಈ ಎಲ್ಲಾ ಅಂಶಗಳನ್ನ ಸಾಮಾನ್ಯ ಕಾರ್ಯಕರ್ತೆ ಹೇಮಲತಾ ಅವರಿಗೆ ಇದೀಗ ಪರಿಷತ್ ಸದಸ್ಯರಾಗು ಯೋಗ ಕೂಡಿಬಂದಿದೆ.