ಚಾಮರಾಜ ವಿಧಾನಸಭಾ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ಯಾಕೆ? ಪ್ರತಾಪ್ ಸಿಂಹ ಹೇಳಿದ್ದೇನು?
ಮಾಜಿ ಸಂಸದ ಪ್ರತಾಪ್ ಸಿಂಹ ಘೋಷಿಸಿದ್ದಾರೆ. ತಮ್ಮ ಮುಂದಿನ ರಾಜಕೀಯ ಚಟುವಟಿಕೆಗಳಿಗಾಗಿ ಚಾಮರಾಜ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದು, ಇದು ಪ್ರಜ್ಞಾವಂತ ಮತದಾರರಿರುವ ಬಿಜೆಪಿ ಕ್ಷೇತ್ರವಾದ್ದರಿಂದ ಅನುಕೂಲಕರವಾಗಿದೆ ಎಂದು ತಿಳಿಸಿದ್ದಾರೆ.

ಚಾಮರಾಜ ಕ್ಷೇತ್ರ
Former MP Pratap Simha: ಕೇಂದ್ರದ ರಾಜಕಾರಣ ಮುಗಿದ ಮೇಲೆ ಸಹಜವಾಗಿ ನಾನು ರಾಜ್ಯ ರಾಜಕಾರಣಕ್ಕೆ ಬಂದಿದ್ದು, ಚಾಮರಾಜ ಕ್ಷೇತ್ರವನ್ನು ನನ್ನ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಚಾಮರಾಜ ಕ್ಷೇತ್ರ ನನಗೆ ಅನುಕೂಲಕರ
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ದೃಷ್ಟಿಯಿಂದಲೂ ಚಾಮರಾಜ ಕ್ಷೇತ್ರ ನನಗೆ ಅನುಕೂಲಕರವಾಗಿದೆ. ಹೀಗಾಗಿ ನಾನು ಆಯ್ಕೆ ಮಾಡಿಕೊಂಡಿದ್ದೇನೆ. ಈ ಹಿಂದೆ ಶಂಕರಲಿಂಗೇಗೌಡರು ನಾಲ್ಕು ಬಾರಿ ಚಾಮರಾಜ ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದಿದ್ದಾರೆ. ಇದು ಬಿಜೆಪಿ ಕ್ಷೇತ್ರ. ಹೀಗಾಗಿ ಇಲ್ಲಿಂದಲೇ ಚಟುವಟಿಕೆ ಆರಂಭಿಸಿದ್ದೇನೆ ಎಂದು ಹೇಳಿದ್ದಾರೆ.
ಒಕ್ಕಲಿಗ ಲೆಕ್ಕದಲ್ಲೇ ಈ ಕ್ಷೇತ್ರ ನೋಡುತ್ತಿಲ್ಲ
ಚಾಮರಾಜ ಕ್ಷೇತ್ರ ಹಣದ ಪ್ಯಾಕೇಟ್ ಕೊಟ್ಟು ಗೆಲ್ಲುವ ಕ್ಷೇತ್ರ ಅಲ್ಲ. ಇಲ್ಲಿಯ ಮತದಾರರು ಕೆಲಸ ನೋಡಿ ಪ್ರೀತಿ ತೋರಿಸುವ ಜನ. ಬರಿ ಒಕ್ಕಲಿಗ ಲೆಕ್ಕದಲ್ಲೇ ಈ ಕ್ಷೇತ್ರ ನೋಡುತ್ತಿಲ್ಲ. ಇಲ್ಲಿ ಎಲ್ಲ ರೀತಿಯ ವರ್ಗದ ಜನರು ಇದ್ದಾರೆ. ಪ್ರಜ್ಞಾವಂತರು ಮತ್ತು ಬುದ್ಧಿವಂತರಿದ್ದಾರೆ. ಹೀಗಾಗಿ ಸಹಜವಾಗಿ ನನ್ನ ಆಯ್ಕೆಯಾಗಿದೆ ಎಂದು ಮಾಜಿ ಸಂಸದರು ಹೇಳಿದ್ದಾರೆ.
ಇದನ್ನೂ ಓದಿ: ಹಿರಿಯಕ್ಕನಾಗಿ ಹೇಳ್ತಿದ್ದೇನೆ ಕೇಳಿ... ಪ್ರತಾಪ್ - ಪ್ರದೀಪ್ ಕಿತ್ತಾಟಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಕ್ಯಾಲೆಂಡರ್ ಬಿಡುಗಡೆ
ಪ್ರತಾಪ್ ಸಿಂಹ ಸ್ನೇಹ ಬಳಗದ ವತಿಯಿಂದ ಸೋಮವಾರ ಚಾಮರಾಜ ವಿಧಾನಸಭಾ ಕ್ಷೇತ್ರದ ಗ್ರೀನ್ ಹೆರಿಟೇಜ್ ಹೋಟೆಲ್ ನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಾಪ್ ಸಿಂಹ ಸ್ನೇಹ ಬಳಗದ 2026ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ಮೂಲಕ ಅಧಿಕೃತವಾಗಿ ಪ್ರತಾಪ್ ಸಿಂಹ ರಾಜ್ಯ ರಾಜಕಾರಣ ಪ್ರವೇಶ ಮಾಡಿದ್ದಾರೆ.
ಇದನ್ನೂ ಓದಿ: ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

