MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಟಿಕೆಟ್ ಆಫರ್? JDSನಿಂದ ಚುನಾವಣೆಗೆ ಸ್ಪರ್ಧೆ ಮಾಡ್ತಾರಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್?

ಟಿಕೆಟ್ ಆಫರ್? JDSನಿಂದ ಚುನಾವಣೆಗೆ ಸ್ಪರ್ಧೆ ಮಾಡ್ತಾರಾ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್?

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ತಾವು ಜೆಡಿಎಸ್‌ಗೆ ಹೋಗುವ ವದಂತಿಗಳನ್ನು ತಳ್ಳಿಹಾಕಿದ್ದು, ಬಿಜೆಪಿಯನ್ನೇ ರಿಪೇರಿ ಮಾಡುವುದಾಗಿ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಯಿಂದಲೇ ಗೆಲುವು ಸಾಧ್ಯವಾಯಿತು ಎಂದರು.

1 Min read
Author : Mahmad Rafik
Published : Feb 23 2026, 12:52 PM IST
Share this Photo Gallery
  • FB
  • TW
  • Linkdin
  • Whatsapp
15
ಜೆಡಿಎಸ್‌ನಿಂದ ಟಿಕೆಟ್ ಆಫರ್‌?
Image Credit : BR Patil Yatnal FB

ಜೆಡಿಎಸ್‌ನಿಂದ ಟಿಕೆಟ್ ಆಫರ್‌?

ಬಂಡಾಯ ಶಾಸಕರಿಗೆ ಜೆಡಿಎಸ್‌ನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು.

25
ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಶಕ್ತಿ
Image Credit : BR Patil Yatnal FB

ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಶಕ್ತಿ

ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಶಕ್ತಿ ಇದೆ. ಬಿಜೆಪಿಯ ಒಂದು ಶಕ್ತಿ, ಕುಮಾರಸ್ವಾಮಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕೆ ನಮಗೆ ತುಮಕೂರು ಗೆಲುವಾಗಿದೆ. 

Related Articles

Related image1
ಆ ಲುಪುಟ ಹಿಂದೂ ಅದಾನೋ ಇಲ್ವೋ? ಪರಮೇಶ್ವರಾನಂದ ಸ್ವಾಮೀಜಿಗೆ ಯತ್ನಾಳ್ ತಿರುಗೇಟು
Related image2
2028ರಲ್ಲಿ ಜೆಸಿಬಿ ಪಾರ್ಟಿಯಿಂದ ಸ್ಪರ್ಧೆ: ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ ಘೋಷಣೆ
35
ಗೆಲುವಿಗೆ ಜೆಡಿಎಸ್ ಸಹಕಾರ
Image Credit : BR Patil Yatnal FB

ಗೆಲುವಿಗೆ ಜೆಡಿಎಸ್ ಸಹಕಾರ

ಮೈಸೂರು, ಕೋಲಾರ ಬೆಂಗಳೂರು ಗ್ರಾಮಾಂತರ ಹಾಗೂ ಚಿತ್ರದುರ್ಗಗಳನ್ನೂ ಗೆಲ್ಲೋಕೆ ಆಗಿದೆ ಎಂದ ಅವರು, ಇದಕ್ಕೆ ನೇರವಾಗಿ ಕುಮಾರಸ್ವಾಮಿ ಹಾಗೂ ದೇವಗೌಡರ ಸಹಕಾರವಿದೆ ಎಂದರು.

45
ಜೆಡಿಎಸ್ ಗೆ ಹೋಗೋದಿಲ್ಲ
Image Credit : BR Patil Yatnal FB

ಜೆಡಿಎಸ್ ಗೆ ಹೋಗೋದಿಲ್ಲ

ಕುಮಾರಸ್ವಾಮಿ ಅವರಿಗೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು, ಸರ್ಕಾರ ಮಾಡಬೇಕಂತಿದೆ. ನಾವು ಯಾವ ಕಾಲಕ್ಕೂ ಜೆಡಿಎಸ್ ಗೆ ಹೋಗೋದಿಲ್ಲ ಇದು ನನ್ನ ವೈಯಕ್ತಿಕ ಹೇಳಿಕೆ. ನಾನಾಗಲೀ ರಮೇಶ್ ಜಾರಕಿಹೊಳಿ ಆಗಲೀ, ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಹಿಟ್‌ & ರನ್ ಕೇಸ್ ಅಲ್ಲ; ವೆಹಿಕಲ್ ಜಪ್ತಿ ಬಂದವರಿಗೆ ಕಾರ್ ಗುದ್ದಿಸಿದ ರಿಯಲ್ ಎಸ್ಟೇಟ್ ಉದ್ಯಮಿ

55
ಜೆಡಿಎಸ್- ಜೆಸಿಬಿ ಮೈತ್ರಿ ಸರ್ಕಾರ
Image Credit : Basanagouda R Patil (Yatnal) fB

ಜೆಡಿಎಸ್- ಜೆಸಿಬಿ ಮೈತ್ರಿ ಸರ್ಕಾರ

ಪೂಜ್ಯ ತಂದೆ ಯಡಿಯೂರಪ್ಪ ಅವರದ್ದು ಜೆಡಿಎಸ್‌ಗೆ ದೂರ ಸರಿಸಬೇಕು ಅನ್ನೋದಿದೆ ಎಂದು ವ್ಯಂಗ್ಯವಾಡಿದ ಅವರು, ಆದರೆ, ಮೋದಿ-ಅಮಿತ್ ಶಾ ಇದಕ್ಕೆ ಒಪ್ಪುವುದಿಲ್ಲ. ಈ ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಆಗುತ್ತದೆ. ಇಲ್ಲಾ ಅಂದರೆ ಜೆಡಿಎಸ್- ಜೆಸಿಬಿ ಮೈತ್ರಿ ಸರ್ಕಾರ ಆಗುತ್ತೆ ಎಂದರು.

ಇದನ್ನೂ ಓದಿ: ಕೊಪ್ಪಳ ಜಾತ್ರೆಯಲ್ಲಿ ಬಾವುಟ ಸೃಷ್ಟಿಸಿದ ಬಿಕ್ಕಟ್ಟು, ದಲಿತರು-ಸವರ್ಣೀಯರ ನಡುವೆ ಗಲಾಟೆ, ಕ್ಷಣ ಮಾತ್ರದಲ್ಲಿ ಊರೇ ಸ್ಥಬ್ಧ!

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕರ್ನಾಟಕ ಸುದ್ದಿ
ಕರ್ನಾಟಕ ರಾಜಕೀಯ
ಬಿಜೆಪಿ
ಬಸನಗೌಡ ಪಾಟೀಲ್ ಯತ್ನಾಳ್
ಜನತಾದಳ (ಜಾತ್ಯತೀತ)

Latest Videos
Recommended Stories
Recommended image1
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್
Recommended image2
ಬೆಂಗಾಳಿ ರಾಜಕಾರಣದ ಚಾಣಕ್ಯ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಹೃದಯಾಘಾತಕ್ಕೆ ಬಲಿ
Recommended image3
ಪ್ರಿಯಾಂಕ್‌ ಖರ್ಗೆ ಅಪ್ಪನ ಹೆಸರಿಲ್ಲದೇ ಗ್ರಾ.ಪಂ ಸದಸ್ಯರಾಗಲು ಅರ್ಹರಲ್ಲ: ಛಲವಾದಿ
Related Stories
Recommended image1
ಆ ಲುಪುಟ ಹಿಂದೂ ಅದಾನೋ ಇಲ್ವೋ? ಪರಮೇಶ್ವರಾನಂದ ಸ್ವಾಮೀಜಿಗೆ ಯತ್ನಾಳ್ ತಿರುಗೇಟು
Recommended image2
2028ರಲ್ಲಿ ಜೆಸಿಬಿ ಪಾರ್ಟಿಯಿಂದ ಸ್ಪರ್ಧೆ: ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ ಘೋಷಣೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved