ಸಿಎಂ ಭೂಮಿಪೂಜೆ: ಪ್ರಧಾನಿ ಮೋದಿ ಬರ್ತಾರೆ, ಉದ್ಘಾಟನೆ ಮಾಡ್ತಾರಂತೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಬುಧವಾರ) ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸವಣ್ಣ ನಡೆದಾಡಿದ ಪವಿತ್ರ ಕ್ಷೇತ್ರದಲ್ಲಿ 500 ಕೋಟಿ ರೂ. ವೆಚ್ಚದ ಅಂತರಾಷ್ಟ್ರೀಯ ಮಟ್ಟದ ನೂತನ ಅನುಭವ ಮಂಟಪ ನಿರ್ಮಾಣವಾಗಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಬುಧವಾರ) ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಅನುಭವ ಮಂಟಪದ ಭೂಮಿ ಪೂಜೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಸೌಲಭ್ಯ. ಇದು ನನ್ನ ಪೂರ್ವ ಜನ್ಮದ ಪುಣ್ಯದಿಂದ ಪಾಪ್ತವಾಗಿದೆ ಎಂದು ಖುಷಿ ಹಂಚಿಕೊಂಡರು.

2 ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಈ ಅನುಭವ ಮಂಟಪ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಲಾಗುವುದು ಎಂದು ತಿಳಿಸಿದರು.

ಅನುಭವ ಮಂಟಪಕ್ಕೆ ಈಗಾಗಲೇ 100 ಕೋಟಿ ರೂ.ಮಂಜೂರು ಮಾಡಲಾಗಿದೆ. ಒಂದು ವಾರದಲ್ಲಿ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇನ್ನೂ ನಾಲ್ಕೈದು ದಿನಗಳಲ್ಲಿ ಇನ್ನೂ ನೂರು ಕೋಟಿ ರೂಪಾಯಿ ಬಿಡುಗಡೆ ಮಾಡುತ್ತೇನೆ ಎಂದರು.

ಅಲ್ಲದೇ ಎಷ್ಟು ಖರ್ಚಾದರೂ ಸರಿ, ಇಲ್ಲಿ ಏನೇನು ಕೆಲಸ ಆಗಬೇಕೋ ಅದನ್ನೆಲ್ಲ ಮಾಡಲಾಗುವುದು ಎಂದು ಭರವಸೆ ನೀಡಿದರು.

ಬಸವಕಲ್ಯಾಣದಲ್ಲಿ ನಡೆದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಯಡಿಯೂರಪ್ಪ ಪುಷ್ಪಾರ್ಚನೆ ಮಾಡಿದ್ರು.

ಸಿಎಂ ಯಡಿಯೂರಪ್ಪ ಅವರ ಜೊತೆ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಕೆ.ಸುಧಾಕರ, ಪ್ರಭು ಚೌಹಾಣ್, ಎಂಪಿ ಭಗವಂತ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಪೂಜ್ಯ ಬಸವಲಿಂಗ ಪಟ್ಟದ್ದೆವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.