Yoga Day: ಬಿಜೆಪಿ ಕಚೇರಿಯಲ್ಲಿ ಯೋಗ ದಿನ: ವಿಜಯೇಂದ್ರ ಜೊತೆ ಭಾಗಿಯಾದ ಮಾಳವಿಕಾ, ಸುಧಾರಾಣಿ!
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಲಾದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಇಡೀ ಜಗತ್ತಿನಾದ್ಯಂತ ಇಂದು (ಜೂನ್ 21-ಶನಿವಾರ) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಭಾರತದಲ್ಲಿ ಕೂಡ ಯೋಗ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ.
ಅದರಂತೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಲಾದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಆಯೋಜಿಸಿದ್ದ 'ಅಂತಾರಾಷ್ಟ್ರೀಯ ಯೋಗ ದಿನ' ಕಾರ್ಯಕ್ರಮದಲ್ಲಿ ಬಿ.ವೈ.ವಿಜಯೇಂದ್ರ ಭಾಗವಹಿಸಿದರು.
ಜಗತ್ತಿಗೆ ಭಾರತದ ಶ್ರೇಷ್ಠ ಕೊಡುಗೆಯಾಗಿರುವ ಹಾಗೂ ದೇಹ ಮತ್ತು ಮನಸ್ಸಿಗೆ ನವಚೈತನ್ಯ ನೀಡಿ ನವೀಕರಿಸುವ ಯೋಗವನ್ನು, ನಮ್ಮೆಲ್ಲರ ದಿನಚರಿಯಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ಶೈಲಿಯ ಸಂಕಲ್ಪ ಮಾಡಲಾಯಿತು.
ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ: ನಾಡಿನ ಸಮಸ್ತ ಜನತೆಗೆ ಅಂತರರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ಶತ ಶತಮಾನಗಳಿಂದ ಭಾರತೀಯರ ಜನಮಾನಸದ ಮೇಲೆ ಗಾಢ ಪರಿಣಾಮ ಬೀರಿರುವ ಯೋಗ ನಮ್ಮ ಹೆಮ್ಮೆ. ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಅತ್ಯುತ್ತಮ ಮಾರ್ಗವಾಗಿರುವ ಯೋಗವನ್ನು ಜೀವನಶೈಲಿಯ ಭಾಗವಾಗಿಸಿಕೊಳ್ಳೋಣ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಹೆಚ್. ಸಿ. ತಮ್ಮೇಶ್ ಗೌಡ, ಶ್ರೀ ಶರಣು ತಳ್ಳಿಕೇರಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಕು. ಸಿ. ಮಂಜುಳಾ ಇದ್ದರು.
ಜೊತೆಗೆ ಅಂತರರಾಷ್ಟ್ರೀಯ ಯೋಗ ಪಟು ಶ್ರೀ ರಾಘವೇಂದ್ರ ಪೈ, ಕನ್ನಡ ಚಲನಚಿತ್ರ ನಟರಾದ ಶ್ರೀ ಕೋಮಲ್ ಕುಮಾರ್, ಕನ್ನಡ ಚಲನಚಿತ್ರ ನಟಿಯಾದ ಶ್ರೀಮತಿ ಸುಧಾರಾಣಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.