- Home
- Entertainment
- Sandalwood
- ಅರಿಶಿಣ ಶಾಸ್ತ್ರ ಸಂಭ್ರಮದಲ್ಲಿ ಅಂಬಿ ಪುತ್ರ: ಅಭಿಷೇಕ್ ಮನೆಯಲ್ಲಿ ಮದುವೆ ಶಾಸ್ತ್ರ ಆರಂಭ
ಅರಿಶಿಣ ಶಾಸ್ತ್ರ ಸಂಭ್ರಮದಲ್ಲಿ ಅಂಬಿ ಪುತ್ರ: ಅಭಿಷೇಕ್ ಮನೆಯಲ್ಲಿ ಮದುವೆ ಶಾಸ್ತ್ರ ಆರಂಭ
ರೆಬೆಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಅಂಬಿ ಪುತ್ರನ ಮದುವೆಗೆ ಕೌಂಟ್‌ಡೌನ್ ಶುರುವಾಗಿದ್ದು ಈಗಾಗಲೇ ಶಾಸ್ತ್ರಗಳು ನಡೆಯುತ್ತಿವೆ. ಅರಿಶಿಣ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ.

ರೆಬೆಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಅಂಬಿ ಪುತ್ರನ ಮದುವೆಗೆ ಕೌಂಟ್‌ಡೌನ್ ಶುರುವಾಗಿದ್ದು ಈಗಾಗಲೇ ಶಾಸ್ತ್ರಗಳು ನಡೆಯುತ್ತಿವೆ. ಅಭಿಷೇಕ್ ಅರಿಶಿಣ ಶಾಸ್ತ್ರ ಜೋರಾಗಿದ್ದು ವಿಡಿಯೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಅಭಿಷೇಕ್ ಅಂಬರೀಶ್ ಬಿಳಿ ಶರ್ಟ್ ಮತ್ತು ಪಂಚೆಯಲ್ಲಿ ಕಂಗೊಳಿಸುತ್ತಿದ್ದಾರೆ. ಅಂಬಿ ಮನೆ ಈಗಾಗಲೇ ಸಿಂಗಾರಗೊಂಡಿದ್ದು ಅರಿಶಿಣ ಶಾಸ್ತ್ರಕ್ಕೆ ಹಸಿರು ಹಾಗೂ ಹಳದಿ ಹೂವಿನ ಅಲಂಕಾರ ಮಾಡಲಾಗಿದೆ.
ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿಡಪ ಜೂನ್ 5ರಂದು (ಸೋಮವಾರ) ಅದ್ದೂರಿಯಾಗಿ ಮದುವೆಯಾಗುತ್ತಿದ್ದಾರೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ.
ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5 ಮಾಣಿಕ್ಯ-ಚಾಮರ ವಜ್ರದಲ್ಲಿ 9.30 ರಿಂದ 10.30ರ ಸಮಯದಲ್ಲಿ ಕರ್ಕಾಟಕ ಲಗ್ನದಲ್ಲಿಮದುವೆ ಸಮಾರಂಭ ನಡೆಯಲಿದೆ.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲೂ ಅದ್ದೂರಿ ಬಾಡೂಟ ವ್ಯವಸ್ಥೆ ಹಾಗೂ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.
ಅಭಿಷೇಕ್ ಮದುವೆ ಸಂಭ್ರಮಕ್ಕೆ ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದ ಗಣ್ಯರು ಆಗಮಿಸಲಾಗಿದ್ದಾರೆ. ಈಗಾಗಲೇ ಸುಮಲತಾ ಮತ್ತು ಅಭಿಷೇಕ್ ಅನೇಕ ಗಣ್ಯರಿಗೆ ಮದುವೆ ಆಮಂತ್ರಣ ನೀಡಿದ್ದಾರೆ. ಮದುವೆಗೆ ಆಪ್ತ ಬಳಗದವರಿಗಷ್ಟೇ ಆಹ್ವಾನ ನೀಡಲಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.