ಮುದ್ದು ಮಗಳ ಫೋಟೋ ಶೇರ್ ಮಾಡಿ ಹೆಸರು ರಿವೀಲ್ ಮಾಡಿದ ನಟಿ ಪ್ರಣಿತಾ
ಬಹುಭಾಷಾ ನಟಿ ಪ್ರಣಿತಾ ಸದ್ಯ ಮುದ್ದಾದ ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡತಿ ಪ್ರಣಿತಾ ಇದುವರೆಗೂ ಮಗಳ ಮುಖವನ್ನು ರಿವೀಲ್ ಮಾಡಿರಲಿಲ್ಲ. ಇದೀಗ ಮೊದಲ ಬಾರಿಗೆ ಪ್ರಣಿತಾ ಫೋಟೋವನ್ನು ಹಂಚಿಕೊಂಡಿದ್ದಾರೆ.
ಬಹುಭಾಷಾ ನಟಿ ಪ್ರಣಿತಾ ಸದ್ಯ ಮುದ್ದಾದ ಮಗಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡತಿ ಪ್ರಣಿತಾ ಇದುವರೆಗೂ ಮಗಳ ಮುಖವನ್ನು ರಿವೀಲ್ ಮಾಡಿರಲಿಲ್ಲ. ಇದೀಗ ಮೊದಲ ಬಾರಿಗೆ ಪ್ರಣಿತಾ ಫೋಟೋವನ್ನು ಹಂಚಿಕೊಂಡಿದ್ದಾರೆ.
ಮಗಳ ಜೊತೆಗಿರುವ ಫೋಟೋವನ್ನು ಶೇರ್ ಮಾಡಿದರು ಸಹ ಮುಖವನ್ನು ತೋರಿಸಿರಲಿಲ್ಲ. ಆದರೀಗ ಮೊದಲ ಬಾರಿಗೆ ಮಗಳ ಜೊತೆ ಮುದ್ದಾದ ಫೋಟೋಶೂಟ್ ಮಾಡಿಸಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮಗಳಿಗೆ ಮುತ್ತಿಡುತ್ತಿರುವ ಫೋಟೋವನ್ನು ಶೇರ್ ಮಾಡಿ 'ಆರ್ನಾ' ಎಂದು ಪರಿಚಯ ಮಾಡಿಕೊಟ್ಟಿದ್ದಾರೆ. ಹೌದು ಮಗಳಿಗೆ ಆರ್ನಾ ಎಂದು ನಾಮಕರಣ ಮಾಡಿದ್ದಾರೆ. ಪ್ರಣಿತಾ ಮಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಪ್ರಣಿತಾ ಮಗಳ ಮುದ್ದಾದ ಫೋಟೋಗೆ ಅನೇಕ ಲೈಕ್ಸ್ ಮತ್ತು ಕಾಮೆಂಟ್ ಹರಿದುಬರುತ್ತಿವೆ. ನಟಿ ಅಮೂಲ್ಯಾ ಕಾಮೆಂಟ್ ಮಾಡಿ ತುಂಬಾ ಕ್ಯೂಟ್ ಆಗಿದೆ ಎಂದು ಹೇಳಿದ್ದಾರೆ. ಅಭಿಮಾನಿಗಳು ಸಹ ಕಾಮೆಂಟ್ ಮಾಡಿ ಮುದ್ದಾಗಿದೆ ಎಂದು ಹೇಳುತ್ತಿದ್ದಾರೆ.
ಪೋರ್ಕಿ ಚಿತ್ರದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಮಿಂಚಿದರು. ಸ್ಟಾರ್‌ಗಳ ಜೊತೆ ತೆರೆಹಂಚಿಕೊಂಡರು. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮತ್ತು ಬಾಲಿವುಡ್‌ನಲ್ಲಿಯೂ ನಟಿಸಿ ಸೈ ಎನಿಸಿಕೊಂಡರು. ಚಿತ್ರರಂಗದಲ್ಲಿ ಡಿಮ್ಯಾಂಡ್ ಇರುವಾಗಲೇ 2021ರಲ್ಲಿ ಲಾಕ್‌ಡೌನ್‌ನಲ್ಲಿ ಉದ್ಯಮಿ ನಿತಿನ್ ರಾಜ್ ಜೊತೆ ಹಸೆಮಣೆ ಏರಿದ್ದರು.
ಪ್ರಣಿತಾ ಸಿನಿಮಾ ವಿಚಾರಕ್ಕೆ ಬರುವುದಾದರೆ ಕೊನೆಯದಾಗಿ ಭುಜ್ ದಿ ಪ್ರೈಡ್ ಆಫ್ ಇಂಡಿಯಾ ಸಿನಿಮಾದಲ್ಲಿ ಮಿಂಚಿದ್ದರು. ಈ ಸಿನಿಮಾದಲ್ಲಿ ಅಜಯ್ ದೇವಗನ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಕನ್ನಡದಲ್ಲಿ ಕೊನೆಯದಾಗಿ ಮಾಸ್ ಲೀಡರ್ ಸಿನಿಮಾದಲ್ಲಿ ಮಿಂಚಿದ್ದರು. ಸದ್ಯ ರಾಮನ ಅವತಾರ ಸಿನಿಮಾ ರಿಲೀಸ್ ಆಗಬೇಕಿದೆ.