MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • 2 ಸಂಪ್ರದಾಯದಂತೆ Rashmika Mandanna, Vijay Deverakonda ಮದುವೆ; ಉದಯಪುರಕ್ಕೆ ಬಂದಿಳಿದ ಪುರೋಹಿತರು

2 ಸಂಪ್ರದಾಯದಂತೆ Rashmika Mandanna, Vijay Deverakonda ಮದುವೆ; ಉದಯಪುರಕ್ಕೆ ಬಂದಿಳಿದ ಪುರೋಹಿತರು

Rashmika Mandanna And Vijay Devarakonda Wedding: ಸೌತ್ ಸಿನಿರಂಗದ ಸೆಲೆಬ್ರಿಟಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಈ ಜೋಡಿ ಅಕ್ಟೋಬರ್‌ನಲ್ಲಿ ಹೈದರಾಬಾದ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ವಿಷಯವನ್ನು ರಹಸ್ಯವಾಗಿಡಲಾಗಿತ್ತು. 

1 Min read
Author : Padmashree Bhat
Published : Feb 25 2026, 12:57 PM IST
Share this Photo Gallery
  • FB
  • TW
  • Linkdin
  • Whatsapp
16
ಉದಯಪುರದ ಅರಮನೆಯಲ್ಲಿ ಮದುವೆ
Image Credit : vijay deverakonda instagram

ಉದಯಪುರದ ಅರಮನೆಯಲ್ಲಿ ಮದುವೆ

ವರದಿಗಳ ಪ್ರಕಾರ, 2026ರ ಫೆಬ್ರವರಿ 26ರಂದು ಉದಯಪುರದ ಅರಮನೆಯಲ್ಲಿ ಇವರ ಮದುವೆ ನಡೆಯಲಿದೆ. ಸಮಾರಂಭದಲ್ಲಿ ಆಪ್ತರು, ಕುಟುಂಬಸ್ಥರು ಮಾತ್ರ ಭಾಗಿಯಾಗಲಿದ್ದು, ಬಳಿಕ ಹೈದರಾಬಾದ್‌ನಲ್ಲಿ ಚಿತ್ರರಂಗದ ಸ್ನೇಹಿತರಿಗಾಗಿ ಆರತಕ್ಷತೆ ನಡೆಯಲಿದೆ.

26
ಎರಡು ಸಂಪ್ರದಾಯದಲ್ಲಿ ಮದುವೆ
Image Credit : Facebook

ಎರಡು ಸಂಪ್ರದಾಯದಲ್ಲಿ ಮದುವೆ

ಹಳದಿ, ಮೆಹೆಂದಿ, ಸಂಗೀತ ಕಾರ್ಯಕ್ರಮಗಳು ನಡೆಯಲಿದೆ. ಇದಾದ ಬಳಿಕ ತೆಲುಗು ಹಾಗೂ ಕೊಡವ ಶೈಲಿಯಲ್ಲಿ ಮದುವೆ ನಡೆಯಲಿದೆ. ಈಗಾಗಲೇ ಮದುವೆ ನಡೆಸುವ ಪುರೋಹಿತರು ಉದಯಪುರಕ್ಕೆ ಕಾಲಿಟ್ಟಿದ್ದಾರೆ.

Related Articles

Related image1
ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್‌ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?
Related image2
ವಿಜಯ್​ ಎದುರೇ ರಶ್ಮಿಕಾ ಮಂದಣ್ಣಗೆ, ರಕ್ಷಿತ್​ ಶೆಟ್ಟಿ ಬಗ್ಗೆ ಕನ್ನಡದಲ್ಲಿ ಪ್ರಶ್ನೆ! ನಟಿ ಏನ್​ ಹೇಳಿದ್ರು? ವಿಡಿಯೋ ವೈರಲ್​
36
ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿ
Image Credit : Facebook

ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿ

ವಿಜಯ್ ಮತ್ತು ರಶ್ಮಿಕಾ ತಮ್ಮ ಮದುವೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಜೋಡಿ ಫೆಬ್ರವರಿ 26 ರಂದು ಮದುವೆಯಾಗಲಿದೆ ಎಂಬ ಸುದ್ದಿ ಈಗ ಹೊರಬಿದ್ದಿದೆ. ಪ್ರೇಮಿಗಳ ತಿಂಗಳಾದ ಫೆಬ್ರವರಿಯಲ್ಲಿ ಮದುವೆ ನಡೆಯುತ್ತಿರುವುದು ಮತ್ತಷ್ಟು ವಿಶೇಷವಾಗಿದೆ.

46
ಹೆರಿಟೇಜ್ ಪ್ರಾಪರ್ಟಿ
Image Credit : Facebook

ಹೆರಿಟೇಜ್ ಪ್ರಾಪರ್ಟಿ

ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, "ರಶ್ಮಿಕಾ ಮತ್ತು ವಿಜಯ್ ಮದುವೆ ಫೆಬ್ರವರಿ 26 ರಂದು ಉದಯಪುರದ ಅರಮನೆಯಲ್ಲಿ ನಡೆಯಲಿದೆ. ಅವರು ಹೆರಿಟೇಜ್ ಪ್ರಾಪರ್ಟಿಯೊಂದನ್ನು ಅಂತಿಮಗೊಳಿಸಿದ್ದಾರೆ. ನಿಶ್ಚಿತಾರ್ಥದಂತೆ ಮದುವೆಯನ್ನೂ ಖಾಸಗಿಯಾಗಿ ನಡೆಸಲು ಯೋಜಿಸಿದ್ದು, ಆಪ್ತರು ಮಾತ್ರ ಭಾಗವಹಿಸಲಿದ್ದಾರೆ. ಮಾರ್ಚ್‌ 3ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ.

56
'ದಿ ಗರ್ಲ್‌ಫ್ರೆಂಡ್'
Image Credit : rashmika_keralafc instagram

'ದಿ ಗರ್ಲ್‌ಫ್ರೆಂಡ್'

ಹೈದರಾಬಾದ್‌ನಲ್ಲಿ ನಡೆದ ರಶ್ಮಿಕಾಳ 'ದಿ ಗರ್ಲ್‌ಫ್ರೆಂಡ್' ಚಿತ್ರದ ಸಕ್ಸಸ್ ಇವೆಂಟ್‌ನಲ್ಲಿ ಈ ಜೋಡಿಯ ಪ್ರೀತಿಯ ಕ್ಷಣವೊಂದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಕಾರ್ಯಕ್ರಮದ ವೇಳೆ ವಿಜಯ್, ರಶ್ಮಿಕಾ ಕೈ ಹಿಡಿದು ಮುತ್ತಿಟ್ಟರು. ಈ ದೃಶ್ಯ ಎಲ್ಲರ ಗಮನ ಸೆಳೆದಿದೆ. ವಿಜಯ್ ಪ್ರೀತಿಯಿಂದ ನೋಡಿದಾಗ ರಶ್ಮಿಕಾ ನಾಚಿಕೊಂಡರು.

66
ವಯಸ್ಸಿನ ಅಂತರ
Image Credit : Rashmika Mandanna/Instagram

ವಯಸ್ಸಿನ ಅಂತರ

ಏಪ್ರಿಲ್ 5, 1996 ರಂದು ಜನಿಸಿದ ರಶ್ಮಿಕಾಗೆ 29 ವರ್ಷ. ಇನ್ನು ಮೇ 9, 1989 ರಂದು ಜನಿಸಿದ ವಿಜಯ್‌ಗೆ 36 ವರ್ಷ. ಈ ಇಬ್ಬರು ನಟರ ನಡುವೆ 7 ವರ್ಷಗಳ ವಯಸ್ಸಿನ ಅಂತರವಿದೆ. ರಶ್ಮಿಕಾ ಈ ಹಿಂದೆ ಜುಲೈ 2017 ರಲ್ಲಿ ನಟ ರಕ್ಷಿತ್ ಶೆಟ್ಟಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ಸೆಪ್ಟೆಂಬರ್ 2018 ರಲ್ಲಿ ಈ ನಿಶ್ಚಿತಾರ್ಥ ಮುರಿದುಬಿತ್ತು. ಬ್ರೇಕಪ್‌ಗೆ ಕಾರಣ ಏನೆಂಬುದು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ರಶ್ಮಿಕಾ ಮಂದಣ್ಣ
ವಿಜಯ್ ದೇವರಕೊಂಡ
ಸೆಲೆಬ್ರಿಟಿಗಳು
ಸ್ಯಾಂಡಲ್‌ವುಡ್

Latest Videos
Recommended Stories
Recommended image1
'ನಮ್ಮ ಹನುಮ ಕನ್ನಡಿಗ' : ರಿಷಬ್ ಮಾತಿಗೆ ಜಗ್ಗೇಶ್ ರೋಮಾಂಚನ, ಏನು ಹೇಳಿದ್ರು ನೋಡಿ!
Recommended image2
ಜೈ ಹನುಮಾನ್ ಮುಹೂರ್ತ ಬೆನ್ನಲ್ಲೇ ಮಂತ್ರಾಲಯಕ್ಕೆ ರಿಷಬ್ ಶೆಟ್ಟಿ ಭೇಟಿ, ರಾಯರ ಕುರಿತು ಸಿನಿಮಾ ಮಾಡ್ತಾರಾ ಡಿವೈನ್ ಸ್ಟಾರ್, ಹೇಳಿದ್ದೇನು?
Recommended image3
ವಿಜಯ್​ ಎದುರೇ ರಶ್ಮಿಕಾ ಮಂದಣ್ಣಗೆ, ರಕ್ಷಿತ್​ ಶೆಟ್ಟಿ ಬಗ್ಗೆ ಕನ್ನಡದಲ್ಲಿ ಪ್ರಶ್ನೆ! ನಟಿ ಏನ್​ ಹೇಳಿದ್ರು? ವಿಡಿಯೋ ವೈರಲ್​
Related Stories
Recommended image1
ರಶ್ಮಿಕಾ ಮಂದಣ್ಣ ಮದುವೆಗೆ ಸ್ಯಾಂಡಲ್‌ವುಡ್ ನಟ ನಟಿಯರಿಗಿದೆಯಾ ಆಮಂತ್ರಣ?
Recommended image2
ವಿಜಯ್​ ಎದುರೇ ರಶ್ಮಿಕಾ ಮಂದಣ್ಣಗೆ, ರಕ್ಷಿತ್​ ಶೆಟ್ಟಿ ಬಗ್ಗೆ ಕನ್ನಡದಲ್ಲಿ ಪ್ರಶ್ನೆ! ನಟಿ ಏನ್​ ಹೇಳಿದ್ರು? ವಿಡಿಯೋ ವೈರಲ್​
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved