Rashmika Mandanna: ಯೂಟ್ಯೂಬ್ ಚಾನೆಲ್ ಆರಂಭಿಸಿದ ಕೊಡಗಿನ ಕುವರಿ ರಶ್ಮಿಕಾ
ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸಕ್ರೀಯರಾಗಿರುವ ನಟಿಯರಲ್ಲಿ ನ್ಯಾಷನಲ್ ಕ್ರಶ್ ಎಂದೇ ಖ್ಯಾತರಾಗಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೂಡಾ ಒಬ್ಬರು. ಇದೀಗ ಅವರು ತಮ್ಮದೇ ಯೂಟ್ಯೂಬ್ ಚಾನೆಲ್‌ವೊಂದನ್ನು ಆರಂಭಿಸಿದ್ದಾರೆ.
ಇತ್ತೀಚೆಗೆ ಯೂಟ್ಯೂಬ್ ಎಂಬುದು ಎಲ್ಲರಿಗೂ ಹೊಸ ವೇದಿಕೆ ಆಗಿದೆ. ಜನಸಾಮಾನ್ಯರು ಕೂಡ ತಮ್ಮದೇ ಯೂಟ್ಯೂಬ್ ಚಾನೆಲ್ (YouTube Channel) ಆರಂಭಿಸಿ, ಅದರಿಂದ ಹಣ ಗಳಿಸುತ್ತಾರೆ. ಸೆಲೆಬ್ರಿಟಿಗಳು ಸಹ ಈ ವಿಚಾರದಲ್ಲಿ ಹಿಂದಿ ಬಿದ್ದಿಲ್ಲ.
ಅನೇಕ ನಟ-ನಟಿಯರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಅದರಿಂದಲೂ ಅವರು ಹಣ ಗಳಿಸುತ್ತಾರೆ. ಈಗ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಇದೇ ಹಾದಿಯಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.
ಇಷ್ಟು ದಿನ ಕೇವಲ ಇನ್ಸ್ಟಾಗ್ರಾಮ್, ಫೇಸ್ಬುಕ್, ಟ್ವಿಟರ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಆಗಿದ್ದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅವರು ಇದೀಗ ಯೂಟ್ಯೂಬ್ ಲೋಕಕ್ಕೆ ಕಾಲಿಟ್ಟಿದ್ದಾರೆ.
ಈ ಕುರಿತಾಗಿ Know More About Me, Maybe ಎನ್ನುವ ಶೀರ್ಷಿಕೆಯೊಂದಿಗೆ ಸಂಕ್ಷಿಪ್ತ ವಿಡಿಯೋವೊಂದನ್ನು ಹಂಚಿಕೊಂಡಿರುವ ನಟಿ ರಶ್ಮಿಕಾ, ಇದರಲ್ಲಿ ಅವರು ಕೆಲವು ವೈಯಕ್ತಿಕ ಪ್ರಶ್ನೆಗಳಿಗೆ ಉತ್ತರಿಸುವುದನ್ನು ಕಾಣಬಹುದಾಗಿದೆ.
ಮಾತ್ರವಲ್ಲದೇ ಮುಂಬರುವ ದಿನಗಳಲ್ಲಿ ಅವರ ಈ ಚಾನೆಲ್ ಹೇಗೆಲ್ಲಾ ಇರಬಹುದು ಎನ್ನುವುದರ ಕುರಿತಾದ ಸಂಕ್ಷಿಪ್ತ ಇಣುಕು ನೋಟವನ್ನು ನೀಡುತ್ತದೆ. ಸದ್ಯ ರಶ್ಮಿಕಾ ಯುಟ್ಯೂಬ್‌ಗೆ ಎಂಟ್ರಿ ನೀಡಿರುವ ಕುರಿತಾಗಿ ಅಭಿಮಾನಿಗಳು (Fans) ಸಂತಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಇನ್‌ಸ್ಟಾಗ್ರಾಮ್‌ನಲ್ಲಿ (Instagram) 29 ಕ್ಕೂ ಅಧಿಕ ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿರುವ ರಶ್ಮಿಕಾ ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸೋಶಿಯಲ್ ಮೀಡಿಯಾ (Social Media) ಫಾಲೋವರ್ಸ್ ಹೊಂದಿರುವ ನಟಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇನ್ನು ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಉಡುಗೆ ತೊಡುಗೆ, ಪ್ರವಾಸ, ಸಿನಿಮಾ, ಆಹಾರ ಕುರಿತಾದ ಅಪ್ಡೇಟ್‌ಗಳನ್ನು ರಶ್ಮಿಕಾ ಆಗಾಗ ನೀಡುತ್ತಲೇ ಇರುತ್ತಾರೆ. ಈಗ ಅವರು ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ 'ಮಿಷನ್ ಮಜ್ನು' ಚಿತ್ರದ ಮೂಲಕ ಮೊದಲ ಬಾರಿಗೆ ಬಾಲಿವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ.
'ಮಿಷನ್ ಮಜ್ನು' (Mission Majnu) ಚಿತ್ರವೂ ಜೂನ್ 10, 2022 ರಂದು ಬಿಡುಗಡೆಯಾಗಲಿದ್ದು, ಶಂತನು ಬಾಗ್ಚಿ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪರ್ಮೀತ್ ಸೇಠಿ, ಝಾಕಿರ್ ಹುಸೇನ್, ಶರೀಬ್ ಹಷ್ಮಿ ಸೇರಿದಂತೆ ಹಲವರು ನಟಿಸಿದ್ದಾರೆ.