ಆಡಂಬರ, ತೋರ್ಪಡಿಕೆ ಇಲ್ಲದೇ ನನ್ನ ಎಂಗೇಜ್‌ಮೆಂಟ್ ಆಯ್ತು: ಒಳ್ಳೆ ಹುಡುಗ ಪ್ರಥಮ್
ಇನ್‌ಸ್ಟಾಗ್ರಾಂನಲ್ಲಿ ಹುಡುಗಿ ಕೈ ಹಿಡಿದಿರುವ ಫೋಟೋ ಹಂಚಿಕೊಂಡ ಪ್ರಥಮ್. ಎಂಗೇಜ್‌ಮೆಂಟ್ ಆಯ್ತು ಎಂದ ನಟ...

ಬಿಗ್ ಬಾಸ್ ಸ್ಪರ್ಧಿ, ಸ್ಯಾಂಡಲ್‌ವುಡ್ ನಟ ಒಳ್ಳೆ ಹುಡುಗ ಪ್ರಥಮ್ ಎಂಗೇಜ್ ಆಗಿದ್ದಾರಂತೆ. ಇನ್‌ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
'ಒಂದು ಸುಂದರ ಕ್ಷಣ. ಇವತ್ತು ನನ್ನ ಎಂಗೇಜ್‌ಮೆಂಟ್ ಆಯ್ತು. ಯಾವ ಆಡಂಬರ, ಸಂಭ್ರಮ, ತೋರ್ಪಡಿಕೆ ಇಲ್ಲದೆ ಸರಳವಾಗಿ ನಡೆಯಿತ್ತು' ಎಂದು ಪ್ರಥಮ್ ಬರೆದು ಬರೆದುಕೊಂಡಿದ್ದಾರೆ.
'ಕುಟುಂಬದವರು ಮೆಚ್ಚಿದವರ ಜೊತೆಯಾದೆ. ನಾನು ತುಂಬಾ ಸರಳವಾಗಿಯೇ ಬದುಕಿದವನು. ಹಾಗೇ ಇರೋ ಇಷ್ಟ' ಎಂದು ಪ್ರಥಮ್ ಹೇಳಿದ್ದಾರೆ.
'ನನ್ನ ಎಂಗೇಜ್‌ಮೆಂಟ್ ಈ ದೇಶದ ದೊಡ್ಡ ಸುದ್ದಿಯಲ್ಲ ಆದರೆ ನನ್ನ ಇಷ್ಟ ಪಡುವ ಸ್ನೇಹಿತರು ಆತ್ಮೀಯರಿಗೆ ವಿಚಾರ ಹಂಚಿಕೊಳ್ಳೋಣ ಅನ್ನೋ ಕಾರಣಕ್ಕೆ ನಿಮ್ಗೆ ತಿಳಿಸಿದ್ದೇನೆ ಅಷ್ಟೆ'
'ಮದುವೆ ಎಷ್ಟು ಅದ್ಧೂರಿಯಾಗಿ ಆದೆ ಅನ್ನೋದಕ್ಕಿಂತ ಎಷ್ಟು ಚೆನ್ನಾಗಿ ಬದುಕು ಕಟ್ಟಿಕೊಂಡ್ವಿ ಅನ್ನೋದೇ ನಿಜವಾದ ಸಾಧನೆ'. ಪ್ರಥಮ್ ಕ್ಯಾಪ್ಶನ್ ಬರೆದುಕೊಳ್ಳುವ ಶೈಲಿನೇ ಡಿಫರೆಂಟ್.
'ನನಗೆ ಹಾಗಿರೋಕೆ ಇಷ್ಟ. ಹೀಗೆ ಇದ್ದು ಬಿಡ್ತೀನಿ. ಹರಸುವವರು ಅಲ್ಲಿಂದಲೇ ಹರಸಿ. ಅದೇ ಅಶೀರ್ವಾದ' ಎಂದು ಪ್ರಥಮ್ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ.