ಜಿಮ್ ತೆರೆಯಲು ಪ್ರಧಾನಿಗೆ ಪತ್ರ ಬರೆದ ಬಾಡಿ ಬಿಲ್ಡರ್ ರವಿ!
ಜಿಮ್ ಮತ್ತು ಫಿಟ್ನೆಸ್ ಸೆಂಟರ್‌ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಕರ್ನಾಟಕ ಜಿಮ್ ಮತ್ತು ಫಿಟ್ನೆಸ್ ಮಾಲೀಕರ ಸಂಘದ ಅಧ್ಯಕ್ಷರು ಮನವಿ ಮಾಡಿದ್ದಾರೆ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜಿಮ್ ಮತ್ತು ಫಿಟ್ನೆಸ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಬೇಕು
ರಾಜ್ಯ ಜಿಮ್ ಮತ್ತು ಫಿಟ್ನೆಸ್ ಮಾಲೀಕರ ಸಂಘದ ಅಧ್ಯಕ್ಷ ಎ.ವಿ. ರವಿ ಪ್ರಧಾನಮಂತ್ರಿಗೆ ಮನವಿ ಪತ್ರ ಬರೆದಿದ್ದಾರೆ
ಕೊರೋನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿಲಾಗುತ್ತದೆ.
ಜಿಮ್ ಮತ್ತು ಫಿಟ್ನೆಸ್ ಕೇಂದ್ರಗಳನ್ನು ನಡೆಸಲು ಅನುಮತಿ ನೀಡಬೇಕು ಎಂದು ರವಿ ಒತ್ತಾಯಿಸಿದ್ದಾರೆ.
ಹಲವು ಸಮುದಾಯಕ್ಕೆ ನೀಡಿದ ವಿಶೇಷ ಪ್ಯಾಕೇಜ್‌ನನ್ನು ಜಿಮ್ ಮಾಲೀಕರಿಗೂ ನೀಡುವಂತೆ ಮನವಿ ಮಾಡಿದ್ದಾರೆ.